Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಮುನಿರತ್ನ ಕೇಸ್: ಎಂಸಿ ಸುಧಾಕರ್ ಸೇರಿದಂತೆ ಹಲವರಿಂದ ಸಿಎಂಗೆ ಮನವಿ : ನಿಯೋಗಕ್ಕೆ ಸಿಎಂ ಉತ್ತಮ ಸ್ಪಂದನೆ

02:30 PM Sep 16, 2024 IST | suddionenews
Advertisement

 

Advertisement

 

ಬೆಂಗಳೂರು: ಶಾಸಕ ಮುನಿರತ್ನ ಅವರನ್ನ ಪೊಲೀಸರು ಬಂಧಿಸಿದ್ದಾರೆ. ದಲಿತರು ಹಾಗೂ ಒಕ್ಕಲಿಗರ ವಿರುದ್ಧ ತೀರಾ ಕೆಟ್ಟದಾಗಿ ಮಾತನಾಡಿರುವ ಮುನಿರತ್ನ ವಿರುದ್ಧ ಸೂಕ್ತ ಕ್ರಮಕ್ಕೆ ಸಚಿವರು ಹಾಗೂ ಶಾಸಕರ ನಿಯೋಗ ಒತ್ತಾಯಿಸಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ಕಾವೇರಿ ನಿವಾಸದಲ್ಲಿ ಭೇಟಿಯಾಗಿದೆ. ಸಚಿವರಾದ ಚೆಲುವರಾಯಸ್ವಾಮಿ, ಎಂ.ಸಿ.ಸುಧಾಕರ್, ಶರತ್ ಬಚ್ಚೇಗೌಡ, ಮಾಗಡಿ ಬಾಲಕೃಷ್ಣ, ಮಾಲೂರು ಮಂಜೇಗೌಡ, ಕುಣಿಗಲ್ ರಂಗನಾಥ್ ಎಸ್.ರವಿ ಸೇರಿದಂತೆ ಇನ್ನಿತರರು ಜೊತೆಗೂಡಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

Advertisement

ಸಿಎಂ ಸಿದ್ದರಾಮಯ್ಯ ಅವರು ಕೂಡ ನಿಯೋಗದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮನವಿಯ ಬಳಿಕ ಮಾತನಾಡಿದ ಸಚಿವ ಎಂಸಿ ಸುಧಾಕರ್, ಕಾಂಗ್ರೆಸ್ ನ ಒಕ್ಕಲಿಗ ಸಮುದಾಯದ ಶಾಸಕರು, ಸಚಿವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದೇವೆ. ಮುನಿರತ್ನ ಅವರು ಮಾತನಾಡಿರುವ ಆಡಿಯೋ ಬಂದಿದೆ. ಅದರಲ್ಲಿ ಒಕ್ಕಲಿಗರ ಹಾಗೂ ದಲಿತರ ಕುರಿತಾಗಿ ಮಾತನಾಡಿರುವುದು ಖಂಡನೀಯ.

ಅವರ ಮಾತುಗಳು ಬಹಳ ನೋವುಂಟು ಮಾಡಿವೆ. ಸರ್ಕಾರ ಈಗಾಗಲೇ ಅವರನ್ನು ಬಂಧಿಸಿದೆ. ಈಗ ಒಂದು ಆಡಿಯೋ ಮಾತ್ರ ಬೆಳಕಿಗೆ ಬಂದಿದೆ. ಆದರೆ ಈ ಹಿಂದೆ ಹಲವು ಬಾರಿ ಈ ರೀತಿ ಮಾತನಾಡಿದ್ದಾರೆ ಎನ್ನಲಾಗಿದೆ. ಈಗಾಗಲೇ ಸಿಎಂ ಅವರಿಗೆ ಮನವಿ ಮಾಡಿಕೊಂಡಿದ್ದೇವೆ. ಮುನಿರತ್ನ ಅವರ ವಿರುದ್ಧ ಕಾನೂನು ರೀತಿಯಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಕೇಳಿಕೊಂಡಿದ್ದೇವೆ. ಸಿಎಂ ಸಿದ್ದರಾಮಯ್ಯ ಅವರು ಕೂಡ ಇದಕ್ಕೆ ಉತ್ತಮ ರೆಸ್ಪಾನ್ಸ್ ಮಾಡಿದ್ದಾರೆ. ಬಿಜೆಪಿ ಅವರು ಏನು ಬೇಕಾದರೂ ಮಾಡುತ್ತಾರೆ. ಈ ಹಿಂದೆ ದೇಶದ ಪ್ರಧಾನಿಗಳೇ ಆರ್ ಆರ್ ನಗರದಲ್ಲಿ ನಕಲಿ ಮತದ ಬಗ್ಗೆ ಮಾತನಾಡಿದ್ದರು. ಈಗ ಅವರು ಬಿಜೆಪಿಗೆ ಸೇರಿದ ಮೇಲೆ ಎಲ್ಲಾ ಆರೋಪಗಳಿಂದ ಮುಕ್ತವಾಗಿದ್ದಾರೆ ಎಂದಿದ್ದಾರೆ.

Advertisement
Tags :
appealbengaluruchitradurgaCMdelegationMC SudhakarMuniratna caserespondssuddionesuddione newsಎಂಸಿ ಸುಧಾಕರ್ಕೇಸ್ಚಿತ್ರದುರ್ಗನಿಯೋಗಬೆಂಗಳೂರುಮನವಿಮುನಿರತ್ನಸಿಎಂಸಿಎಂ ಸಿದ್ದರಾಮಯ್ಯಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article