Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಪರಿಶಿಷ್ಟ ಜಾತಿ ಒಳ ಮೀಸಲಾತಿ : ಏಕಸದಸ್ಯ ಆಯೋಗ ರಚಿಸಿದ ಸರ್ಕಾರ

12:16 PM Nov 14, 2024 IST | suddionenews
Advertisement

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟ ಮಾತಿನಂತೆ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸಲು ವರದಿ ನೀಡುವುದಕ್ಕಾಗಿ ಆಯೋಗ ರಚನೆ ಮಾಡಲಾಗಿದೆ. ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಲಾಗಿದ್ದು, ಸಮಿತಿ ರಚನೆ ಮಾಡಲು ಎರಡು ತಿಂಗಳ ಅವಕಾಶವನ್ನು ನೀಡಲಾಗಿದೆ. ಈ ಸಂಬಂಧ ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಕಲಾವತಿ ಎಸ್.ವಿ. ಸರ್ಕಾರದ ಜಂಟಿ ಕಾರ್ಯದರ್ಶಿ, ಸಮಜಾ ಕಲ್ಯಾಣ ಇಲಾಖೆ ಇವರು ಆದೇಶವನ್ನು ಹೊರಡಿಸಿದ್ದಾರೆ.

Advertisement

ಈ ಆದೇಶ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸಲು Commission of Inquiry Act 1952ರ ಮಾನ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸುವ ಕುರಿತು ಎಂಬ ವಿಷಯ ಒಳಗೊಂಡಿದೆ.

ಪ್ರಸ್ತಾವನೆಯಲ್ಲಿ ಮಾನ್ಯ ಭಾರತ ಸರ್ವೋಚ್ಛ ನ್ಯಾಯಾಲಯವು ಭಾರತದ ಸಂವಿಧಾನದ ಅನುಚ್ಛೇದ 15(4) ಮತ್ತು 16(4) ರ ಅಡಿಯಲ್ಲಿ ಶಿಕ್ಷಣ ಮತ್ತು ರಾಜ್ಯ ಸರ್ಕಾರದ ಅಧೀನದ ಸೇವೆಗಳಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸುವ ಬಗ್ಗೆ ದಿನಾಂಕ 01-08-2024 ರಂದು 6:1ರ ಅನುಪಾತದಲ್ಲಿ ಬಹುಮತದ ನಿರ್ಧಾರದೊಂದಿಗೆ ತೀರ್ಪು ನೀಡಿರುತ್ತದೆ ಎಂದು ಹೇಳಿದೆ.

Advertisement

ಮೇಲ್ಕಂಡ ತೀರ್ಪಿನಂತೆ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಕುರಿತು ಪ್ರಸ್ತಾವನೆಯನ್ನು ಸಚಿವ ಸಂಪುಟಕ್ಕೆ ಮಂಡಿಸಲಾಗಿದ್ದು, ಸಚಿವ ಸಂಪುಟವು ದಿನಾಂಕ 28-10-2024 ರಲ್ಲಿ ಮಾನ್ಯ ಸರ್ವೋಚ್ಛ ನ್ಯಾಯಾಲಯದ ದಿನಾಂಕ 01.08.2024 ರಂತೆ ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಲು ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ಸೂಕ್ತ ಶಿಫಾರಸಿ ನೊಂದಿಗೆ ವರದಿ ಸಲ್ಲಿಸಲು ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಆಯೋಗವನ್ನು ರಚಿಸಲು ಅನುಮೋದಿಸಿರುತ್ತದೆ.

Advertisement
Tags :
Caste Internal Reservationkarnataka GovtSingle Member Commissionಏಕಸದಸ್ಯ ಆಯೋಗಒಳ ಮೀಸಲಾತಿಕರ್ನಾಟಕ ಸರ್ಕಾರಪರಿಶಿಷ್ಟ ಜಾತಿ
Advertisement
Next Article