Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಪೆಟ್ರೋಲ್-ಡಿಸೇಲ್ ದರ ಏರಿಕೆ : ಇಂದು ಬಿಜೆಪಿ ನಾಯಕರಿಂದ ಪ್ರತಿಭಟನೆ

12:16 PM Jun 17, 2024 IST | suddionenews
Advertisement

ಬೆಂಗಳೂರು: ರಾಜ್ಯದಲ್ಲಿ ಮೊದಲೇ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಇಳಿಕೆಯಾಗುತ್ತಿಲ್ಲ ಅಂತ ವಾಹನ ಸವಾರರು ಹಿಡಿ ಶಾಪ ಹಾಕುತ್ತಿದ್ದರು. ಈ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಏರಿಕೆ ಮಾಡಿದೆ. ಇದು ವಿಪಕ್ಷಗಳನ್ನ ಕೆರಳಿಸಿದ್ದು, ಇಂದು ಬೃಹತ್ ಪ್ರತಿಭಟನೆಗೆ ಸಜ್ಜಾಗಿವೆ.

Advertisement

ರಾಜ್ಯದ ನಾನಾ ಕಡೆಯಲ್ಲಿ ಪ್ರತಿಭಟನೆಗೆ ಪ್ಲ್ಯಾನ್ ಮಾಡಿದ್ದಾರೆ. ಮುಖ್ಯವಾವಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ‌ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ವಿಭಿನ್ನ ರೀತಿಯಲ್ಲಿ ಪ್ರತಿಭಟಿಸಲು ಸಿದ್ದವಾಗಿದ್ದು, ಎತ್ತಿನ ಗಾಡಿ, ಸೈಕಲ್ ಮೂಲಕ ಪ್ರತಿಭಟನೆ ನಡೆಸಲಿದ್ದಾರೆ. ದರ ಇಳಿಸುವವರೆಗೂ ಹಂತ ಹಂತವಾಗಿ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ಬಿಜೆಪಿ ನೀಡಿದೆ.

ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಬಗ್ಗೆಯೇ ಸಾಕಷ್ಟು ಪ್ರಚಾರ ತೆಗೆದುಕೊಂಡಿದೆ. ಗ್ಯಾರಂಟಿ ಬಗ್ಗೆ ಸಾಧನರ ಎಂದು ಬಿಂಬಿಸಿಕೊಂಡಿದೆ. ಮತ್ತೊಂದು ಕಡೆ ರಾಜ್ಯದ ಜನರಿಗೆ ಬರೆ ಎಳೆಯುತ್ತಿದೆ. ಲೋಕಸಭಾ ಚುನಾವಣೆಯ ಬಳಿಕ ಪೆಟ್ರೋಲ್-ಡಿಸೇಲ್ ತೆರಿಗೆ ಹೆಚ್ಚಿಸಿದೆ. ಸರ್ಕಾರ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ. ಬರಗಾಲದಲ್ಲಿ ರಾಜ್ಯ ಸರ್ಕಾರದ ಈ ಕೆಟ್ಟ ನಡವಳಿಕೆಯನ್ನು ಬಿಜೆಪಿ ಗಂಭೀರವಾಗಿ ತೆಗೆದುಕೊಂಡಿದ್ದು, ಬರುವ ಶುಕ್ರವಾರ ಕೂಡ ಮತ್ತೊಂದು ಹೋರಾಟ ರೂಪಿಸುತ್ತೇವೆ. ನೆರೆಯ ರಾಜ್ಯಗಳಲ್ಲಿ ನಮ್ಮ ರಾಜ್ಯಕ್ಕಿಂತ ದರ ಹೆಚ್ಚಿದೆ ಎಂದು ಸಿಎಂ ಹೇಳಿದ್ದಾರೆ‌. ಕೂಡಲೇ ಈ ಆದೇಶವನ್ನು ಕೈಬಿಟ್ಟು ಹಿಂದೆ ಸರಿಯಬೇಕು ಎಂದು ನಾನು ಆಗ್ರಹಿಸುತ್ತೇನೆ ಎಂದಿದ್ದಾರೆ.

Advertisement

Advertisement
Tags :
bengalurubjp protestchitradurgapetrol diesel pricePetrol-diesel price hikeProtest by BJP leaderssuddionesuddione newsಚಿತ್ರದುರ್ಗಪೆಟ್ರೋಲ್-ಡಿಸೇಲ್ ದರ ಏರಿಕೆಬಿಜೆಪಿ ನಾಯಕರಿಂದ ಪ್ರತಿಭಟನೆಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article