ಬಿವೈ ರಾಘವೇಂದ್ರರನ್ನು ಗೆಲ್ಲಿಸಿ ಎಂದ ಶಾಮನೂರು: ಕಾಂಗ್ರೆಸ್ ನಾಯಕರಿಂದ ಆಕ್ರೋಶ
ಮೈಸೂರು: ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಈ ಬೆನ್ನಲ್ಲೇ ಬಿಎಸ್ವೈ ಪುತ್ರ ಬಿವೈ ರಾಘವೇಂದ್ರ ಅವರನ್ನು ಗೆಲ್ಲಿಸಿ ಎಂದು ಶಾಮನೂರು ಶಿವಶಂಕರಪ್ಪ ನೀಡಿದ ಹೇಳಿಕೆ ಕಾಂಗ್ರೆಸ್ ನಲ್ಲಿ ಚರ್ಚೆಗೆ ಗ್ರಾಸವಾಗಿದೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂಬ ಒತ್ತಾಯ ಕೇಳಿ ಬರುತ್ತಿದೆ. ಕೆಲ ಕಾಂಗ್ರೆಸ್ ಹಿರಿಯ ನಾಯಕರು ಶಾಮನೂರು ಶಿವಶಂಕರಪ್ಪ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಹೆಚ್ ವಿಶ್ವನಾಥ್, ಹಣವಿದೆ ಎಲ್ಲರನ್ನೂ ಕೊಂಡುಕೊಳ್ಳಬಹುದು ಎಂದುಕೊಂಡಿದ್ದಾರೆ. ನಮ್ಮವರೇ ಸರಿ ಇಲ್ಲ. ಸಿಎಂ, ಮಂತ್ರಿಗಳು ಅವರ ಮೇಲೆ ಡಿಪೆಂಡ್ ಆಗಿದ್ದಾರೆ. ಅಲ್ಲಿಗೆ ಹೋದಾಗ ಶಾಮನೂರು ಗೆಸ್ಟ್ ಹೌಸ್ ನಲ್ಲೇ ಮಲಗುತ್ತಾರೆ. ಕಾಂಗ್ರೆಸ್ ಜೀವಂತವಾಗಿದ್ದರೆ ಶಾಮನೂರು ಅವರನ್ನು ಅಮಾನತು ಮಾಡಿ ಎಂದು ಆಗ್ರಹಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಇಲ್ಲದಿದ್ದರೆ ಕಾಂಗ್ರೆಸ್ ನಡೆಯಲ್ವಾ..? ಶಾಮನೂರು ಶಿವಶಂಕರಪ್ಪರನ್ನು ಕಾಂಗ್ರೆಸ್ ನಿಂದ ಹೊರಗೆ ತಳ್ಳಿ, ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪನಿಗೆ ನಾಚಿಕೆ ಆಗಲ್ವಾ..? ಎಂದು ವಾಗ್ದಾಳಿ ನಡೆಸಿದರು.
ನಮ್ಮವರೇ ಸರಿ ಇಲ್ಲ. ನಮ್ಮ ಮಂತ್ರಿಗಳು ಮುಖ್ಯಮಂತ್ರಿಗಳು ಅವರ ಮೇಲೆ ಡಿಫೆಂಡ್ ಆಗಿದ್ದಾರೆ. ಅಲ್ಲಿಗೆ ಹೋದಾಗ ಅವರ ಗೆಸ್ಟ್ ಹೌಸ್‌ನಲ್ಲೇ ಮಲಗುತ್ತಾರೆ. ಕಾಂಗ್ರೆಸ್ ಪಕ್ಷ ಜೀವಂತವಾಗಿದ್ದರೆ ಶಿವಕುಮಾರ್ ಬಂಡೆಯಾಗಿದ್ದರೆ ಅಮಾನತು ಮಾಡಿ. ಅವನು ಇಲ್ಲದಿದ್ದರೆ ಕಾಂಗ್ರೆಸ್ ನಡೆಯಲ್ವಾ ಎಂದು ಏಕವಚನದಲ್ಲಿ ಶ್ಯಾಮನೂರು ಶಿವಶಂಕರಪ್ಪ ವಿರುದ್ದ ವಾಗ್ದಾಳಿ ನಡೆಸಿದರು. ಇದರ ಜೊತೆಗೆ ಚಿತ್ರದುರ್ಗದ ಸಭೆಯಲ್ಲಿ ಸಚಿವ ಕೆ ಎನ್ ರಾಜಣ್ಣ ಕೂಡ ಶಾಮನೂರು ಶಿವಶಂಕರಪ್ಪ ಬಗ್ಗೆ ಆಕ್ರೋಶ ಹೊರ ಹಾಕಿದ್ದು, ಶಾಮನೂರು ಶಿವಶಂಕರಪ್ಪರಿಗೆ ಇದು ಶೋಭೆ ತರುವಂತದ್ದಲ್ಲ. ಕೆಪಿಸಿಸಿ ಅಧ್ಯಕ್ಷರು ಏನು ಕ್ರಮ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡಬೇಕಿದೆ ಎಂದಿದ್ದಾರೆ.