ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!
ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ ತಂಡ ಎಲ್ಲಾ ತರದಲ್ಲೂ ತನಿಖೆ ನಡೆಸಿ, ಪ್ರಜ್ವಲ್ ರೇವಣ್ಣ ಅವರಿಗೂ ನೋಟೀಸ್ ನೀಡಿದೆ. ಇದೀಗ ಆ ಸಂಬಂಧ ಪ್ರಜ್ವಲ್ ರೇವಣ್ಣ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ.
'ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ ನಾನು ನನ್ನ ವಕೀಲರ ಮೂಲಕ ಸಿಐಡಿ ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಗೆ ಬರಲಿದೆ' ಎಂದು ಪೋಸ್ಟ್ ಹಾಕಿದ್ದಾರೆ. ಆದರೆ ಈ ಪೋಸ್ಟ್ ಗೆ ಕಮೆಂಟ್ ಸೆಕ್ಷನ್ ಆಫ್ ಮಾಡಿಟ್ಟಿದ್ದಾರೆ.
ಹೆಣ್ಣು ಮಕ್ಕಳ ಜೀವನ ಇದರಿಂದ ಹಾಳಾಯ್ತಲ್ಲ ಎಂದು ಜನ ಆಕ್ರೋಶಗೊಂಡಿದ್ದಾರೆ. ಇದರ ನಡುವೆ ಕಮೆಂಟ್ ಬಾಕ್ಸ್ ಆಫ್ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ. ಇದರ ನಡುವೆ ಅವರ ವಕೀಲರಯ ಎಸ್ಐಟಿ ಅಧಿಕಾರಿಗಳಿಗೆ ಮನವಿ ಮಾಡಿದ್ದು, ನನ್ನ ಕಕ್ಷಿದಾರ ಪ್ರಜ್ವಲ್ ರೇವಣ್ಣ ಬೆಂಗಳೂರಿನಿಂದ ಹಿರಗಡೆ ಪ್ರವಾಸದಲ್ಲಿದ್ದು, ಅವರಿಗೆ ನೋಟೀಸ್ ಬಗ್ಗೆ ವಿಷಯ ತಿಳಿಸಲಾಗಿದೆ. ನನ್ನ ಕಕ್ಷಿದಾರ ಬೆಂಗಳೂರಿಗೆ ಬಂದು ತಮ್ಮ ಮುಂದೆ ನೋಟೀಸ್ ಸೂಚನೆಯಂತೆ ಹಾಜರಾಗುವುದಕ್ಕೆ ಏಳು ದಿನಗಳ ಕಾಲವಕಾಶ ಕೊಟ್ಟು ನಿಮ್ಮ ಮುಂದೆ ಹಾಜರಾಗಲು ಮತ್ತೊಂದು ದಿನಾಂಕವನ್ನು ನೀಡಬೇಕೆಂದು ಮನವಿ ಮಾಡುತ್ತೇವೆ ಎಂದು ಪ್ರಜ್ವಲ್ ರೇವಣ್ಣ ಪರ ವಕೀಕರು ಮನವಿ ಮಾಡಿದ್ದಾರೆ.