ನಂದಿನಿ ಹಾಲಿನ ದರ ಹೆಚ್ಚಳ ಮಾಡ್ತೇವೆ.. ಆ ಹಣ ರೈತರಿಗೆ ಹೋಗುತ್ತೆ : ಸಿದ್ದರಾಮಯ್ಯ ಘೋಷಣೆ
ರಾಮನಗರ: ಕಳೆದ ಕೆಲ ತಿಂಗಳ ಹಿಂದಷ್ಟೇ ನಂದಿನಿ ಹಾಲನ್ನು ಹೆಚ್ಚು ಮಾಡಿ, ಹಾಲಿನ ದರವನ್ನು ಹೆಚ್ಚಳ ಮಾಡಲಾಗಿತ್ತು. ಆದರೆ ಈಗ ಮತ್ತೆ ನಂದಿನಿ ದರವನ್ನು ಹೆಚ್ಚಳ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಮಾಗಡಿ ಪಟ್ಟಣದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ ಅವರು ಮಾತನಾಡಿ, ಕರ್ನಾಟಕದಲ್ಲಿ ನಂದಿನಿ ಹಾಲಿನ ದರವನ್ನು ಹೆಚ್ಚಳ ಮಾಡುತ್ತೇವೆ. ಹೆಚ್ಚಳ ಮಾಡಿದ ದರ ನೇರವಾಗಿ ರೈತರಿಗೆ ಹೋಗಬೇಕು. ನಂದಿನ ಹಾಲಿನ ದರ ಹೆಚ್ಚಳ ಮಾಡುವುದರ ಬಗ್ಗೆ ಸಭೆ ಕರೆದು, ಚರ್ಚೆ ಮಾಡಿ ದರ ಹೆಚ್ಚಳ ಮಾಡೋಣಾ ಎಂದಿದ್ದಾರೆ.
ಇದೇ ವೇಳೆ ಜೆಡಿಎಸ್ ಬಗ್ಗೆ ಹರಿಹಾಯ್ದಿರುವ ಸಿಎಂ ಸಿದ್ದರಾಮಯ್ಯ ಅವರು, ನೀವೆಲ್ಲಾ ರೈತರ ಮಕ್ಕಳಿದ್ದೀರ. ಮೂರು ರೂಪಾಯಿ ಹೆಚ್ಚಳ ಮಾಡಿದರೆ ಅಥವಾ ಏನೇ ಹೆಚ್ಚು ಮಾಡಿದರೂ ಲಬ್ಬೋ ಲಬ್ಬೋ ಅಂತ ಹೇಳುತ್ತಾರೆ. ನಾವೂ ರೈತರ ಮಕ್ಕಳು ರೈತರ ಮಕ್ಕಳು ಅಂತ ಹೇಳುತ್ತಾರೆ. ಆದರೆ ರೈತರ ಮಕ್ಕಳಿಗೆ ನೀವೇನಾದ್ರೂ ಕೊಟ್ಟಿದ್ದೀರಾ..? ಏನೂ ಮಾಡದೆ ನಾವೂ ರೈತರ ಮಕ್ಕಳು ಅಂತ ಹೇಳುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ನಾನು ಈ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಕೆಂಪೇಗೌಡರ ಜಯಂತಿ ಮಾಡಿದ್ದು ನಮ್ಮಸರ್ಕಾರ. ಬಹಳಷ್ಟು ಒಕ್ಕಲಿಗ ನಾಯಕರು ಎನಿಸಿಕೊಂಡವರು ಮಾಡಲೇ ಇಲ್ಲ. ಈ ಹಿಂದೆ ಸಿಎಂ ಆಗಿದ್ದಾಗ ಕೆಂಪೇಗೌಡ ಜಯಂತಿ ಆಚರಣೆಯ ಸೂಚನೆ ನೀಡಲಾಗಿತ್ತು. ಮಾಗಡಿ ಸರ್ವತೋಮುಖ ಅಭಿವೃದ್ಧಿಗೆ ಸಹಕಾರ ನೀಡುತ್ತೇವೆ ಎಂದು ಹೇಳುವ ಮೂಲಕ ಕುಮಾರಸ್ವಾಮಿ ಅವರಿಗೂ ತಿರುಗೇಟು ನೀಡಿದ್ದಾರೆ.