Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಪ್ರತಾಪ್ ಸಿಂಹ ಮಹಾನ್ ಕೋಮುವಾದಿ : ಸಿಎಂ ಸಿದ್ದರಾಮಯ್ಯ

01:20 PM Nov 04, 2024 IST | suddionenews
Advertisement

ಬೆಂಗಳೂರು, ನವೆಂಬರ್. 04 : ಮಾಜಿ ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿಗಳು ಸಂಪೂರ್ಣ ಮುಸ್ಲಿಂ ಆಗಿದ್ದಾರೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅವರೊಬ್ಬ ಮಹಾನ್ ಕೋಮುವಾದಿ. ಕೋಮುವಾದಿಗಳಿಂದ ಇನ್ನೇನು ನಿರೀಕ್ಷೆ ಮಾಡಲಾಗುತ್ತದೆ ಎಂದರು. ಅವರಿಗೆ ಸಂವಿಧಾನ, ಪ್ರಜಾಪ್ರಭುತ್ವದ ಬಗ್ಗೆ ಗೌರವವಿಲ್ಲ ಕೋಮುವಾದ ಮಾಡುವುದೇ ಅವರ ಕಸುಬು. ಸಮಾಜವನ್ನು ಜಾತಿ, ಧರ್ಮದ ಹೆಸರಿನಲ್ಲಿ ಒಡೆಯುವುದೇ ಅವರ ರಾಜಕಾರಣ. ಕೋಮುವಾದದಲ್ಲಿ ತೊಡಗಿ ರಾಜಕೀಯದಲ್ಲಿ ಬದುಕಲು ಹಾಗು ಮತ ಪಡೆಯಲು ಪ್ರಯತ್ನ ಮಾಡುತ್ತಾರೆ ಎಂದರು.

Advertisement

ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಗ್ಯಾರಂಟಿ ಯೋಜನೆಗಳು ಅಭಿವೃದ್ಧಿಯಲ್ಲವೇ ?
ಅಭಿವೃದ್ಧಿ ಬಗ್ಗೆ ಚರ್ಚೆ ಯಾರೊಬ್ಬರೂ ಮಾಡುತ್ತಿಲ್ಲ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ ಗ್ಯಾರಂಟಿ ಯೋಜನೆಗಳು ಅಭಿವೃದ್ಧಿಯಲ್ಲವೇ? ಹಿಂದೆ ಸಿಎಂ ಆಗಿದ್ದಾಗ 165 ಭರವಸೆ ಕೊಟ್ಟು 158 ಭರವಸೆಗಳನ್ನು ಈಡೇರಿಸಿದೆವು..ಅವು ಅಭಿವೃದ್ಧಿಯಲ್ಲವೆ ಎಂದು ಪ್ರಶ್ನಿಸಿದರು 3 ಲಕ್ಷದ 71 ಸಾವಿರ ಕೋಟಿ ರೂಪಾಯಿಗಳಲ್ಲಿ 52 ಸಾವಿರ ಕೋಟಿ ಗ್ಯಾರಂಟಿಗಳಿಗೆ ವೆಚ್ಚ ಮಾಡುತ್ತಿದ್ದೇವೆ. ಸುಮಾರು 60 ಸಾವಿರ ಕೋಟಿ ಅಭಿವೃದ್ಧಿಗೆ ವೆಚ್ಚ ಮಾಡುತ್ತಿದ್ದೇವೆ. ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ರಸ್ತೆ, ಸೇತುವೆ, ನಿರ್ಮಾಣಕ್ಕಾಗಿ ವೆಚ್ಚವಾಗುತ್ತಿದೆ ಇವೆಲ್ಲ ಅಭಿವೃದ್ದಿಯಲ್ಲವೇ ಎಂದರು.

Advertisement

Advertisement
Tags :
bengaluruchitradurgaCM SiddaramaiahPratap simhasuddionesuddione newsಚಿತ್ರದುರ್ಗಪ್ರತಾಪ್ ಸಿಂಹಬೆಂಗಳೂರುಮಹಾನ್ ಕೋಮುವಾದಿಸಿಎಂ ಸಿದ್ದರಾಮಯ್ಯಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article