For the best experience, open
https://m.suddione.com
on your mobile browser.
Advertisement

ಹಂಪಿ ಉತ್ಸವದಲ್ಲಿ 'ಶೇಕ್ ಇಟ್ ಪುಷ್ಪವತಿ' ಅಂತ ಕುಣಿಯಲಿದ್ದಾರೆ ನಿಮಿಕಾ

10:40 PM Feb 02, 2024 IST | suddionenews
ಹಂಪಿ ಉತ್ಸವದಲ್ಲಿ  ಶೇಕ್ ಇಟ್ ಪುಷ್ಪವತಿ  ಅಂತ ಕುಣಿಯಲಿದ್ದಾರೆ ನಿಮಿಕಾ
Advertisement

Advertisement
Advertisement

ಇದೇ ತಿಂಗಳ 4ರಂದು ಮೂರು ದಿನಗಳ ಹಂಪಿ ಉತ್ಸವಕ್ಕೆ ಚಾಲನೆ ಸಿಗಲಿದೆ. ಹಂಪಿ ಉತ್ಸವದಲ್ಲಿ ನಾನಾ ರೀತಿಯ ಕಲಾ ಪ್ರದರ್ಶನಗಳು ನಡೆಯಲಿವೆ. ಈ ಬಾರಿ ಹಂಪಿ ಉತ್ಸವಕ್ಕೆ ಬರುವ ಜನರಿಗೆ ನೃತ್ಯದ ಮೂಲಕ ಮನರಂಜನೆ ನೀಡಲು ಬರುತ್ತಿದ್ದಾರೆ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್ ನೃತ್ಯ ಪ್ರದರ್ಶನ ನೀಡಲಿದ್ದಾರೆ.

Advertisement
Advertisement

ವಿಶೇಷವೆಂದರೆ, ಈ ಹಾಡೇ ಅವರನ್ನು ಹಂಪಿ ಉತ್ಸವದಲ್ಲಿ ಭಾಗಿಯಾಗಿ ನೃತ್ಯ ಪ್ರದರ್ಶನ ನೀಡುವ ಅವಕಾಶ ಕಲ್ಪಿಸಿದೆ. ಈಗಾಗಲೇ ಅದಕ್ಕೆ ಬೇಕಾದ ತಯಾರಿಗಳನ್ನು ಮಾಡಿಕೊಂಡಿರುವ ನಿಮಿಕಾ, ಆ ಕ್ಷಣಕ್ಕಾಗಿ ಕಾಯುತ್ತಿದ್ದಾರೆ. ಹಂಪಿ ಎಂದರೇನೇ ಅದೇನೋ ಆಕರ್ಷಣೆ. ನಿಮಿಕಾ ರತ್ನಾಕರ್ ಪಾಲಿಗೂ ಅಂಥಾದ್ದೊಂದು ಸೆಳೆತವಿದೆಯಂತೆ. ಆದರೆ ಈ ವರೆಗೂ ಅಲ್ಲಿಗೆ ಭೇಟಿ ಕೊಡುವ ಅವಕಾಶ ಕೂಡಿ ಬಂದಿರಲಿಲ್ಲ. ಕೆಲ ಹಾಡುಗಳ ಮೂಲಕವಷ್ಟೇ ಹಂಪಿಯನ್ನು ಕಣ್ತುಂಬಿಕೊಂಡಿದ್ದ ತಮ್ಮ ಪಾಲಿಗೆ ಆ ಪರಿಸರದಲ್ಲಿ ಬೆರೆಯುವ ಅವಕಾಶ ಸಿಕ್ಕಿದ್ಚದು ಖುಷಿ ಕೊಟ್ಟಿದೆ ಎಂಬುದು ನಿಮಿಕಾ ಮನದ ಮಾತು. ಈ ಹಿಂದೆ ನಿಮಿಕಾ ದಸರಾ ಉತ್ಸವದಲ್ಲಿಯೂ ಭಾಗಿಯಾಗಿದ್ದರು. ಆ ಸಂದರ್ಭದಲ್ಲಿ ಅವರ ಪೋಷಕರು ಹಾಜರಿದ್ದು ಖುಷಿಗೊಂಡಿದ್ದರು. ಈ ಬಾರಿಯೂ ಪೋಷಕರೊಂದಿಗೆ ಹಂಪಿ ಉತ್ಸವದಲ್ಲಿ ಭಾಗಿಯಾಗೋ ಇಂಗಿತ ನಿಮಿಕಾರದ್ದು.

ಅಷ್ಟಕ್ಕೂ ಶೇಕ್ ಇಟ್ ಪುಷ್ಪವತಿ ಎಂಬ ಹಾಡು ನಿಮಿಕಾಗೆ ಒಂದಿಡೀ ಕರ್ನಾಟಕಕ್ಕೆ ಪ್ರದಕ್ಷಿಣೆ ಹಾಕುವ ಅವಕಾಶ ಕಲ್ಪಿಸುತ್ತಿದೆ. ಈಗಾಗಲೇ ಅವರು ರಾಜ್ಯದ ನಾನಾ ಪ್ರದೇಶಗಳಲ್ಲಿ ಈ ನೃತ್ಯ ಪ್ರದರ್ಶನ ನೀಡಿದ್ದಾರೆ. ಇದೀಗ ಹಂಪಿ ಉತ್ಸವದಲ್ಲಿ ಪಾಲ್ಗೊಳ್ಳುತ್ತಿರೋದು ಅವರ ಪಾಲಿಗೆ ವಿಶೇಷ ಘಳಿಗೆ.

Advertisement
Tags :
Advertisement