ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ : ಎ1 ಆರೋಪಿಯಾಗೆ ಜಾಮೀನು ಸಿಗುವುದು ಅಷ್ಟು ಸುಲಭವಾ..?
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ಪವಿತ್ರಾ ಗೌಡ ಜೈಲಿನಿಂದ ಹೊರಗೆ ಬರುವ ಎಲ್ಲಾ ಪ್ರಯತ್ನವನ್ನು ಮಾಡುತ್ತಿದ್ದಾರೆ. ಈಗಾಗಲೇ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಕೂಡ ಜಾಮೀನು ಅರ್ಜಿ ಸಲ್ಲಿಕೆ ಮಾಡಿಲ್ಲ. ಬದಲಿಗೆ ಪೊಲೀಸರ ಚಾರ್ಜ್ ಶೀಟ್ ಸಲ್ಲಿಕೆಗಾಗಿ ಕಾಯುತ್ತಿದ್ದಾರೆ. ಹೀಗಿರುವಾಗ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆದಿದೆ. ಆದರೆ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ. ರೇಣುಕಾಸ್ವಾಮಿ ಕೊಲೆ ಆರೋಪಿಗಳ ಪೈಕಿ ಪವಿತ್ರಾ ಗೌಡ ಮೊದಲನೇಯದಾಗಿ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಅರ್ಜಿಯನ್ನು ಪರಿಶೀಲನೆ ಮಾಡಿದ ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ.
ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಪವಿತ್ರಾ ಗೌಡ ಅವರೇ ಮೊದಲ ಆರೋಪಿಯಾಗಿದ್ದಾರೆ. ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ ಮೇಲಷ್ಟೇ ಪವಿತ್ರಾ ಗೌಡ ಆರೋಪಿಯ ಯಾವ ಸ್ಥಾನದಲ್ಲಿದ್ದಾರೆ ಎಂಬುದು ಗೊತ್ತಾಗಲಿದೆ. ಯಾಕಂದ್ರೆ ರೇಣುಕಾಸ್ವಾಮಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಚಿತ್ರಹಿಂಸೆ ನೀಡಿ ಹತ್ಯೆ ಮಾಡಲಾಗಿದೆ. ಇಬ್ಬರು ಪ್ರತ್ಯಕ್ಷದರ್ಶಿಗಳು ಪವಿತ್ರಾ ಗೌಡರ ಹೆಸರನ್ನು ಹೇಳಿದ್ದಾರೆ. ಪ್ರಕರಣದ ವೇಳೆ ಆರೋಪಿಗಳ ಬಟ್ಟೆಯಲ್ಲಿ ಡಿಎನ್ಎ ಕಂಡು ಬಂದಿದೆ. ಕೃತ್ಯಕ್ಕೆ ಬಳಸಿದ್ದ ಕಾರಿನ ಸಿಸಿಟಿವಿ ದೃಶ್ಯವು ಸಿಕ್ಕಿದೆ. ಹೀಗಾಗಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡುವ ತನಕ ಜಾಮೀನು ಸಿಗುವುದು ಕಷ್ಟ ಅನ್ನಿಸುತ್ತೆ. ಅಷ್ಟೇ ಅಲ್ಲ ಆರೋಪದ ಪ್ರಮಾಣವನ್ನು ನೋಡಿಕೊಂಡು ಶಿಕ್ಷೆಯ ಪ್ರಮಾಣ, ಜಾಮೀನು ಸಿಗುವ ಸಾಧ್ಯತೆಯ ಬಗ್ಗೆ ಕೋರ್ಟ್ ನಿರ್ಧಾರ ಮಾಡುತ್ತದೆ.