ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 2022 ಹುದ್ದೆಗಳಿಗೆ ಶೀಘ್ರವೇ ನೇಮಕ
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ 2022 ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳು ನೇಮಕಾತಿ ಪತ್ರವನ್ನು ಪಡೆಯಲಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಕಳೆದ ಜನವರಿ 31ರಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ಇಲಾಖೆಯ ಹುದ್ದೆಗೆ ಅಧಿಸೂಚನೆ ಹೊರಡಿಸಿತ್ತು. 24 ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಳ ನೇಮಕಾತಿ ಆದೇಶವನ್ನು ಕರ್ನಾಟಕ ಲೋಕಸೇವಾ ಆಯೋಗವೂ ತಡೆಹಿಡಿದಿತ್ತು. ಇನ್ನುಳಿದಂತೆ ಬೇರೆ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
ಗ್ರಾಮೀಣಾಭಿವೃದ್ಧಿ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ 136 ಕಿರಿಯ ಎಂಜಿನಿಯರ್, 288 ಸಹಾಯಕ ಎಂಜಿನಿಯರ್ ಹಾಗೂ 24 ಸಹಾಯಕ ಕಾರ್ಯಪಾಳ ಎಂಜಿನಿಯರ್ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ ಆದೇಶ ಹೊರಡಿಸಿತ್ತು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಮೀಸಲಾದ ವಿವಿಧ 91 ಹುದ್ದೆಗಳನ್ನುನೇರ ನೇಮಕಾತಿ ಕೋಟಾದಡಿ ಆನ್ಲೈನ್ ಮೂಲಕ ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ತಿಳಿಸಲಾಗಿದೆ.
ಈ ಹುದ್ದೆಗಳಳ್ಲಿ 20 ಕಿರಿಯ ಎಂಜನಿಯರ್, 18 ಪ್ರಥಮ ದರ್ಜೆ ಸಹಾಯಕರು. 3 ಪ್ರಥಮ ದರ್ಜೆ ಲೆಕ್ಕ ಸಹಾಯಕರು, 42 ದ್ವಿತೀಯ ದರ್ಜೆ ಸಹಾಯಕರು ಹಾಗೂ 8 ದ್ವಿತೀಯ ದರ್ಜೆ ಲೆಕ್ಕ ಸಹಾಯರು ಸೇರಿದ್ದು, ಈ ಸಂಬಂಧದಲ್ಲಿ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ ಎಂದೂ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.