ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?
ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ ಮಳೆಯ ಸುಳಿವೇ ಇಲ್ಲದಿರುವುದು ಜನ ಸುಸ್ತಾಗಿ ಹೋಗುತ್ತಿದ್ದಾರೆ. ಆದರೆ ಹವಮಾನ ಇಲಾಖೆ ಕೊಂಚ ರಿಲ್ಯಾಕ್ಸ್ ಆಗುವಂತೆ ಸುದ್ದಿಯೊಂದನ್ನು ನೀಡಿದೆ.
ಇಂದಿನಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ. ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಮೈಸೂರು, ಹಾಸನ, ರಾಮನಗರ, ಮಂಡ್ಯ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವೆಡೆ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ದಿನೇ ದಿನೇ ಉಷ್ಣಾಂಶವೂ ಏರಿಕೆಯಾಗುತ್ತಿದೆ. ಹೀಗಾಗಿ ಬಿಸಿಲಿನಿಂದ ತಪ್ಪಿಸಿಕೊಳ್ಳುವುದಕ್ಕೆ ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಆದರೂ ಶೆಕೆ ತಡೆಯಲಾಗುತ್ತಿಲ್ಲ. ಸದ್ಯ ಬೆಂಗಳೂರಿಗರಿಗೂ ಮೇ 4ರಿಂದ ವರುಣ ಕರುಣೆ ತೋರುವ ಸಾಧ್ಯತೆ ಇದೆ. ಹವಮಾನ ಇಲಾಖೆ ಈ ಸಂಬಂಧ ಮಾಹಿತಿ ನೀಡಿದೆ. ಮೇ 4ರಿಂದ ಮೇ 15ರವರೆಗೂ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.