For the best experience, open
https://m.suddione.com
on your mobile browser.
Advertisement

ಬಿಜೆಪಿ ನಾಯಕರನ್ನಷ್ಟೇ ಅಲ್ಲ, ಕುಮಾರಸ್ವಾಮಿಯಿಂದ ಪಕ್ಷೇತರ ಅಭ್ಯರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಯತ್ನ

12:24 PM Jan 10, 2024 IST | suddionenews
ಬಿಜೆಪಿ ನಾಯಕರನ್ನಷ್ಟೇ ಅಲ್ಲ  ಕುಮಾರಸ್ವಾಮಿಯಿಂದ ಪಕ್ಷೇತರ ಅಭ್ಯರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಯತ್ನ
Advertisement

Advertisement
Advertisement

ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಪ್ರಧಾನಿ ಮೋದಿ ಭೇಟಿಯಾಗಿ ಬಂದ ಬೆನ್ನಲ್ಲೇ ಕುಮಾರಸ್ವಾಮಿ ಮನೆ ಈಗ ಶಕ್ತಿ ಕೇಂದ್ರವಾಗಿ ಮಾರ್ಪಟ್ಟಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಜೆಡಿಎಸ್ ಹಾಗೂ ಬಿಜೆಪಿ ನಾಯಕರು ವೈರತ್ವ ಮರೆತು ಒಂದಾದಂತೆ ಕಾಣುತ್ತಿದ್ದಾರೆ. ಅದರಲ್ಲೂ ಸಮನ್ವಯ ಸಾಧಿಸಲು ಬಿಜೆಪಿ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಅವರಂತು ಎಲ್ಲಾ ನಾಯಕರನ್ನು ಮನೆಗೆ ಕರೆಸಿ ಮಾತನಾಡುತ್ತಿದ್ದಾರೆ. ರಾಜಕೀಯ ಚರ್ಚೆಯ ಜೊತೆಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಕಡೆಗೆ ಗಮನ ಹರಿಸಬೇಕೆಂಬ ಸಂದೇಶವನ್ನು ನೀಡುತ್ತಿದ್ದಾರೆ ಎನ್ನಲಾಗಿದೆ.

Advertisement

ಅಷ್ಟೇ ಅಲ್ಲ ಕಳೆದ ಹತ್ತು ದಿನಗಳಿಂದ ರಾಜಕೀಯ ಬದ್ಧ ವೈರಿಗಳಾಗಿಯೇ ಗುರುತಿಸಿಕೊಂಡಿದ್ದ ಸಿಪಿ ಯೋಗೀಶ್ವರ್, ಸಿಟಿ ರವಿ, ಸೋಮಣ್ಣ ಅವರು ಕುಮಾರಸ್ವಾಮಿ ಹಾಗೂ ದೇವೇಗೌಡರನ್ನು ಭೇಟಿಯಾಗಿದ್ದಾರೆ. ಭೇಟಿ ವೇಳೆ ಚುನಾವಣೆಯ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಪಕ್ಷೇತರ ಅಭ್ಯರ್ಥಿಯಾಗಿ ನಿಂತು ಗೆದ್ದಿದ್ದ ಜನಾರ್ದನ ರೆಡ್ಡಿ ಅವರು ಕೂಡ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ಸಾರೆ ಎನ್ನಲಾಗಿದೆ.

Advertisement

ಬಿಜೆಪಿ ನಾಯಕರು ಇಷ್ಟು ಆಕ್ಟೀವ್ ಆಗಿದ್ದಾರೋ ಇಲ್ಲವೋ ಆದರೆ ಕುಮಾರಸ್ವಾಮಿ ಅವರು ಜೆಡಿಎಸ್ ನಾಯಕರಷ್ಟೇ ಅಲ್ಲ ಬಿಜೆಪಿಯ ನಾಯಕರು, ಪಕ್ಷೇತರ ಶಾಸಕರನ್ನು ಕುಮಾರಸ್ವಾಮಿ ಅವರು ಕರೆದು ಮಾತನಾಡುವ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ ಕುಮಾರಸ್ವಾಮಿ ಅವರು ಈ ಬಾರಿಯ ಲೋಕಸಭಾ ಚುನಾವಣೆಯನ್ನು ಬಹಳಷ್ಟು ಗಂಭೀರವಾಗಿ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಮೋದಿಯವರನ್ನು ಭೇಟಿ ಮಾಡಿ, ಕ್ಷೇತ್ರಗಳ ಹಂಚಿಕೆಯಾದ ಮೇಲ ಇನ್ನಷ್ಟು ಆಕ್ಟೀವ್ ಆಗಿದ್ದಾರೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸವನ್ನು ಮಾಡುತ್ತಿದ್ದಾರೆ‌.

Advertisement
Tags :
Advertisement