For the best experience, open
https://m.suddione.com
on your mobile browser.
Advertisement

ಅಭಿಮಾನಿಗಳಿಗೆ ಮತ್ತೆ ಬೇಸರ ಮಾಡಿದ ರಾಕಿಂಗ್ ಸ್ಟಾರ್ ಯಶ್..!

08:16 PM Jan 04, 2024 IST | suddionenews
ಅಭಿಮಾನಿಗಳಿಗೆ ಮತ್ತೆ ಬೇಸರ ಮಾಡಿದ ರಾಕಿಂಗ್ ಸ್ಟಾರ್ ಯಶ್
Advertisement

ಕಳೆದ ಮೂರು ವರ್ಷಗಳಿಂದ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆಗೆ ಆಚರಿಸಿಕೊಂಡಿಲ್ಲ. ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಈ ವರ್ಷವಾದರೂ ಅದ್ದೂರಿಯಾಗಿ ಆಚರಿಸಬೇಕೆಂಬುದು ಫ್ಯಾನ್ಸ್ ಆಸೆಯಾಗಿತ್ತು. ಅದರಂತೆ ಖುಷಿಯಿಂದ ಕಾಯುತ್ತಿದ್ದರು. ಆದರೆ ಈ ಸಂದರ್ಭದಲ್ಲಿ ಯಶ್, ತಮ್ಮ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ.

Advertisement
Advertisement

ಜನವರಿ 8.. ಸೋಮವಾರ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬ. 39ನೇ ವರ್ಷಕ್ಕೆ ರಾಕಿ ಬಾಯ್ ಕಾಲಿಡುತ್ತಿದ್ದಾರೆ. ಈ ವರ್ಷ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಾರೆ ಎಂದೇ ನಂಬಲಾಗಿತ್ತು. ಆದರೆ ಈಗ ಆ ನಿರೀಕ್ಷೆ ಸುಳ್ಳಾಗಿದೆ. ಅಭಿಮಾನಿಗಳನ್ನೆಲ್ಲಾ ಉದ್ದೇಶಿಸಿ, ಯಶ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ. ಜನವರಿ 8. ನೀವು ನನ್ನ ಮೇಲಿಟ್ಟಿರುವ ಅಭಿಮಾನವನ್ನ ನನ್ನ ಜೊತೆ ಖುದ್ದು ವ್ಯಕ್ತಪಡಿಸಬೇಕೆಂದು ಅಪೇಕ್ಷೆ ಪಡುವ ದಿನ. ನನಗೂ ಅಷ್ಟೇ, ಜನ್ಮದಿನದ ನೆಪದಲ್ಲಿ ನಿಮ್ಮೊಂದಿಗೆ ಸಮಯ ಕಳೆಯುವ ಹಂಬಲ. ಆದರೆ ಸಿನಿಮಾದ ಕೆಲಸ ನನಗೆ ಬಿಡುವಿಲ್ಲದಂತೆ ಮಾಡಿದೆ ಅನಿವಾರ್ಯವಾಗಿ ಪ್ರಯಾಣ ಮಾಡಲೇಬೇಕಿರುವುದರಿಂದ ಈ ಜನವರಿ 8 ನಿಮಗೆ ಸಿಗಲು ಸಾಧ್ಯವಾಗುತ್ತಿಲ್ಲ. ನಿಮ್ಮಗಳ ಅಭಿಮಾನ ನನ್ನ ಅನುಪಸ್ಥಿತಿಯನ್ನ ಅರ್ಥ ಮಾಡಿಕೊಳ್ಳುತ್ತದೆ ಎಂಬ ನಂಬಿಕೆ ನನ್ನದು. ಸದಾಕಾಲ ನನ್ನ ಜೊತೆ ಇರುವ ನಿಮ್ಮ ಪ್ರೀತಿ, ಅಭಿಮಾನವೇ ನನಗೆ ಹುಟ್ಟುಹಬ್ಬದ ಉಡುಗೊರೆ.

ನಿಮ್ಮ ಪ್ರೀತಿಯ ಯಶ್ ಎಂದು ಬರೆದುಕೊಂಡಿದ್ದಾರೆ.ಇನ್ನು ಅಭಿಮಾನಿಗಳು ಯಶ್ ಅವರ ಸಿನಿಮಾಗಾಗಿ ಬಹಳ ಕಾತುರದಿಂದ ಕಾಯುತ್ತಿದ್ದರು. ಅದರಂತೆ 'ಟಾಕ್ಸಿಕ್' ಸಿನಿಮಾ ಅನೌನ್ಸ್ ಮಾಡಿದ್ದಾರೆ. ಈಗಾಗಲೇ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಈ ಸಿನಿಮಾದ ಮೇಲೂ ಬಾರೀ ನಿರೀಕ್ಷೆ ಮೂಡಿದೆ.

Advertisement
Advertisement

Advertisement
Tags :
Advertisement