Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಸೆನ್ಸಾರ್ ಮಂಡಳಿಯಲ್ಲಿ ಯು-ಎ ಸರ್ಟಿಫಿಕೇಟ್ ಪಡೆದ ರವಿಕೆ ಪ್ರಸಂಗ'

11:57 AM Feb 01, 2024 IST | suddionenews
Advertisement

ಮಂಗಳೂರು: ರವಿಕೆ ಪ್ರಸಂಗ ಸಿನಿಮಾ ಮೂಲಕ ಗೀತಾ ಭಾರತೀ ಮೋಡಿ ಮಾಡಲು ಬರುತ್ತಿದ್ದಾರೆ. ಬ್ರಹ್ಮಗಂಟು ಸೀರಿಯಲ್ ಆದ್ಮೇಲೆ ಗೀತಾ ಅವರನ್ನ ಎಲ್ಲರೂ ಮಿಸ್ ಮಾಡಿಕೊಳ್ಳುತ್ತಾ ಇದ್ದರು. ಇದೀಗ ಬೇಳ್ಳಿ ತೆರೆ ಮೇಲೆ ಮನೆ ಮಗಳು ಗುಂಡಮ್ಮನನ್ನು ನೋಡಲು ಕಾತುರರಾಗಿದ್ದಾರೆ. ಈಗಾಗಲೇ ರವಿಕೆ ಪ್ರಸಂಗ ಸಿನಿಮಾ ಸೆನ್ಸಾರ್ ಮಂಡಳಿಯಿಂದಾನು ಶಬ್ಬಾಶ್ ಎನಿಸಿಕೊಂಡಿದೆ.

Advertisement

ದೃಷ್ಟಿ ಮೀಡಿಯಾ ಪ್ರೊಡಕ್ಷನ್ ನಡಿ ತಯಾರಾದ ಸಂತೋಷ್ ಕೊಡೆಂಕೇರಿ ನಿರ್ದೇಶನದ ರವಿಕೆ ಪ್ರಸಂಗ ಸಿನಿಮಾವನ್ನು ಸೆನ್ಸಾರ್ ಮಂಡಳಿ ವೀಕ್ಷಿಸಿ ಯು-ಎ ಸರ್ಟಿಫಿಕೇಟ್ ನೀಡಿದೆ.
ರವಿಕೆ ಪ್ರಸಂಗ ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆಗೊಂಡು ಜನರಿಂದ ಮೆಚ್ಚುಗೆ ಗಳಿಸಿದೆ. ಸಿನಿಮಾ ಫೆಬ್ರವರಿ 16 ರಂದು ರಾಜ್ಯಾದ್ಯಂತ ತೆರೆಕಾಣಲಿದೆ.

Advertisement

ಕನ್ನಡದಲ್ಲಿ ಭಿನ್ನ-ವಿಭಿನ್ನ ಟೈಟಲ್‌ಗಳನ್ನಿಟ್ಟುಕೊಂಡು ಸಿನಿಮಾಗಳು ಬರುತ್ತಿವೆ. ಈ ಸಾಲಿಗೆ ಸೇರುವ ಸಿನಿಮಾ 'ರವಿಕೆ ಪ್ರಸಂಗ'. ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಸಿನಿಮಾದ ಟೀಸ‌ರ್ ಮತ್ತು ಟ್ರೈಲರ್ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ರವಿಕೆ ಅಂದರೆ ಬ್ಲೌಸನ್ನು ಪ್ರಮುಖವಾಗಿ ಇಟ್ಟುಕೊಂಡು ಕೌಟುಂಬಿಕ ಕಥಾ ಹಂದರದಿಂದ ಹಾಸ್ಯಭರಿತ ಉತ್ತಮ ಸಂದೇಶವನ್ನು ಸಮಾಜಕ್ಕೆ ತಿಳಿಸುವ ಪ್ರಯತನವನ್ನು ನಿರ್ದೇಶಕರು ರವಿಕೆಪ್ರಸಂಗ ಸಿನಿಮಾದಲ್ಲಿ ಮಾಡಿದ್ದಾರೆ.

ರವಿಕೆ ಪ್ರಸಂಗ ಸಿನಿಮಾವನ್ನು ಮಾಷ್೯ ಡಿಸ್ಟ್ರಿಬ್ಯುಟರ್ಸ್ ಸಂಸ್ಥೆ ವಿಶಾಲ ಕರ್ನಾಟಕದಲ್ಲಿ ಬಿಡುಗಡೆಗೊಳಿಸಲಿದ್ದಾರೆ. ಜೊತೆಗೆ ವಿದೇಶದಲ್ಲೂ ಸಿನಿಮಾ ಬಿಡುಗಡೆಗೊಳ್ಳಲಿದೆ. ಕುಟುಂಬ ಸಮೇತ ನೋಡಬೇಕಾದ ಸಿನಿಮಾ ಇದಾಗಿದೆ. ಪ್ರತಿಯೊಬ್ಬ ಮಹಿಳೆಯರ ಜೀವನದಲ್ಲಿ ನಡೆಯುವಂತಹ ಕತೆಯನ್ನು ಈ ಸಿನಿಮಾ ಹೊಂದಿದೆ.

ಈ ಚಿತ್ರಕ್ಕೆ ಪಾವನಾ ಸಂತೋಷ್ ಕಥೆ ಸಂಭಾಷಣೆ ಬರೆದಿದ್ದಾರೆ. ಸಾಮಾನ್ಯವಾಗಿ ಸೀರೆ ಅಂದರೆ ಹೆಣ್ಣು ಮಕ್ಕಳಿಗೆ ಬಹಳ ಇಷ್ಟ ಅದರಲ್ಲೂ ಸೀರೆ ಎಷ್ಟು ಚೆನ್ನಾಗಿರುತ್ತೋ, ಅಷ್ಟೇ
ಸುಂದರವಾಗಿ ಬ್ಲೌಸ್ ಇರಬೇಕು. ಸಾವಿರಾರೂ ಖರ್ಚು ಮಾಡಿ ರವಿಕೆ ಹೊಲಿಸುತ್ತಾರೆ. ಒಂದು ಸಮಾರಂಭಕ್ಕೆ ಇಂಥದ್ದೇ ಸೀರೆ ಹೀಗೆ ಇರಬೇಕು ಅಂತ ಆಸೆಯಿಂದ ಒಳ್ಳೆಯ ಟೇಲರ್‌ ಹತ್ತಿರ ರವಿಕೆ ಹೊಲಿಸುತ್ತಾರೆ. ಆದರೆ, ಪ್ರತಿ ಬಾರಿ ಆ ರವಿಕೆ ಪರ್ಫೆಕ್ಟ್ ಆಗಿ ಇರಲ್ಲ. ಏನೋ ಒಂದು ಸರಿಯಾಗಿರಲ್ಲ. ಇಂಥದ್ದೇ ಸರಿಹೊಂದದ ರವಿಕೆಯ ರಗಳೆಯ ಕಾಮಿಡಿ ಕಥೆ 'ರವಿಕೆ ಪ್ರಸಂಗ'. ಚಿತ್ರದಲ್ಲಿ ಒಂದು ರವಿಕೆಯಿಂದ ನಾಯಕಿಯ ಜೀವನದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ ಎನ್ನುವುದನ್ನು ಹೇಳಲಾಗಿದ್ದು, ಚಿತ್ರದಲ್ಲಿ ಮಂಗಳೂರು ಕನ್ನಡ ಶೈಲಿ ಬಳಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸುತ್ತಮುತ್ತಲು ಚಿತ್ರೀಕರಣ ನಡೆದಿದೆ.

Advertisement
Tags :
bengaluruCensor BoardmangaluruRavike Prasangasuddionesuddione newsU-A certificateಬೆಂಗಳೂರುಮಂಗಳೂರುಯು-ಎ ಸರ್ಟಿಫಿಕೇಟ್ರವಿಕೆ ಪ್ರಸಂಗಸುದ್ದಿಒನ್ಸುದ್ದಿಒನ್ ನ್ಯೂಸ್ಸೆನ್ಸಾರ್ ಮಂಡಳಿ
Advertisement
Next Article