ಭವಾನಿ ರೇವಣ್ಣಗೆ ರಿಲೀಫ್ : ಹೈಕೋರ್ಟ್ ನಿಂದ ಸಿಕ್ತು ನಿರೀಕ್ಷಣಾ ಜಾಮೀನು
ಬೆಂಗಳೂರು: ಮನೆ ಕೆಲಸದಾಕೆಯ ಕಿಡ್ನ್ಯಾಪ್ ಕೇಸಲ್ಲಿ ಭವಾನಿ ರೇವಣ್ಣನಿಗೆ ಬಂಧನದ ಭೀತಿ ಎದುರಾಗಿತ್ತು. ಇದೀಗ ಬಿಗ್ ರಿಲೀಫ್ ಸಿಕ್ಕಿದೆ. ಈ ಪ್ರಕರಣದಲ್ಲಿ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.
ಪ್ರಜ್ವಲ್ ರೇವಣ್ಣ ಕೇಸಿಗೆ ಸಂಬಂಧಿಸಿದಂತೆ ಹೆಚ್.ಡಿ.ರೇವಣ್ಣ ಅವರು ಮನೆ ಕೆಲಸದಾಕೆಯನ್ನು ಕಿಡ್ನ್ಯಾಪ್ ಮಾಡಿದ್ದರು ಎಂಬ ಆರೋಪದ ಮೇಲೆ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಜೈಲಿನಲ್ಲಿ ಕಾಲ ಕಳೆದ ರೇವಣ್ಣ ಕಡೆಗೆ ಜಾಮೀನು ಪಡೆದು ಹೊರ ಬಂದರು. ಇನ್ನು ಇದೇ ಕೇಸಿನಲ್ಲಿ ಭವಾನಿ ರೇವಣ್ಣ ಅವರಿಗೂ ನೋಟೀಸ್ ನೀಡಲಾಗಿತ್ತು. ಆದರೆ ನಾಪತ್ತೆಯಾಗಿದ್ದ ಭವಾನಿ ರೇವಣ್ಣ ಎಲ್ಲಿಯೂ ಸಿಕ್ಕಿರಲಿಲ್ಲ. ಬಳಿಕ ಕೋರ್ಟ್ ನಿಂದ ಮಧ್ಯಂತರ ಜಾಮೀನು ಸಿಕ್ಕ ಮೇಲೆ ಎಸ್ಐಟಿ ಮುಂದೆ ಹಾಜರಾಗಿದ್ದರು. ಪ್ರಶ್ನೆಗಳಿಗೆ ಉತ್ತರ ನೀಡಿದ್ದರು.
ಕೋರ್ಟ್ ನಲ್ಲಿ ಸಂತ್ರಸ್ತೆಯ ಹೇಳಿಕೆಯನ್ನು ಪಡೆಯಲಾಗಿದೆ. ಭವಾನಿ ಅವರ ಬಗ್ಗೆ ಕೆಲಸದಾಕೆ, ಆಹಾರ ಮತ್ತು ಬಟ್ಟೆ ನೀಡಿರುವ ಬಗ್ಗೆ ತಿಳಿಸಿದ್ದಾರೆ. ಹೀಗಾಗಿ ಭವಾನಿ ಅವರನ್ನು ಬಂಧಿಸುವುದು ಬೇಡವೆಂದು ಕೋರ್ಟ್ ಸೂಚಿಸಿದೆ. ಈ ಹಿನ್ನೆಲೆ ಭವಾನಿ ರೇವಣ್ಣ ಅವರು ನಿಟ್ಟುಸಿರು ಬಿಟ್ಟಿದ್ದಾರೆ. ಬಂಧನದಿಂದ ಮುಕ್ತರಾಗಿದ್ದಾರೆ.
ಇನ್ನು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೈಲು ಸೇರಿರುವ ಪ್ರಜ್ವಲ್ ರೇವಣ್ಣ ಅವರ ಕಸ್ಟಡಿ ಇಂದಿಗೆ ಅಂತ್ಯವಾಗಲಿದೆ. ಈಗಾಗಲೇ ಎರಡು ಬಾರಿ ಕಸ್ಟಡಿಗೆ ತೆಗೆದುಕೊಂಡಿರುವ ಪೊಲೀಸರು ಮತ್ತೆ ಕಸ್ಟಡಿಗೆ ತೆಗೆದುಕೊಳ್ಳಲು ಯೋಚನೆ ಮಾಡಿದೆ. ಮೂರು ಪ್ರಕರಣಗಳು ದಾಖಲಾಗಿದ್ದು, ಈಗಾಗಲೇ ಎರಡು ಪ್ರಕರಣವನ್ನು ಎಸ್ಐಟಿ ಅಧಿಕಾರಿಗಳು ಮುಗಿಸಿದ್ದಾರೆ. ಇನ್ನೊಂದು ಪ್ರಕರಣವಿದ್ದು, ಅದನ್ನು ಮುಗಿಸುವುದಕ್ಕೆ ಮತ್ತೆ ಕಸ್ಟಡಿಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ.