ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. 'ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ.
'ರೇವಣ್ಣ ವಿರುದ್ಧ ಆರೋಪ ಮಾಡಿರುವುದು ಯಾಕೆ ಎಂಬ ಸತ್ಯ ಜನರಿಗೆ ಗೊತ್ತು. ರೇವಣ್ಣ ಪ್ರಕರಣದ ಬಗ್ಗೆ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಅದರ ಬಗ್ಗೆ ನಾನು ಪ್ರತಿಕ್ರಿಯೆ ಕೊಡಲ್ಲ. ಪ್ರಜ್ವಲ್ ರೇವಣ್ಣ ಹೊರಗಡೆ ಹೋಗಿದ್ದಾರೆ. ಈ ಘಟನೆ ಬಗ್ಗೆ ಈಗಾಗಲೇ ಕುಟುಂಬದ ಪರವಾಗಿ ಕುಮಾರಸ್ವಾಮಿ ಮಾತನಾಡಿದ್ದಾರೆ. ಕ್ರಮ ತೆಗೆದುಕೊಳ್ಳುವುದು ಸರ್ಕಾರದ ಜವಬ್ದಾರಿ ಎಂದು ಹೇಳಿದ್ದಾರೆ. ಇದರಲ್ಲಿ ಅನೇಕ ಜನರ ಹೆಸರಿದೆ. ಆದರೆ ಅವರೆಲ್ಲರ ಹೆಸರನ್ನು ನಾನೀಗ ಹೇಳುವುದಕ್ಕೆ ಆಗಲ್ಲ.
ಅನ್ಯಾಯಕ್ಕೆ ಒಳಗಾಗಿರುವ ಸಂತ್ರಸ್ತೆಯರಿಗೆ ಪರಿಹಾರ ನೀಡಬೇಕು. ಈ ಎಲ್ಲಾ ವಿಚಾರಗಳನ್ನು ಕುಮಾರಸ್ವಾಮಿ ಬಿಡಿಸಿ ಹೇಳಿದ್ದಾರೆ. ಇದು ಯಾವ ರೀತಿ ನಡೆಯಿತು ಎಂದು ನಾನು ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ಎಂದು ರೇವಣ್ಣ ಅವರು ಜೈಲಿಗೆ ಹೋಗಿದ್ದರ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಇದೇ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ವಕೀಲರಿಗೆ ದೇವರಾಜೇಗೌಡ ಅವರಿಗೆ 100 ಕೋಟಿ ಆಫರ್ ಮಾಡಿದ್ದರ ಬಗ್ಗೆ ಕೇಳಿದಾಗ, ಈ ಬಗ್ಗೆ ಮಾತನಾಡಲು ಇಷ್ಟಪಡುವುದಿಲ್ಲ ಎಂದಿದ್ದಾರೆ. ದೇವರಾಜೇಗೌಡರು ಏನು ಹೇಳಿದ್ದಾರೆಂದು ಮಾಧ್ಯಮದಲ್ಲಿ ನೋಡಿದ್ದೇನೆ. ಎಲ್ಲದಕ್ಕೂ ಕುಮಾರಸ್ವಾಮಿ ಉತ್ತರ ಕೊಟ್ಟಿದ್ದಾರೆ. ಯಾವುದೇ ವಿಚಾರ ಬಂದರೂ ಹೋರಾಟ ಮಾಡುವ ಛಲ ಬಿಡುವುದಿಲ್ಲ. ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಕಡೆ ಪ್ರಚಾರ ಮಾಡಿದ್ದೇನೆ. ಫಲಿತಾಂಶ ಬಂದ ಬಳಿಕ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದಿದ್ದಾರೆ.