ಹಿರಿಯ ಸಾಹಿತಿ ಪ್ರೊ.ಅಮೃತ ಸೋಮೇಶ್ವರ ನಿಧನ : ಸಿಎಂ ಸಿದ್ದರಾಮಯ್ಯ ಸಂತಾಪ
ಮಂಗಳೂರು: ನಾಡಿನ ಹಿರಿಯ ಸಾಹಿತಿ ಪ್ರೊ.ಅಮೃತ ಸೋಮೇಶ್ವರ ಅವರು ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ. ಸಾಹಿತಿ ಸೋಮೇಶ್ವರ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು ನಿಧನರಾಗಿದ್ದಾರೆ.
ಕನ್ನಡ ಮತ್ತು ತುಳು ಭಾಷೆಯಲ್ಲಿ ತಮ್ಮ ಕೃತಿಗಳನ್ನು ಪ್ರಸ್ತುಪಡಿಸುತ್ತಿದ್ದರು. ಅದರ ಜೊತೆಗೆ ಯಕ್ಷಗಾನ, ಜಾನಪದ, ತುಳು, ಕನ್ನಡದಲ್ಲಿ ತಮ್ಮ ಸಾಹಿತ್ಯದ ಘಮಲು ತೋರಿಸಿದ್ದರು. ಇದರ ಜೊತೆಗೆ ಕಥೆ, ಕವನ, ಕಾದಂಬರಿಗಳನ್ನು ಬರೆದಿದ್ದರು. ಕಳೆದ ಎರಡಯ ವರ್ಷದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಸಾಹಿತಿಗಳು ಇಂದು ನಿಧನರಾಗಿದ್ದಾರೆ.
ಇನ್ನು ಸಾಹಿತಿಗಳ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. ಪ್ರಖ್ಯಾತ ಜಾನಪದ ವಿದ್ವಾಂಸ, ಸಂಸ್ಕೃತಿ ಚಿಂತಕ ಮತ್ತು ಶಿಷ್ಯರ ಮೆಚ್ಚಿನ ಗುರು ಪ್ರೊ.ಅಮೃತ ಸೋಮೇಶ್ವರ ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬ ಸದಸ್ಯರು ಮತ್ತು ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.