Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಬಗೆಹರಿಸಿ : ಎಬಿವಿಪಿ ಮನವಿ

03:24 PM Dec 15, 2023 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಡಿ.15 : ರಾಜ್ಯ ಸರಕಾರವು ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿ, ಅದನ್ನು ಬಗೆಹರಿಸಿ ತರಗತಿಗಳು ಸುಗಮವಾಗಿ ನಡೆಸುವಂತೆ ಅಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆಯನ್ನು ನಡೆಸಿ ಅತಿಥಿ ಉಪನ್ಯಾಸಕರಿಗೆ ಬೆಂಬಲವನ್ನು ವ್ಯಕ್ತಪಡಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

Advertisement

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದಾರೆ, ಇದರಿಂದಾಗಿ ಪದವಿ ಕಾಲೇಜುಗಳಲ್ಲಿ ಸರಿಯಾಗಿ ತರಗತಿಗಳು ನಡೆಯದೆ ವಿದ್ಯಾರ್ಥಿಗಳ ಪಠ್ಯ ಚಟುವಟಿಕೆಗಳಲ್ಲಿ ಹಿನ್ನಡೆ ಆಗುತ್ತಿದೆ.

ಕೆಲವೊಂದು ವಿಶ್ವ ವಿದ್ಯಾಲಯಗಳು  ಸೆಮಿಸ್ಟರ್ ಪರೀಕ್ಷೆಯನ್ನು ನಡೆಸುವ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿವೆ, ಆದರೆ ತರಗತಿಗಳು ಸರಿಯಾಗಿ ನಡೆಯದೆ ವಿಧ್ಯಾರ್ಥಿಗಳು ಹೇಗೆ ಪರೀಕ್ಷೆ ಬರೆಯಬೇಕು ಎಂಬ ಪ್ರಶ್ನೆ ವಿದ್ಯಾರ್ಥಿ ಸಮುದಾಯದ ಮಧ್ಯೆ ಮೂಡುತಿದೆ.

ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿ ಗೌರವಯುತ ಜೀವನವನ್ನು ಸಾಧ್ಯವಾಗಿಸುವುದು ಸರ್ಕಾರದ ಕರ್ತವ್ಯವಾಗಿದೆ. ರಾಜ್ಯ ಸರ್ಕಾರವು ಈ ವಿಷಯದಲ್ಲಿ ಯಾವುದೇ ರೀತಿಯ ವಿಳಂಬ ಮಾಡದೆ ಅತಿಥಿಉಪನ್ಯಾಸಕರಿಗೆ ನೀಡುವ ಸಂಬಳವನ್ನು ಸರಕಾರಿ ನೌಕರರಿಗೆ ನೀಡುವ ಹಾಗೆ ಪ್ರತಿ ತಿಂಗಳು ನೀಡಬೇಕು.

ಅತಿಥಿ ಉಪನ್ಯಾಕರಿಗೆ ಯುಜಿಸಿ ನಿಯಮಾವಳಿ ಪ್ರಕಾರ ವೇತನವನ್ನು ನೀಡವುದು. ಈ ವಿಷಯದಲ್ಲಿ ಸರಕಾರ ತಕ್ಷಣವೇ ಪರಿಹಾರವನ್ನು ನೀಡಿ ತರಗತಿಗಳು ನಡೆಯಲು ಅನುವು ಮಾಡಿಕೊಡಬೇಕೆಂದು ರಾಜ್ಯ ಸರ್ಕಾರಕ್ಕೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ಆಗ್ರಹಿಸುತ್ತದೆ.

ಅತಿಥಿ ಉಪನ್ಯಾಸಕರಿಗೆ ಯುಜಿಸಿ ನಿಯಮಾವಳಿ ಪ್ರಕಾರ ವೇತನ ನೀಡುವದು. ಸರಕಾರಿ ನೌಕರರಿಗೆ ನೀಡುವ ಹಾಗೆ ಪ್ರತಿ ತಿಂಗಳು ಸಂಬಳ ನೀಡಬೇಕು. ಸಮಸ್ಯೆಗೆ ಶಾಶ್ವತ ಪರಿಹಾರವಾಗಿ ಸರ್ಕಾರ ಕೂಡಲೇ ರಾಜ್ಯದ ಕಾಲೇಜು ಗಳಲ್ಲಿ ಖಾಲಿ ಇರುವ ಉಪನ್ಯಾಸಕ ಹುದ್ದೆಯನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆಆರಂಭಿಸಬೇಕು.

ಅತಿಥಿ ಉಪನ್ಯಾಸಕರು ಕಾನೂನಾತ್ಮಕವಾಗಿ ಹೋರಾಟ ಮುಂದುವರಿಸಿ,ಆ ವಿದ್ಯಾರ್ಥಿಗಳ ಹಿತದೃಷ್ಟಿ ಯಿಂದಕೂಡಲೇತರಗತಿ ಬಹಿಷ್ಕಾರವನ್ನು ಹಿಂಪಡೆದು ಪಾಠ ಪ್ರವಚನಗಳನ್ನು ಆರಂಭಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಲಾಯಿತು.

ರಾಜ್ಯಸರ್ಕಾರವು ಈ ಕೂಡಲೇ ಅತಿಥಿ ಉಪನ್ಯಾಸಕರ ಜತೆಗೆ ಮಾತುಕತೆ ನಡೆಸಿ ಬೇಡಿಕೆಯನ್ನು ಸಾಕಾರಾತ್ಮಕವಾಗಿ ಪರಿಶೀಲಿಸಿ, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಮುಷ್ಕರವನ್ನು ಕೂಡಲೇ ಕೊನೆಗೊಳಿಸುವಂತೆ ಮನವೊಲಿಸಬೇಕಾಗಿ ಅಭಾವಿಪ ವಿನಂತಿಸಿದೆ.

ಈ ಸಂದರ್ಭದಲ್ಲಿ ಸುದರ್ಶನ್‌ನಾಯ್ಕ-ರಾಜ್ಯ ಕಾರ್ಯಕಾರಣಿ ಸದಸ್ಯರು, ಕನಕರಾಜ್ ಕೋಡಿಹಳ್ಳಿ-ರಾಜ್ಯ ಕಾರ್ಯಕಾರಿಣಿ ಸದಸ್ಯರು, ಸಿದ್ದೇಶ್-ಜಿಲ್ಲಾ ಸಂಚಾಲಕರು, ಗೋಪಿ-ನಗರ ಕಾರ್ಯದರ್ಶಿ, ಚಿತ್ರಸ್ವಾಮಿ-ಸಾಮಾಜಿಕ ಜಾಲತಾಣ, ಚೈತ್ರ-ಮಹಿಳಾ ಪ್ರಮುಖ್, ಮನೋಜ್-ಹಾಸ್ಟೆಲ್ ಪ್ರಮುಖ್, ಅಜ್ಜಯ್ಯ-ಸಹ ಹಾಸ್ಟೆಲ್ ಪ್ರಮುಖ್, ಚಂದನ-ಮಹಿಳಾ ಸಹ ಪ್ರಮುಖ್, ಕಾರ್ಯಕರ್ತರು-ಸುಮನ್, ದರ್ಶನ್, ತಿಪ್ಪೇಸ್ವಾಮಿ, ಸುದೀಪ್, ಮಧು, ಲಕ್ಷ್ಮೀ ಹಾಗೂ ಇನ್ನು ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

Advertisement
Tags :
ABVP demandschitradurgaGuest LecturerResolve issuesಅತಿಥಿ ಉಪನ್ಯಾಸಕರ ಸಮಸ್ಯೆಎಬಿವಿಪಿ ಮನವಿಚಿತ್ರದುರ್ಗ
Advertisement
Next Article