ಪ್ರಜ್ವಲ್ ರೇವಣ್ಣ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ..!
ಬೆಂಗಳೂರು: ಹಾಸನದ ಅಶ್ಲೀಲ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಎಸ್ಐಟಿ ಅಧಿಕಾರಿಗಳ ವಶದಲ್ಲಿಯೇ ಇದ್ದಾರೆ. ಇಂದಿಗೆ ಅವರ ನ್ಯಾಯಾಂಗ ಬಂಧನದ ಅವಧಿ ಮುಗಿದಿತ್ತು. ಹೀಗಾಗಿ ಮತ್ತೆ ನ್ಯಾಯಾಲಯಕ್ಕೆ ಒಪ್ಪಿಸಲಾಗಿತ್ತು. ನ್ಯಾಯಾಲಯದಲ್ಲಿ ವಿಚಾರಣೆ ನಡೆದ ಬಳಿಕ ಮತ್ತೆ ಕಸ್ಟಡಿಗೆ ನೀಡಲಾಗಿದೆ. ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ.
ಕೋರ್ಟ್ ನಿಂದ ಆದೇಶ ಬಂದೊಡನೆ ಎಸ್ಐಟಿ ಅಧಿಕಾರಿಗಳು ನೇರವಾಗಿ ಪ್ರಜ್ವಲ್ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋಗಿದ್ದಾರೆ. ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದ ಎಸ್ಐಟಿ ಅಧಿಕಾರಿಗಳು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಕೇಳಿಕೊಂಡಿದ್ದರು. ಕೋರ್ಟ್ ಮತ್ತೆ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ನಿಮಗೆ ತೊಂದರೆ ಕೊಟ್ರಾ ಎಂಬ ಪ್ರಶ್ನೆ ಕೇಳಿದೆ. ಅದಕ್ಕೆ ಪ್ರಜ್ವಲ್ ರೇವಣ್ಣ ಅವರು ಮತ್ತೆ ಇಲ್ಲ ಎಂದೇ ಉತ್ತರಿಸಿದ್ದಾರೆ.
ವಾದ-ಪ್ರತಿವಾದ ಆಲಿಸಿದ ಕೋರ್ಟ್ ಪ್ರಜ್ವಲ್ ರೇವಣ್ಣ ಅವರನ್ನು ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ. ಇವತ್ತು ಕೋರ್ಟ್ ಗೆ ಹಾಜರುಪಡಿಸುವ ಮುನ್ನ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಸವನಗುಡಿಯ ಮನೆಗೆ ಕರೆದುಕೊಂಡು ಹೋಗಿದ್ದರು. ಮನರಯಲಗಲಿ ಸ್ಥಳ ಮಹಜರು ಮಾಡಿಕೊಂಡರು. ಅಲ್ಲಿಯೇ ಪ್ರಜ್ವಲ್ ರೇವಣ್ಣ ಅವರ ಹೇಳಿಕೆಯನ್ನು ಪಡೆದುಕೊಂಡು, ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.
ರೇವಣ್ಣ ಅವರನ್ನು ಮಹಿಳೆಯ ಕಿಡ್ನ್ಯಾಪ್ ಕೇಸಲ್ಲಿ ಬಂಧಿಸಿದಾಗಲೂ ಬಸವನಗುಎಇಯ ಮನೆಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ಸ್ಥಳ ಮಹಜರು ಮಾಡಿದ್ದರು. ಇದೀಗ ಪ್ರಜ್ವಲ್ ರೇವಣ್ಣ ಅವರನ್ನು ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ್ದಾರೆ.