ಮೂಡಾ ಹಗರಣ: ಸಿದ್ದರಾಮಯ್ಯ ಬೆನ್ನಿಗೆ ನಿಂತ ಸುಪ್ರೀಂ ಕೋರ್ಟ್ ವಕೀಲರು ಯಾರು ? ಅವರ ಹಿನ್ನೆಲೆ ಏನು..?
ಬೆಂಗಳೂರು: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಹೈವೋಲ್ಟೇಜ್ ಬೆಳವಣಿಗೆ ನಡೆಯುತ್ತಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡುತ್ತಿದ್ದಂತೆ ಸಿದ್ದರಾಮಯ್ಯ ಅವರು ಕಾನೂನು ಹೋರಾಟಕ್ಕೆ ಸಜ್ಜಾಗಿದ್ದಾರೆ. ಪ್ರಾಸಿಕ್ಯೂಷನ್ ಗೆ ನೀಡಿರುವ ಆದೇಶ ರದ್ದುಗೊಳಿಸಲು ಹೈಕೋರ್ಟ್ ಮೊರೆ ಹೋಗಿದ್ದಾರೆ. ಇನ್ನು ಈ ಕಾನೂನು ಹೋರಾಟದಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ ಸುಪ್ರೀಂ ಕೋರ್ಟ್ ವಕೀಲರು ಬೆಂಬಲವಾಗಿ ನಿಂತಿದ್ದಾರೆ. ಸುಪ್ರೀಂಕೋರ್ಟ್ ನ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಹಾಗೂ ಕಪಿಲ್ ಸಿಬಲ್ ಅವರು ಸಿದ್ದರಾಮಯ್ಯ ಅವರ ಪರ ನಿಂತಿದ್ದು, ರಾಜ್ಯಪಾಲರ ಆದೇಶ ಪ್ರಶ್ನಿಸಿ, ಕೋರ್ಟ್ ನಲ್ಲಿ ವಾದ ಮಂಡಿಸಲಿದ್ದಾರೆ.
ಅಭಿಷೇಕ್ ಮನು ಸಿಂಘ್ವಿ ಅವರು ಭಾರತೀಯ ಹಿರಿಯ ವಕೀಲರು ಹಾಗೂ ರಾಜಕಾರಣಿಯೂ ಆಗಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯ ಕೂಡ.. ಇನ್ನು ಕಪಿಲ್ ಸಿಬಲ್ ಅವರು ಕೂಡ ಭಾರತೀಯ ವಕೀಲ ಹಾಗೂ ರಾಜಕಾರಣಿ. ಪ್ರಸ್ತುತ ಸುಪ್ರೀಂ ಕೋರ್ಟ್ ನ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನೇತೃತ್ವದಲ್ಲಿ ಸಚಿವರಾಗಿ ಹಲವಾರು ವರ್ಗಳಿಂದ ವಿವಿಧ ಖಾತೆಗಳನ್ನು ನಿರ್ವಹಿಸಿದ್ದಾರೆ. ಇನ್ನು ಭಾರತದ ಖ್ಯಾತ ವಕೀಲರಲ್ಲಿ ಇವರು ಒಬ್ಬರು.
ಇನ್ನು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ದೊಡ್ಡ ಹೋರಾಟವೇ ನಡೆಯುತ್ತದೆ. ಬೃಹತ್ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. ಸಿದ್ದರಾಮಯ್ಯ ಅವರು ಕಾನೂನು ಮೂಲಕ ಹೋರಾಟ ನಡೆಸಲು ಸಜ್ಜಾಗಿದ್ದು, ಕ್ಲೀನ್ ಚಿಟ್ ಸಿಕ್ಕರೆ ಈ 40 ವರ್ಷದ ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕೆಯ ಮಾರ್ಕ್ ಇರುವುದಿಲ್ಲ.