Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಯುವನಿಧಿಗೆ ನಾಳೆ ಶಿವಮೊಗ್ಗದಿಂದ ಅಧಿಕೃತ ಚಾಲನೆ : ಫಲಾನುಭವಿಗಳು ಅರ್ಜಿ ಹಾಕುವುದು ಹೇಗೆ..?

09:24 PM Jan 11, 2024 IST | suddionenews
Advertisement

ಶಿವಮೊಗ್ಗ: ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಈಗಾಗಲೇ ಎಲ್ಲಾ ಗ್ಯಾರಂಟಿಗಳನ್ನು ಜಾರಿಗೆ ತರಲಾಗಿದೆ. ಅದರಲ್ಲಿ ಮಹತ್ವಾಕಾಂಕ್ಷೆಯ ಯುವನಿಧಿ ಯೋಜನೆಗೆ ನಾಳೆ ಚಾಲನೆ ಸಿಗಲಿದೆ. ವಿವೇಕಾನಂದರ ಜಯಂತಿ ಹಿನ್ನೆಲೆ ನಾಳೆ ಶಿವಮೊಗ್ಗದಲ್ಲಿ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ.

Advertisement

 

ನಗರದ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಿದ್ದು, ಬೃಹತ್ ಮಟ್ಟದಲ್ಲಿಯೇ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ರಾಜ್ಯದ ನಾನಾ ಮೂಲೆಯಿಂದ ಯುವಕರು ಈ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ನಗದು ನೀಡುವ ಮೂಲಕ ಚಾಲನೆ ನೀಡಲಾಗುತ್ತದೆ.

Advertisement

 

ಈ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕಳೆದ ಮೂರು ದಿನಗಳಿಂದ ಕಾರ್ಯಕ್ರಮದ ಉಸ್ತುವಾರಿ ವಹಿಸಿಕೊಂಡಿರುವ ಸಚಿವ ಶರಣ ಪ್ರಕಾಶ್ ಜಿಲ್ಲೆಯಲ್ಲಿಯೇ ವಾಸ್ತವ್ಯ ಹೂಡಿ, ಎಲ್ಲಾ ತರಹದ ವ್ಯವಸ್ಥೆಯನ್ನು ಮಾಡುತ್ತಿದ್ದಾರೆ. ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಉಡುಪಿ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಿಂದ ಯುವಕರು ಕಾರ್ತಕ್ರಮದಲ್ಲಿ ಹಾಜರಿರಲಿದ್ದಾರೆ. ಕಾರ್ಯಕ್ರಮಕ್ಕೆ ಬರುವವರನ್ನು ಕರೆತರಲು ಖಾಸಗಿ ಬಸ್, ಸರ್ಕಾರಿ ಬಸ್ ಗಳ ವ್ಯವಸ್ಥೆಯನ್ನು ಮಾಡಲಾಗಿದೆ.

 

ಪದವೀಧರರಿಗೆ ಪ್ರತಿ ತಿಂಗಳು 3,000 ರೂಪಾಯಿ ಹಾಗೂ ಡಿಪ್ಲೋಮಾ ಪದವೀಧರರಿಗೆ 1,500 ರೂಪಾಯಿ ನೀಡಲಾಗುತ್ತದೆ. ಈ ಉದ್ಯೋಗಭತ್ಯೆಯನ್ನು ಎರಡು ವರ್ಷಗಳ ವರೆಗೆ ಮಾತ್ರ ನೀಡಲಾಗುತ್ತದೆ. 2 ವರ್ಷಕ್ಕೂ ಮುನ್ನ ಫಲಾನುಭವಿಗೆ ಉದ್ಯೋಗ ಸಿಕ್ಕಲ್ಲಿ ಯೋಜನೆಯಡಿ ಬರುವ ಹಣ ನಿಲ್ಲಿಸಲಾಗುತ್ತದೆ. ನಾಳೆಯಿಂದ ಯುವನಿಧಿ ಯೋಜನೆಗೆ ಯುವಕರು ಅರ್ಜಿ ಸಲ್ಲಿಸಬಹುದು. ಸೇವಾ ಕೇಂದ್ರಗಳಲ್ಲಿ ಅಥವಾ ತಮ್ಮದೇ ಮೊಬೈಲ್ ಮೂಲಕವೂ ಅರ್ಜಿ ಸಲ್ಲಿಸಬಹುದು.

Advertisement
Tags :
have to applyOfficial launchShivamoogaYouth FundYuva nidhiಅಧಿಕೃತ ಚಾಲನೆಅರ್ಜಿ ಆಹ್ವಾನಯುವನಿಧಿಶಿವಮೊಗ್ಗ
Advertisement
Next Article