For the best experience, open
https://m.suddione.com
on your mobile browser.
Advertisement

ಕರ್ನಾಟಕ ರೈತರನ್ನು ಸ್ಥಳಾಂತರಿಸದೆ ಬಿಡುಗಡೆ ಮಾಡಿ : ಸಿಎಂ ಸಿದ್ದರಾಮಯ್ಯ ಮನವಿ

05:05 PM Feb 15, 2024 IST | suddionenews
ಕರ್ನಾಟಕ ರೈತರನ್ನು ಸ್ಥಳಾಂತರಿಸದೆ ಬಿಡುಗಡೆ ಮಾಡಿ   ಸಿಎಂ ಸಿದ್ದರಾಮಯ್ಯ ಮನವಿ
Advertisement

ಬೆಂಗಳೂರು: ಕೇಂದ್ರ ಸರ್ಕಾರ ರೈತ ವಿರೋಧಿ ನೀತಿಗಳನ್ನು ಖಂಡಿಸಿ ರೈತ ಸಂಘಟನೆಗಳು ಇತ್ತಿಚೆಗೆ ಪ್ರತಿಭಟನೆ ಮಾಡಲು ಹೊರಟಿದ್ದರು. ಕರ್ನಾಟಕದಿಂದ ಕೂಡ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಲು ಹೊರಟಿದ್ದರು. ಆದರೆ ಮಧ್ಯಪ್ರದೇಶದಲ್ಲಿಯೇ ರಯಥರನ್ನು ತಡೆದು, ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದರು. ಇದೀಗ ವಶದಲ್ಲಿರುವ ರೈತರನ್ನು ವಾರಣಾಸಿಗೆ ಸ್ಥಳಾಂತರ ಮಾಡುತ್ತಿದ್ದಾರೆ. ಇದನ್ನು ನಿಲ್ಲಿಸಿ, ರೈತರನ್ನು ಬಿಡುಗಡೆ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ. ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ.

Advertisement
Advertisement

Advertisement

'ಪ್ರತಿಭಟನೆಯಲ್ಲಿ ಭಾಗವಹಿಸಲು ರೈತರು ದೆಹಲಿಗೆ ತೆರಳುತ್ತಿದ್ದರು. ಈ ವೇಳೆ ಯಾವುದೇ ಕಾರಣವಿಲ್ಲದೆ ಕರ್ನಾಟಕದ ರೈತರ ಗುಂಪನ್ನು ಮಧ್ಯಪ್ರದೇಶದ ಭೋಪಾಲ್ ನಲ್ಲಿ ಬಂಧಿಸಿದ್ದಾರೆ. ಅಲ್ಲದೆ ರೈತರನ್ನು ಬಂಧಿಸಿ ನಾಲ್ಕು ದಿನಗಳಾದರೂ ಅವರನ್ನು ಬಿಡುಗಡೆ ಮಾಡಿಲ್ಲ. ನಿಮ್ಮ ಪೊಲೀಸ್ ಅಧಿಕಾರಿಗಳು ಅವರನ್ನು ವಾರಣಾಸಿಗೆ ಸ್ಥಳಾಂತರ ಮಾಡಲು ನಿರ್ಧರಿಸಿದ್ದಾರೆಂದು ತಿಳಿದು ಬಂದಿದೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ದೆಹಲಿಗೆ ತೆರಳುತ್ತಿದ್ದರು. ಇದು ಅವರ ಸಾಂವಿಧಾನಿಕ ಹಕ್ಕು. ಉತ್ತಮ ನೀತಿಗಳನ್ನು ಬಯಸುತ್ತಿರುವ ರೈತರನ್ನು ಮಧ್ಯಪ್ರದೇಶದಲ್ಲಿ ಪೊಲೀಸ್ ಅಧಿಕಾರಿಗಳು ಬಂಧಿಸಿ, ಕೆಟ್ಟದಾಗಿ ನಡೆಸಿಕೊಳ್ಳುತ್ತಿರುವುದು ಅತ್ಯಂತ ದುರದೃಷ್ಟಕರ‌. ಈ ಬಗ್ಗೆ ಖುದ್ದು ಪರಿಶೀಲನೆ ನಡೆಸಿ, ರೈತರನ್ನು ಸ್ಥಳದಿಂದ ಸ್ಥಳಕ್ಕೆ ಸ್ಥಳಾಂತರಿಸದೆ ಬಿಡುಗಡೆ ಮಾಡಬೇಕು' ಎಂದು ಸಿಎಂ ಸಿದ್ದರಾಮಯ್ಯ ಪತ್ರದ ಮೂಲಕ ಮನವಿ ಮಾಡಿದ್ದಾರೆ.

Advertisement
Advertisement

ರಾಜ್ಯದ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್ ಅಧ್ಯಕ್ಷತೆಯಲ್ಲಿ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಲು ದೆಹಲಿಗೆ ತೆರಳುತ್ತಿದ್ದರು. ಈ ವೇಳೆ 70ಕ್ಕೂ ರೈತರನ್ನು ಬಂಧಿಸಲಾಗಿದೆ. ಮಧ್ಯಪ್ರದೇಶ ಪೊಲೀಸರ ಈ ನಡೆಯನ್ನು ಖಂಡಿಸಿ, ರಾಜ್ಯದಲ್ಲೂ ರೈತರ ಪ್ರತಿಭಟನೆಗಳು ನಡೆಯುತ್ತಿವೆ. ಇದೀಗ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ.

Advertisement
Tags :
Advertisement