Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಶಿಕ್ಷಕ ಪದವೀಧರ ಕ್ಷೇತ್ರ ಫಲಿತಾಂಶ : ಆರಂಭದಲ್ಲೇ ಮೈತ್ರಿ ಅಭ್ಯರ್ಥಿ ಗೆಲುವು

09:50 PM Jun 06, 2024 IST | suddionenews
Advertisement

 

Advertisement

ಈಶಾನ್ಯ ಪದವೀಧರ, ಬೆಂಗಳೂರು ಪದವೀಧರ, ನೈರುತ್ಯ ಪದವೀಧರ ಹಾಗೂ ಆಗ್ನೇಯ ಶಿಕ್ಷಕರ, ನೈರುತ್ಯ ಶಿಕ್ಷಕರ, ದಕ್ಷಿಣ ಕ್ಷೇತ್ರಗಳ ಶಿಕ್ಷಕರ ಕ್ಷೇತ್ರಕ್ಕೆ ಜೂನ್ 3ರಂದು ಚುನಾವಣೆ ನಡೆದಿತ್ತು. ಇಂದು ಅದರ‌ ಮತ ಎಣಿಕೆ ಕಾರ್ಯ ನಡೆದಿದ್ದು, ಈಗಾಗಲೇ ಮುಗಿಯುವ ಹಂತಕ್ಕೆ ಬಂದಿದೆ. ಸದ್ಯಕ್ಕೆ ಇಬ್ಬರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಅದರಲ್ಲಿ ಒಬ್ಬರು ಮೈತ್ರಿ ಅಭ್ಯರ್ಥಿ ಇನ್ನೊಬ್ಬರು ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ.

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಮೊದಲ ಪ್ರಾಶಸ್ತ್ರದ ಮತಗಳಲ್ಲೇ ಗೆಲುವಿನ ನಗೆ ಬೀರಿದ್ದಾರೆ. 4,622 ಮತಗಳ ಅಂತರದಿಂದ ಗೆದ್ದಿದ್ದಾರೆ. ಸತತ 5ನೇ ಬಾರಿಗೆ ಆಯ್ಕೆ ಬಯಸಿದ್ದ ಕಾಂಗ್ರೆಸ್‌ನ ಮರಿತಿಬ್ಬೇಗೌಡ ಸೋಲನುಭವಿಸಿದ್ದಾರೆ.

Advertisement

ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್‌ನ ಎಸ್ ಎಲ್ ಭೋಜೇಗೌಡ 5,267 ಮತಗಳಿಂದ ಗೆಲುವು ಸಾಧಿಸಿದರು.

ಮೊದಲ ಪ್ರಾಶಸ್ತ್ರ ಮತಗಳಲ್ಲೇ ಗೆಲುವು ಪಡೆದ ಅವರು, 9,829 ಮತ ಗಳಿಸಿದರು. ಕಾಂಗ್ರೆಸ್ ಅಭ್ಯರ್ಥಿ ಕೆ ಕೆ ಮಂಜುನಾಥ್ ಕುಮಾರ್ 4,562 ಮತ ಪಡೆದರು. 19,479 ಮತಳು ಚಲಾವಣೆ ಆಗಿದ್ದವು. ಅದರಲ್ಲಿ 821 ಮತಗಳು ಅಸಿಂಧುವಾಗಿದ್ದವು. ಫೈನಲ್ ಫಲಿತಾಂಶ ಹೊರ ಬೀಳಬೇಕಿದ್ದು, ಯಾವ ಪಕ್ಷದ ಅಭ್ಯರ್ಥಿಗಳು ಸ್ಥಾನ ಪಡೆಯುತ್ತಾರೆ ಎಂಬುದನ್ನು ನೋಡಬೇಕಿದೆ.

Advertisement
Tags :
ಮೈತ್ರಿ ಅಭ್ಯರ್ಥಿ ಗೆಲುವುಶಿಕ್ಷಕ ಪದವೀಧರ ಕ್ಷೇತ್ರ ಫಲಿತಾಂಶ
Advertisement
Next Article