Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಮೂಡಾ ಅವ್ಯವಹಾರ : ಸಿಎಂ ರಾಜೀನಾಮೆ..ಸಿಬಿಐ ತನಿಖೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆಗೆ ಸಿದ್ಧ..!

06:40 PM Jul 10, 2024 IST | suddionenews
Advertisement

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಮೂಡಾ ಅವ್ಯವಹಾರ ಕೂಡ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಅದರಲ್ಲೂ ವಿರೋಧ ಪಕ್ಷದ ನಾಯಕರು ಪ್ರತಿಭಟನೆಗೆ ಸಿದ್ಧರಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಹೆಸರಲ್ಲಿ ಸೈಟ್ ಗಳು ರಿಜಿಸ್ಟರ್ ಆಗಿರುವ ಕಾರಣ ಪ್ರತಿಪಕ್ಷಗಳು ವಿರೋಧಿಸಿವೆ. ಇದೀಗ ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿದ್ದಾರೆ.

Advertisement

ಖುಷಿ ಬಂದಂತೆ ನಿವೇಶನ ನೀಡಿದ ಹಿನ್ನಲೆಯಲ್ಲಿ ಬಿಜೆಪಿ ಈ ಹಗರಣವನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಇದೇ 12ರಂದು ನಾನು, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಡಿಸಿಎಂ ಡಾ.ಅಶ್ವತ್ಥ ನಾರಾಯಣ್, ಬಿಜೆಪಿ ಶಾಸಕರು , ಕಾರ್ಯಕರ್ತರು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ. ಬೆವರಿಗೆ ನಿವೇಶನ ಹಂಚಬೇಕು. ಈಗಾಗಲೇ ನಡೆದಿರುವ ನಿವೇಶನ ಹಂಚಿಕೆಯನ್ನು ರದ್ದು ಮಾಡಬೇಕು. ಸಿಎಂ ಪತ್ನಿ ಮೇಲೆ ಆರೋಪ ಇರುವ ಕಾರಣ ಮತ್ತೊಂದು ಎಸ್ಐಟಿ ಮಾಡಿ ತನಿಖೆ ನಡೆಸುವುದು ಸೂಕ್ತವಲ್ಲ. ಈ ಬಾರಿ ತನಿಖೆಯನ್ನು ಸಿಬಿಐಗೆ ಕೊಡಬೇಕು.

2004ರಲ್ಲಿ ಪಾರ್ವತಮ್ಮ ಅವರ ಅಣ್ಣನ ಜಮೀನು ಖರೀದಿ ಮಾಡಿದ್ದಾರೆ ಎಂದು ನಿನ್ನೆ ಶಾಸಕರು, ಸಿಎಂ ಆಪ್ತರು ಪ್ರೆಸ್ ಮೀಟ್ ಮಾಡಿ ತಿಳಿಸಿದ್ದಾರೆ. ಹಾಗಾದ್ರೆ ಮೂಡಾ ಅಧೀನದಲ್ಲಿದ್ದ ಜಮೀನನ್ನು ಮಲ್ಲಿಕಾರ್ಜುನ ಅವರು ಖರೀದಿ ಮಾಡಿದ್ದು ಹೇಗೆ..? 2009-10ರಲ್ಲಿಯೂ ಈ ಜಮೀನು ಮೂಡಾ ಆರ್ಟಿಸಿಯಲ್ಲಿ ನಮೂದು ಆಗಿದೆ. ಉಡುಗೊರೆ ನೀಡುವಾಗಲೂ ಇದು ಕೃಷಿ ಭೂಮಿ ಆಗಿರಲಿಲ್ಲ. ಈಗ ಹಗರಣ ಹೊರಗೆ ಬರುತ್ತಿದೆ. ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Advertisement

Advertisement
Tags :
bengaluruBJP ready to protestCBIchitradurgaCM resignsMuda scamsuddionesuddione newsಆಗ್ರಹಿಸಿಚಿತ್ರದುರ್ಗಬಿಜೆಪಿ ಪ್ರತಿಭಟನೆಬೆಂಗಳೂರುಮೂಡಾ ಅವ್ಯವಹಾರಸಿಎಂ ರಾಜೀನಾಮೆಸಿಬಿಐ ತನಿಖೆ‌ಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article