Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಮತ್ತೊಮ್ಮೆ ಲೋಕಸಭೆಯ ಸ್ಪೀಕರ್ ಆಗಿ ಓಂ ಬಿರ್ಲಾ...!

01:24 PM Jun 25, 2024 IST | suddionenews
Advertisement

ಸುದ್ದಿಒನ್, ನವದೆಹಲಿ, ಜೂನ್.25 :  18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಿದೆ. ಜುಲೈ 3ರವರೆಗೆ ನಡೆಯಲಿರುವ ಈ ಅಧಿವೇಶನದ ಎರಡನೇ ದಿನ ನೂತನ ಸಂಸದರು ಪ್ರಮಾಣ ವಚನ ಸ್ವೀಕರಿಸಿದರು. ಸಭೆಯ ಮೊದಲ ದಿನವೇ 262 ಸಂಸದರು ಪ್ರಮಾಣ ವಚನ ಸ್ವೀಕರಿಸಿದರು. ರಾಹುಲ್ ಗಾಂಧಿ, ಅಖಿಲೇಶ್ ಯಾದವ್ ಮತ್ತು ಡಿಂಪಲ್ ಯಾದವ್ ಸೇರಿದಂತೆ ಇನ್ನುಳಿದ 270 ಸಂಸದರು ಇಂದು ಮಧ್ಯಾಹ್ನ 3 ರಿಂದ 4 ರವರೆಗೆ ಲೋಕಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Advertisement

ಇದೇ ವೇಳೆ ಲೋಕಸಭೆ ಸ್ಪೀಕರ್ ಆಯ್ಕೆಗೆ ಇಂದು ಹೆಸರು ಅಂತಿಮವಾಗಲಿದೆ. ಓಂ ಬಿರ್ಲಾ ಅವರು ಮತ್ತೊಮ್ಮೆ ಲೋಕಸಭೆಯ ಸ್ಪೀಕರ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಇಂದು ಬೆಳಗ್ಗೆ 11.30ಕ್ಕೆ ಲೋಕಸಭೆ ಸೆಕ್ರೆಟರಿಯೇಟ್‌ನಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಅಮಿತ್ ಶಾ, ಜೆಪಿ ನಡ್ಡಾ ಮತ್ತು ಓಂ ಬಿರ್ಲಾ ಅವರು ಸಂಸತ್ ಭವನದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದರು. ಓಂ ಬಿರ್ಲಾ ಅವರು ಎನ್‌ಡಿಎ ನಾಯಕರೊಂದಿಗೆ ಸ್ಪೀಕರ್ ಹುದ್ದೆಗೆ ನಾಮಪತ್ರ ಸಲ್ಲಿಸಿದರು.

Advertisement

ಮತ್ತೊಂದೆಡೆ ಬಿಜೆಪಿ ಉಪಸಭಾಪತಿ ಸ್ಥಾನವನ್ನು ಪ್ರತಿಪಕ್ಷಗಳಿಗೆ ನೀಡುವ ಸಾಧ್ಯತೆ ಇದೆ ಎಂದು ವಿಶ್ವಸನೀಯ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಎನ್‌ಡಿಎ ಸ್ಪೀಕರ್ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆಗೆ ಎಲ್ಲಾ ನಾಯಕರು ಹಾಜರಿದ್ದರು.

Advertisement
Tags :
bengaluruchitradurgalok sabhaNewdelhiOm Birlaspeakersuddionesuddione newsಓಂ ಬಿರ್ಲಾಚಿತ್ರದುರ್ಗನವದೆಹಲಿಬೆಂಗಳೂರುಲೋಕಸಭೆ ಸ್ಪೀಕರ್ಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article