Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ರೇವಣ್ಣ ಜಾಮೀನು ಅರ್ಜಿ ಇಂದು ವಿಚಾರಣೆ : ಅನಾರೋಗ್ಯದಿಂದ ಆಸ್ಪತ್ರೆಯಲ್ಲಿರುವ ರೇವಣ್ಣಗೆ ಜೈಲಾ..? ಬೇಲಾ..?

11:59 AM May 08, 2024 IST | suddionenews
Advertisement

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಕಿಡ್ನ್ಯಾಪ್ ಕೇಸಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಬಂಧಿಸಲಾಗಿದೆ. 8ನೇ ತಾರೀಖಿನ ತನಕವೂ ವಶಕ್ಕೆ ಪಡೆದಿದ್ದರು. ಆದರೆ ಇಂದು ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಇಂದು ಮತ್ತೆ ಕೋರ್ಟ್ ಗೆ ಕರೆದೊಯ್ಯಬೇಕಿತ್ತು. ಆದರೆ ಅದಕ್ಕೂ ಮುನ್ನ ರೇವಣ್ಣ ಅವರ ಆರೋಗ್ಯ ತಪಾಸಣೆ ಮಾಡಿಸಬೇಕಿತ್ತು. ಹೀಗಾಗಿ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆ ಮಾಡಿಸಿದ್ದಾರೆ‌. ಇದೆ ವೇಳೆ ರೇವಣ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಎದೆನೋವು ಕೂಡ ಕಾಣಸಿಕೊಂಡಿದೆ. ಕೂಡಲೇ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ಮುಂದುವರೆಸಿದ್ದಾರೆ. ನಿನ್ನೆಯೂ ಎದೆನೀವು, ಹೊಟ್ಟೆ ಉರಿ ಕಾಣಿಸಿಕೊಂಡಿತ್ತು. ಇಂದು ಕೂಡ ಹೊಟ್ಟೆ ಉರಿ ಕಾಣಿಸಿಕೊಂಡಿದೆ. ಹೀಗಾಗಿ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇನ್ನು ಇಂದು ರೇವಣ್ಣ ಅವರ ಕಸ್ಟಡಿ ಅಂತ್ಯವಾಗಲಿದೆ. ರೇವಣ್ಣ ಅವರ ಜಾಮೀನು ಅರ್ಜಿ ಕೂಡ ಇಂದು ವಿಚಾರಣೆಗೆ ಬರಲಿದೆ. ಆದರೆ ಎಸ್ಐಟಿ ಅಧಿಕಾರಿಗಳು ಮತ್ತಷ್ಟು ದಿನಗಳ ಕಾಲ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ಈಗಷ್ಟೇ ವಿಚಾರಣೆಯನ್ನು ಪ್ರಾರಂಭ ಮಾಡಲಾಗಿದೆ, ರೇವಣ್ಣ ಅವರು ಸಹ ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂದು ವಾದಿಸುವ ಸಾಧ್ಯತೆ ಇದೆ. ಇನ್ನು ಜಾಮೀನು ಅರ್ಜಿ ವಿಚಾರಣೆಯ ಸಂಬಂಧ ನ್ಯಾಯಾಲಯ ಕೂಡ ಒಂದು ಪ್ರಶ್ನೆಯನ್ನು ಕೇಳಿದೆ. ಆರೋಪಿ ಕಸ್ಟಡಿಯಲ್ಲಿದ್ದಾಗ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಲು ಯೋಗ್ಯವೇ ಎಂಬ ಪ್ರಶ್ನೆ ಕೇಳಿತ್ತು. ಇಂದು ಕಸ್ಟಡಿ ಅಂತ್ಯವಾಗಿದ್ದು, ಜಾಮೀನು ಅರ್ಜಿಯೂ ವಿಚಾರಣೆಗೆ ಬರಲಿದೆ. ಜೈಲಿಗೆ ಹೋಗ್ತಾರಾ ಜಾಮೀನು ಸಿಗುತ್ತಾ ಎಂಬುದನ್ನು ನೋಡಬೇಕಿದೆ.

Advertisement

Advertisement
Tags :
bangalorehd revannaಅನಾರೋಗ್ಯಆಸ್ಪತ್ರೆಇಂದು ವಿಚಾರಣೆಎಚ್ ಡಿ ರೇವಣ್ಣಜಾಮೀನು ಅರ್ಜಿಬೆಂಗಳೂರು
Advertisement
Next Article