For the best experience, open
https://m.suddione.com
on your mobile browser.
Advertisement

ಖ್ಯಾತ ಸಾಹಿತಿ ಡಾ.ಕಮಲಾ ಹಂಪ ನಿಧನ : ದೇಹದಾನ ಮಾಡಿದ ಕುಟುಂಬಸ್ಥರು

11:30 AM Jun 22, 2024 IST | suddionenews
ಖ್ಯಾತ ಸಾಹಿತಿ ಡಾ ಕಮಲಾ ಹಂಪ ನಿಧನ   ದೇಹದಾನ ಮಾಡಿದ ಕುಟುಂಬಸ್ಥರು
Advertisement

ಬೆಂಗಳೂರು: ಕನ್ನಡದ ಖ್ಯಾತ ಸಾಹಿತಿ ನಾಡೋಜಾ ಕಮಲಾ ಹಂಪಾ ಅವರು ಇಂದಯ ಇಹಲೋಕ ತ್ಯಜಿಸಿದ್ದಾರೆ. ಬೆಳಗ್ಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದು, ಇವರಿಗೆ 89 ವರ್ಷ ವಯಸ್ಸಾಗಿತ್ತು. ಈ ಮಧ್ಯೆ ವಯೋಸಹಜ ಕಾಯಿಕೆಯಿಂದ ಕೂಡ ಬಳಲುತ್ತಿದ್ದರು. ಕಮಲಾ ಹಂಪ ಅವರ ಪತಿಯೂ ಖ್ಯಾತ ಸಾಹಿತಿಗಳಾಗಿದ್ದಾರೆ. ಪತಿ ನಾಗರಾಜಯ್ಯ, ಮೂವರು ಮಕ್ಕಳು ಹಾಗೂ ಅಪಾರವಾದಂತ ಅಭಿಮಾನಿ ಬಳಗವನ್ನು ಕಮಲಾ ಹಂಪ ತೊರೆದಿದ್ದಾರೆ.

Advertisement

ಕಮಲಾ ಹಂಪ ಅವರು ತಮ್ಮ ಮಗಳ ಮನೆಯಲ್ಲಿಯೇ ವಾಸವಾಗಿದ್ದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಮಗಳು ಆರತಿ ಮನೆಯಲ್ಲಿ ಇದ್ದರು. ಶುಕ್ರವಾರ ರಾತ್ರಿ 10 ಗಂಟೆಯ ವೇಳೆಗೆ ಅವರಿಗೆ ಹೃದಯಾಘಾತವಾಗಿದೆ. ಎಲ್ಲರನ್ನು ಬಿಟ್ಟು ಇಹಲೋಕ ತ್ಯಜಿಸಿದ್ದಾರೆ. ಅವರ ಮೃತದೇಹವನ್ನು ರಾಮಯ್ಯ ಕಾಲೇಜಿಗೆ ದಾನ ಮಾಡಿ, ಸಾರ್ಥಕತೆ ಮೆರೆದಿದ್ದಾರೆ.

Advertisement

ಕಮಲಾ ಹಂಪನಾ ಅವರ ಮೃತದೇಹವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ. ರಾಜಾಜಿನಗರದ ಅವರ ನಿವಾಸದಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕಮಲಾ ಹಂಪ ನಿಧನಕ್ಕೆ ಅನೇಕ ಕ್ಷೇತ್ರದ ಗಣ್ಯರು ಕಂಬನಿ‌ ಮಿಡಿದಿದ್ದಾರೆ.

Advertisement

Advertisement
Advertisement

ಬೆಂಗಳೂರಿನ ದೇವನಹಳ್ಳಿಯಲ್ಲಿ 1935ರ ಅಕ್ಟೋಬರ್ 28ರಂದು ಸಿ. ರಂಗಧಾಮನಾಯಕ್ ಮತ್ತು ಲಕ್ಷಮ್ಮ ದಂಪತಿ ಪುತ್ರಿಯಾಗಿ ಕಮಲಾ ಹಂಪನಾ ಜನಿಸಿದರು. ತುಮಕೂರು ಮತ್ತು ಮೈಸೂರಿನಲ್ಲಿ ಶಾಲಾ ಶಿಕ್ಷಣ ಪೂರ್ಣಗೊಳಿಸಿ 1956ರಲ್ಲಿ ಕನ್ನಡ ಅಧ್ಯಾಪಕಿಯಾಗಿ ವೃತ್ತಿ ಜೀವನ ಆರಂಭಿಸಿದ್ದರು. ಕಮಲಾ ಹಂಪನಾ ಅವರು 60 ವರ್ಷಗಳಕಾಲ ಸಾಹಿತ್ಯ ಕ್ಷೇತ್ರದಲ್ಲಿ ಸೇವೆ ಮಾಡಿದ್ದಾರೆ. ನಕ್ಕಿತು ಹಾಲಿನ ಬಟ್ಟಲು, ರೆಕ್ಕೆ ಮುರಿದಿತ್ತು, ಚಂದನಾ, ಬಣವೆ, ಸಂಶೋಧನಾ ಕೃತಿಗಳಾದ ತುರಂಗ ಭಾರತ - ಒಂದು ಅಧ್ಯಯನ, ಶಾಂತಿನಾಥ, ಆದರ್ಶ ಜೈನ ಮಹಿಳೆಯರು, ಅನೇಕಾಂತವಾದ, ನಾಡು ನುಡಿ ನಾವು, ಜೈನ ಸಾಹಿತ್ಯ ಪರಿಸರ, ಬದ್ದವಣ, ರೋಣದ ಬಸದಿ ಸೇರಿ ಹಲವು ಕಥಾ ಕವನ ಸಂಕಲನಗಳು, ಶಿಶು ಸಾಹಿತ್ಯ, ಅನುವಾದಗಳು, ಕಾದಂಬರಿಗಳನ್ನು ಕನ್ನಡ ಸಾಹಿತ್ಯ ಪ್ರಿಯರಿಗಾಗಿ ಕೊಡುಗೆ ನೀಡಿದ್ದಾರೆ.

Advertisement
Tags :
Advertisement