ಮತ್ತೆ ನಂದಿನಿ ಹಾಲಿನ ದರ ಏರಿಕೆ ಸಾಧ್ಯತೆ : ಎಷ್ಟು ರೂಪಾಯಿ ಏರಿಕೆಗೆ ಬೇಡಿಕೆ..?
ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದೆ. ಹೊಸ ವರ್ಷದ ಆರಂಭದಲ್ಲಿಯೇ ಹಾಲಿನ ದರ ಏರಿಕೆ ಸಾಧ್ಯತೆ ಇದೆ. ಇದಕ್ಕೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳಿ ಚಿಂತನೆ ನಡೆಸಿದೆ. ಆರ್ಥಿಕ ನಷ್ಟ, ನಿರ್ವಹಣೆಯ ಕಾರಣ ನೀಡಿ, ದರ ಏರಿಕೆಗೆ ಚಿಂತನೆ ನಡೆಸಲಾಗುತ್ತಿದೆ.
ಈಗಾಗಲೇ ಹಾಲಿನ ದರ ಏರಿಕೆಯ ಬಗ್ಗೆ ಚಿಂತನೆ ನಡೆಸಿದ್ದಾರೆ. ಸದ್ಯ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಹಿನ್ನೆಲೆ, ಸಿಎಂ ಸಿದ್ದರಾಮಯ್ಯ ಬಳಿ ಚರ್ಚೆ ನಡೆಸಿಲ್ಲ. ಅಧಿವೇಶನ ಮುಗಿದ ಬಳಿಕ ಈ ಸಂಬಂಧ ಚರ್ಚೆ ನಡೆಸಲಾಗುತ್ತದೆ ಎಂದು ಕೆಎಂಎಫ್ ಅಧಿಕಾರಿಗಳು ನಿರ್ಧರಿಸಿದ್ದಾರೆ. ಈ ಹಿಂದೆ ಕೂಡ ಕೆಎಂಎಫ್ ಅಧಿಕಾರಿಗಳು ಹಾಲಿನ ದರ ಹೆಚ್ಚಳಕ್ಕೆ ಪ್ರಸ್ತಾಪ ಸಲ್ಲಿಕೆ ಮಾಡಿದ್ದರು.
ಪ್ರತಿ ಲೀಟರ್ ಹಾಲಿಗೆ ಎರಡು ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಯಾಕಂದ್ರೆ ಕಳೆದ ಬಾರಿ ಪ್ರಸ್ತಾವನೆ ಸಲ್ಲಿಸಿದಾಗ ಐದು ರೂಪಾಯಿ ಏರಿಕೆಗೆ ಸಲ್ಲಿಕೆ ಮಾಡಲಾಗಿತ್ತು. ಆದರೆ ಮೂರು ರೂಪಾಯಿ ಏರಿಕೆ ಮಾಡಿದ್ದರು. ಹೀಗಾಗಿ ಈ ಬಾರಿ ಮತ್ತೆ ಬೆಲೆ ಏರಿಕೆ ಮಾಡಿ ಎಂದು ಮನವಿ ಮಾಡಲು ಹೊರಟಿದೆ.