ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಆರ್ಸಿಬಿ ಸ್ಟಾರ್ ಫಿನಿಶರ್ ದಿನೇಶ್ ಕಾರ್ತಿಕ್
ಆರ್ಸಿಬಿ ಅಭಿಮಾನಿಗಳಿಗೆ ದಿನೇಶ್ ಕಾರ್ತಿಕ್ ಶಾಕಿಂಗ್ ನ್ಯೂಸ್ ಕೊಟ್ಟಿದ್ದಾರೆ. ಆರ್ಸಿಬಿಯ ಸ್ಟಾರ್ ಫಿನಿಶರ್ ಇದೀಗ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ತಮ್ಮ ನಿರ್ಧಾರ ಘೋಷಿಸಿದ್ದಾರೆ. ತನ್ನನ್ನು ಬೆಂಬಲಿಅಇದ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಇದು ಅಭಿಮಾನಿಗಳಿಗೆ ಕೊಂಚ ಬೇಸರ ತರಿಸಿದೆ.
ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ದಿನೇಶ್ ಕಾರ್ತಿಕ್, ಕಳೆದ ಕೆಲವು ದಿನಗಳಿಂದ ನನಗೆ ಸಿಗುತ್ತಿರುವ ಬೆಂಬಲ ಹಾಗೂ ಅಪಾರ ಪ್ರೀತಿಗೆ ನಾನು ಆಭಾರಿ. ನಾನು ಸಾಕಷ್ಟು ಯೋಚನೆ ಮಾಡಿ ನಿವೃತ್ತಿ ಘೋಷಣೆ ಮಾಡಿದ್ದೇನೆ. ಮುಂದೆ ಎದುರಾಗುವ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಲು ನಾನು ಸಿದ್ಧನಾಗಿದ್ದೇನೆ. ನನ್ನನ್ನು ಬೆಂಬಲಿಸಿದ ಕೋಚ್ ಗಳು, ಆಟಗಾರರು, ಸೆಲೆಕ್ಟರ್ಸ್, ಸಹ ಆಟಗಾರರಿಗೆ ಹಾಗೂ ಅಭಿಮಾನಿಗಳಿಗೆ ವಿಶೇಷವಾದ ಧನ್ಯವಾದಗಳನ್ನು ತಿಳಿಸುತ್ತೇನೆ. ನನ್ನ ಪೋಷಕರೇ ನನ್ನ ಸ್ಟ್ರೆಂಥ್. ಅವರ ಆಶೀರ್ವಾದವೇ ಇಲ್ಲದೆ ಇಷ್ಟೆಲ್ಲಾ ಸಾಧನೆ ಮಾಡಲು ಸಾಧ್ಯವಿರಲಿಲ್ಲ ಎಂದು ಬರೆದಿದ್ದಾರೆ.
ಇದೇ ವೇಳೆ ಬೆನ್ನೆಲುಬಾಗಿ ನಿಂತ ತನ್ನ ಹೆಂಡತಿಗೂ ಧನ್ಯವಾದ ತಿಳಿಸಿದ್ದಾರೆ. ಅಭಿಮಾನಿಗಳ ಬೆಂಬಲವಿಲ್ಲದೆ ಏನು ಮಾಡಲು ಸಾಧ್ಯವಿಲ್ಲ ಎಂದು ತಮ್ಮ ಅಭಿಮಾನಿಗಳಿಗೂ ವಿಶೇಷವಾದ ಧನ್ಯವಾದ ತಿಳಿಸಿದ್ದಾರೆ. 2004 ರಲ್ಲಿ ಟೀಂ ಇಂಡಿಯಾ ಪರ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ಕಾಲಿಟ್ಟಿದ ದಿನೇಶ್ ಕಾರ್ತಿಕ್ ಅವರ ಸುಮಾರು 20 ವರ್ಷಗಳ ಸುದೀರ್ಘ ಕ್ರಿಕೆಟ್ ಪಯಣಕ್ಕೆ ಇಂದು ಫುಲ್ ಸ್ಟಾಪ್ ಬಿದ್ದಿದೆ. ಎಲ್ಲಾ ಮಾದರಿಯ ಕ್ರಿಕೆಟ್ ಗೂ ದಿನೇಶ್ ಕಾರ್ತಿಕ್ ವಿದಾಯ ಹೇಳುವ ಮೂಲಕ ಶಾಕ್ ಕೊಟ್ಟಿದ್ದಾರೆ.