Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 2022 ಹುದ್ದೆಗಳಿಗೆ ಶೀಘ್ರವೇ ನೇಮಕ

08:03 PM Mar 01, 2024 IST | suddionenews
Advertisement

 

Advertisement

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ 2022 ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳು ನೇಮಕಾತಿ ಪತ್ರವನ್ನು ಪಡೆಯಲಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ‌.

 

Advertisement

ಕಳೆದ ಜನವರಿ 31ರಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ಇಲಾಖೆಯ ಹುದ್ದೆಗೆ ಅಧಿಸೂಚನೆ ಹೊರಡಿಸಿತ್ತು. 24 ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಳ ನೇಮಕಾತಿ ಆದೇಶವನ್ನು ಕರ್ನಾಟಕ ಲೋಕಸೇವಾ ಆಯೋಗವೂ ತಡೆಹಿಡಿದಿತ್ತು. ಇನ್ನುಳಿದಂತೆ ಬೇರೆ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಗ್ರಾಮೀಣಾಭಿವೃದ್ಧಿ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ 136 ಕಿರಿಯ ಎಂಜಿನಿಯರ್, 288 ಸಹಾಯಕ ಎಂಜಿನಿಯರ್ ಹಾಗೂ 24 ಸಹಾಯಕ ಕಾರ್ಯಪಾಳ ಎಂಜಿನಿಯರ್ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ ಆದೇಶ ಹೊರಡಿಸಿತ್ತು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಮೀಸಲಾದ ವಿವಿಧ 91 ಹುದ್ದೆಗಳನ್ನುನೇರ ನೇಮಕಾತಿ ಕೋಟಾದಡಿ ಆನ್ಲೈನ್ ಮೂಲಕ ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ತಿಳಿಸಲಾಗಿದೆ.

ಈ ಹುದ್ದೆಗಳಳ್ಲಿ 20 ಕಿರಿಯ ಎಂಜನಿಯರ್, 18 ಪ್ರಥಮ ದರ್ಜೆ ಸಹಾಯಕರು. 3 ಪ್ರಥಮ ದರ್ಜೆ ಲೆಕ್ಕ ಸಹಾಯಕರು, 42 ದ್ವಿತೀಯ ದರ್ಜೆ ಸಹಾಯಕರು ಹಾಗೂ 8 ದ್ವಿತೀಯ ದರ್ಜೆ ಲೆಕ್ಕ ಸಹಾಯರು ಸೇರಿದ್ದು, ಈ ಸಂಬಂಧದಲ್ಲಿ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ ಎಂದೂ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.

Advertisement
Tags :
bengaluruchitradurgarecruitmentRural Development and Panchayat Raj DepartmentRural Development and Panchayat Raj Department 2022soonsuddionesuddione newsಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಚಿತ್ರದುರ್ಗನೇಮಕಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್ಹುದ್ದೆಗಳು ಶೀಘ್ರ
Advertisement
Next Article