ನರೇಂದ್ರ ಮೋದಿಯವರು 3 ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಆ ಕಡತದ ಮೇಲೆ ಮೊದಲ ಸಹಿ.....!
ಸುದ್ದಿಒನ್, ನವದೆಹಲಿ, ಜೂ.10 : ನರೇಂದ್ರ ಮೋದಿ ಅವರು ಭಾನುವಾರ ರಾತ್ರಿ ರಾಷ್ಟ್ರಪತಿ ಭವನದಲ್ಲಿ ಮೋದಿ ಅವರು ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮೂರನೇ ಬಾರಿಗೆ ಪ್ರಧಾನಿಯಾಗಿ ಮೋದಿಯವರು ಮೊದಲ ಸಹಿ ಯಾವ ಕಡತದ ಮೇಲೆ ಮಾಡಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ.
ಮೋದಿ ಮೂರನೇ ಬಾರಿಗೆ ಪ್ರಧಾನಿಯಾದ ನಂತರ ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚು ಒತ್ತು ನೀಡುತ್ತಿದ್ದು, ರೈತರ ಪಿಎಂ ಕಿಸಾನ ಯೋಜನೆಯ ಕಡತಕ್ಕೆ ಮೊದಲ ಸಹಿ ಮಾಡಿದ್ದಾರೆ. ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣ ಬಿಡುಗಡೆಗೆ ಸಹಿ ಮಾಡಿದ್ದಾರೆ. ರೈತರ ಅಭ್ಯುದಯಕ್ಕೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದ ಅವರು, ಅಧಿಕಾರ ವಹಿಸಿಕೊಂಡ ಕೂಡಲೇ ರೈತರಿಗೆ ಸಂಬಂಧಿಸಿದ ಮೊದಲ ಕಡತಕ್ಕೆ ಸಹಿ ಹಾಕಿದರು. ಮುಂದಿನ ಐದು ವರ್ಷಗಳಲ್ಲಿ ರೈತರಿಗಾಗಿ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಪಿಎಂ ಕಿಸಾನ್ ಯೋಜನೆಯ ಭಾಗವಾಗಿ ದೇಶದ 9.3 ಕೋಟಿ ರೈತರ ಖಾತೆಗಳಿಗೆ ಎರಡು ಸಾವಿರದಂತೆ 20 ಸಾವಿರ ಕೋಟಿ ರೂಪಾಯಿ ಹಣವನ್ನು ಜಮಾ ಮಾಡಲಾಗುವುದು. ಮೂರನೇ ಬಾರಿಗೆ ಸರ್ಕಾರ ರಚಿಸಿದ ನಂತರ ಮೋದಿ ಇಂದು ಮೊದಲ ಸಂಪುಟ ಸಭೆ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ಈ ಸಭೆ ನಡೆಯಲಿದೆ. ಆದರೆ ಅಷ್ಟರೊಳಗೆ ಸಚಿವರಿಗೆ ಇಲಾಖೆಗಳ ಹಂಚಿಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಮೋದಿ ನೇತೃತ್ವದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ 71 ಸಚಿವರು ಭಾಗವಹಿಸಲಿದ್ದಾರೆ. ಸರ್ಕಾರದ ಗುರಿಗಳು ಮತ್ತು ನೀತಿಗಳ ಕುರಿತು ಮೋದಿ ಅವರು ನೂತನ ಸಚಿವರಿಗೆ ನಿರ್ದೇಶನ ನೀಡಲಿದ್ದಾರೆ. ಮೋದಿ ಅಧಿಕಾರ ವಹಿಸಿಕೊಂಡ ಬಳಿಕ 120 ದಿನಗಳ ಚಟುವಟಿಕೆಗೆ ಸಿದ್ಧತೆ ಮಾಡಿಕೊಂಡಿರುವಂತೆ ಕಾಣುತ್ತಿದೆ.