Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಡಿಕೆ ಶಿವಕುಮಾರ್ ಅವರನ್ನು ನಾನು ಸುಮ್ಮನೆ ಬಿಡುವುದಿಲ್ಲ : ನೇರಾ ನೇರ ವಾಗ್ದಾಳಿ ನಡೆಸಿದ ರಮೇಶ್ ಜಾರಕಿಹೊಳಿ

04:36 PM Dec 11, 2023 IST | suddionenews
Advertisement

ಬೆಳಗಾವಿ: ಅಧಿವೇಶನಕ್ಕೆ ಆಗಮಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನೇರಾ ನೇರ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವುದೇ ಕಾತಣಕ್ಕೂ ಡಿಕೆ ಶಿವಕುಮಾರ್ ಪ್ರಕರಣವನ್ನು ನಾನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

Advertisement

ಚಳಿಗಾಲದ ಅಧಿವೇಶನಕ್ಕೆ ಬಂದ ರಮೇಶ್ ಜಾರಕಿಹೊಳಿ, ಡಿಕೆ ಶಿವಕುಮಾರ್ ಅವರ ಸಿಬಿಐ ಪ್ರಕರಣವನ್ನು ನಾನು ಸುಮ್ಮನೆ ಬಿಡುವುದಿಲ್ಲ. ಡಿಕೆ ಶಿವಕುಮಾರ್ ಅವರ ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ಇಷ್ಟು ದಿನ ಸಿದ್ದರಾಮಯ್ಯ ಒಳ್ಳೆಯ ಸಿಎಂ ಆಗಿದ್ದರು. ಆದರೆ ಡಿಕೆ ಶಿವಕುಮಾರ್ ಅವರ ಪ್ರಕರಣವನ್ನು ಕೈಬಿಡುವ ನಿರ್ಣಯವನ್ನು ತೆಗೆದುಕೊಂಡು ಅವರ ಗೌರವಕ್ಕೆ ಅವರೇ ಧಕ್ಕೆ ತಂದುಕೊಂಡಿದ್ದಾರೆ. ಇದು ನಿಜಕ್ಕೂ ಆಘಾತಕಾರಿ ವಿಚಾರವಾಗಿದೆ ಎಂದು ಸಿಬಿಐ ಪ್ರಕರಣ ವಾಪಾಸ್ ಪಡೆದ ಸಂಬಂಧ ಅಸಮಾಧಾನ ಹೊರ ಹಾಕಿದ್ದಾರೆ.

ಈ ಸಂಬಂಧ ನಾನು ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇನೆ. ಡಿಕೆಶಿ ಸಿಬಿಐ ಪ್ರಕರಣ ವಾಪಾಸ್ ಪಡೆದ ನಿರ್ಧಾರದ ಬಗ್ಗೆ ಸದನದಲ್ಲಿ ತನಿಖೆಯಾಗಬೇಕು. ಬಿಜೆಪಿ ಹೈಕಮಾಂಡ್ ಇಷ್ಟು ದಿನ ಪಂಚರಾಜ್ಯ ಚುನಾವಣೆಗಳಲ್ಲಿ ಬ್ಯುಸಿಯಾಗಿದ್ದರು. ಆದಷ್ಡು ಬೇಗ ಹೈಕಮಾಂಡ್ ಭೇಟಿಯಾಗಿ, ವಿಚಾರ ತಿಳಿಸುತ್ತೇನೆ. ಡಿಕೆಶಿ ಸಿಬಿಐ ಪ್ರಕರಣದ ಬಗ್ಗೆ ಚರ್ಚೆ ಮಾಡುತ್ತೇನೆ. ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಈ ಪ್ರಕರಣವನ್ನು ಸುಮ್ಮನೆ ಬಿಡವುದಿಲ್ಲ ಎಂದು ರಮೇಶ್ ಜಾರಕಿಹೊಳಿ ಆಕ್ರೋಶ ಹೊರ ಹಾಕಿದ್ದಾರೆ.

Advertisement

Advertisement
Tags :
belagaviDcm dk shivakumarfeaturedramesh jarakiholisuddioneಡಿಕೆ ಶಿವಕುಮಾರ್ಬೆಳಗಾವಿರಮೇಶ್ ಜಾರಕಿಹೊಳಿಸುದ್ದಿಒನ್
Advertisement
Next Article