Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಗಣಪತಿ ಬಿಡುವ ವೇಳೆ ಗಲಭೆ : ಈಗ ನಾಗಮಂಗಲ ಸ್ಥಿತಿ ಹೇಗಿದೆ..?

01:07 PM Sep 12, 2024 IST | suddionenews
Advertisement

Advertisement

ಮಂಡ್ಯ: ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಕಳೆದ ರಾತ್ರಿ ಗಣಪತಿ ವಿಸರ್ಜನೆ ವೇಳೆ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಗುಂಪು ಗಲಭೆ ನಡೆದಿದೆ. ಕೆಲ ಮುಸ್ಲಿಂ ಸಮುದಾಯದವರು ಗಣಪತಿ ಮೂರ್ತಿ ಮೇಲೆ ಕಲ್ಲು ಹಾಗೂ ಚಪ್ಪಲಿ ತೂರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದೇ ವೇಳೆ ಕೆಲ ಅಂಗಡಿಗಳಿಗೂ ಬೆಂಕಿ ಇಟ್ಟಿದ್ದಾರೆ.

ಬುಧವಾರ ಸಂಜೆ 6.30ರ ಸುಮಾರಿಗೆ ನಾಗಮಂಗಲ ಪಟ್ಟಣದ ಬದರಿಕೊಪ್ಪಲಿನಿಂದ ಗಣೇಶ ವಿಸರ್ಜನಾ ಮೆರವಣಿಗೆ ಹೊರಟಿತ್ತು. ಮಂಡ್ಯ ಸರ್ಕಲ್ ಮಾರ್ಗವಾಗಿ ಪಟಾಕಿ ಸಿಡಿಸುತ್ತಾ, ಡೊಳ್ಳು, ತಮಟೆ, ಡಿಜೆ ಸೌಂಡ್ ನೊಂದಿಗೆ ಗಣೇಶನ ಮೂರ್ತಿ ವಿಸರ್ಜನಾ ಮೆರವಣಿಗೆ ಹೊರಟಿತ್ತು. ಅಲ್ಲಿಂದ ಯಾ ಅಲ್ಲಾ ಮಸೀದಿ ಹಾಗೂ ದರ್ಗಾ ಮುಂಭಾಗದ ರಸ್ತೆಯತ್ತ ಮೆರವಣಿಗೆ ಸಾಗುತ್ತಿತ್ತು. ಈ ವೇಳೆ ಹಿಂದೂ ಕಾರ್ಯಕರ್ತರು ಜೈಶ್ರೀರಾಮ್ ಘೊಇಷಣೆಯನ್ನು ಕೂಗಿದ್ದಾರೆ. ಇದೇ ವೇಳೆ ಮಸೀದಿಯೊಳಗಿದ್ದ ಮುಸ್ಲಿಂ ಯುವಕರು ಅಲ್ಲಾ ಹು ಅಕ್ಬರ್ ಅಂತ ಜೋರಾಗಿ ಕೂಗಿದ್ದಾರೆ ಎನ್ನಲಾಗಿದೆ. ಇದರಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಕಲ್ಲು ತೂರಾಟ ಕೂಡ ನಡೆದಿದೆ. ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಗಣೇಶ‌ ಮೂರ್ತಿಯನ್ನು ಪೊಲೀಸ್ ಠಾಣೆಯ ಮುಂದೆಯೇ ಇರಿಸಿ, ಪ್ರತಿಭಟನೆ ನಡೆಸಿದ್ದಾರೆ.

Advertisement

ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಮಾತನಾಡಿ, ಘಟನೆಯಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಈಗಾಗಲೇ 52 ಮಂದಿಯನ್ನು ಬಂಧಿಸಲಾಗಿದೆ. ಅವಶ್ಯಕತೆ ಬಿದ್ರೆ ನಾನು ನಾಗಮಂಗಲಕ್ಕೆ ಹೋಗುತ್ತೇನೆ. ಪೊಲೀಸರು ಹತೋಟಿಗೆ ತಂದಿದ್ದಾರೆ. ಪ್ರಾಣಹಾನಿಯಂತ ಸಮಸ್ಯೆಗಳು ಆಗಿಲ್ಲ. ಇದರಲ್ಲಿ ರಾಜಕೀಯ ಮಾಡಬೇಡಿ ಎಂದು ಮನವಿ ಮಾಡುತ್ತೇನೆ. ಘಟನೆ ಹೆಚ್ಚಾಗದ ರೀತಿಯಲ್ಲಿ ಏನಾದರೂ ಸಲಹೆ ಕೊಡಿ ಎಂದು ಕೇಳಿದ್ದಾರೆ. ಸದ್ಯ ನಾಗಮಂಗಲದ ಪರಿಸ್ಥಿತಿ ಹತೋಟಿಯಲ್ಲಿದ್ದು, ಸೆಪ್ಟೆಂಬರ್ 14ರವರೆಗೂ 144 ಸೆಕ್ಷನ್ ಜಾರಿಯಲ್ಲಿರುತ್ತದೆ.

ಗಣಪರಿ ಬಿಡುವ ವೇಳೆ ಗಲಭೆ : ಈಗ ನಾಗಮಂಗಲ ಸ್ಥಿತಿ ಹೇಗಿದೆ..?

Tags :
bengaluruchitradurgaNagamangalariotsuddionesuddione newsಗಣಪತಿಗಲಭೆಚಿತ್ರದುರ್ಗನಾಗಮಂಗಲಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article