For the best experience, open
https://m.suddione.com
on your mobile browser.
Advertisement

ಐದನೇ ಬಾರಿಗೆ ಬಾಂಗ್ಲಾದೇಶದ ಪ್ರಧಾನಿಯಾಗಿ ಶೇಖ್ ಹಸೀನಾ ಗೆಲುವು..

09:40 AM Jan 08, 2024 IST | suddionenews
ಐದನೇ ಬಾರಿಗೆ ಬಾಂಗ್ಲಾದೇಶದ ಪ್ರಧಾನಿಯಾಗಿ ಶೇಖ್ ಹಸೀನಾ ಗೆಲುವು
Advertisement

Advertisement

ಸುದ್ದಿಒನ್ : ಬಾಂಗ್ಲಾದೇಶದಲ್ಲಿ ನಡೆದ ಚುನಾವಣೆಯಲ್ಲಿ ಶೇಖ್ ಹಸೀನಾ ಅವರ ಆಡಳಿತ ಪಕ್ಷ ಮತ್ತೊಮ್ಮೆ ಭರ್ಜರಿ ಜಯ ಸಾಧಿಸಿದೆ. 

Advertisement

ಶೇಖ್ ಹಸೀನಾ ಅವರ ಪಕ್ಷವು ಸತತ ನಾಲ್ಕನೇ ಬಾರಿಗೆ ಚುನಾವಣೆಯಲ್ಲಿ ಜಯಗಳಿಸಿದೆ. ಮಿತ್ರಪಕ್ಷಗಳೊಂದಿಗೆ ಪ್ರಮುಖ ಪ್ರತಿಪಕ್ಷವೂ ಈ ಚುನಾವಣೆಯನ್ನು ಬಹಿಷ್ಕರಿಸಿ ಸ್ಪರ್ಧೆಯಿಂದ ದೂರ ಉಳಿದರೆ, ಆಡಳಿತ ಪಕ್ಷವು ಮೂರನೇ ಎರಡರಷ್ಟು ಸ್ಥಾನಗಳನ್ನು ಗೆದ್ದು ಅಧಿಕಾರವನ್ನು ಪಡೆದುಕೊಂಡಿತು.

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಮೂರನೇ ಎರಡರಷ್ಟು ಸ್ಥಾನಗಳನ್ನು ಗೆದ್ದಿದೆ. ಬಾಂಗ್ಲಾದೇಶದ ಪ್ರಮುಖ ವಿರೋಧ ಪಕ್ಷವಾದ BNP ಮತ್ತು ಅದರ ಮಿತ್ರಪಕ್ಷಗಳು ಸಾರ್ವತ್ರಿಕ ಚುನಾವಣೆಗಳನ್ನು ಬಹಿಷ್ಕರಿಸಿದ್ದವು. ಇದರಿಂದ ಆ ಪಕ್ಷಗಳೆಲ್ಲ ಈ ಬಾರಿಯ ಚುನಾವಣೆಯಿಂದ ದೂರ ಉಳಿದಿವೆ. ಇದರ ಪರಿಣಾಮವಾಗಿ ಅವಾಮಿ ಲೀಗ್ 300 ಸ್ಥಾನಗಳಲ್ಲಿ 299 ಸ್ಥಾನಗಳಲ್ಲಿ 200 ಸ್ಥಾನಗಳನ್ನು ಗೆದ್ದುಕೊಂಡಿತು. ಈ ಗೆಲುವಿನೊಂದಿಗೆ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಸತತ ನಾಲ್ಕನೇ ಬಾರಿಗೆ ಅಧಿಕಾರಕ್ಕೆ ಬರಲು ಸಜ್ಜಾಗಿದೆ.

ಗೋಪಾಲ್‌ಗಂಜ್-3 ಸ್ಥಾನದಿಂದ ಸ್ಪರ್ಧಿಸಿದ್ದ ಪ್ರಧಾನಿ ಶೇಖ್ ಹಸೀನಾ ಅತಿ ದೊಡ್ಡ ಗೆಲುವು ದಾಖಲಿಸಿದ್ದಾರೆ. ಶೇಖ್ ಹಸೀನಾ 2,49,965 ಮತಗಳನ್ನು ಪಡೆದರೆ, ಅವರ ಸಮೀಪದ ಪ್ರತಿಸ್ಪರ್ಧಿ ಬಾಂಗ್ಲಾದೇಶ ಸುಪ್ರೀಂ ಪಾರ್ಟಿಯ ನಿಜಾಮುದ್ದೀನ್ ಲಷ್ಕರ್ ಕೇವಲ 469 ಮತಗಳನ್ನು ಪಡೆದರು. 1986ರಿಂದ ಶೇಖ್ ಹಸೀನಾ ಅವರ ಭದ್ರಕೋಟೆಯಾಗಿರುವ ಗೋಪಾಲಗಂಜ್-3 ಸತತ 8 ಬಾರಿ ಅವಿರೋಧ ಗೆಲುವು ದಾಖಲಿಸಿರುವುದು ಗಮನಾರ್ಹ.

ಈ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನೊಂದಿಗೆ 76 ವರ್ಷದ ಶೇಖ್ ಹಸೀನಾ ಅವರು ಸತತ ನಾಲ್ಕನೇ ಬಾರಿಗೆ ಮತ್ತು ಒಟ್ಟು ಐದನೇ ಬಾರಿಗೆ ಪ್ರಧಾನಿ ಹುದ್ದೆಯನ್ನು ಅಲಂಕರಿಸಲಿದ್ದಾರೆ. ಆದರೆ, ವಿರೋಧ ಪಕ್ಷಗಳು ಚುನಾವಣೆಗೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆಗಳನ್ನು ನಡೆಸಿದ್ದರಿಂದ ಬಾಂಗ್ಲಾದೇಶದಾದ್ಯಂತ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಏಕಪಕ್ಷೀಯ ಚುನಾವಣೆಯಲ್ಲಿ ಕನಿಷ್ಠ ಶೇಕಡಾವಾರು ಮತಗಳು ಚಲಾವಣೆಯಾಗಿವೆ. ಬಾಂಗ್ಲಾದೇಶ ಚುನಾವಣಾ ಅಧಿಕಾರಿಗಳ ಅಂದಾಜಿನ ಪ್ರಕಾರ ಶೇ.40ರಷ್ಟು ಮತದಾನ ಮಾತ್ರ ದಾಖಲಾಗಿದೆ. ಆದರೆ ಸಂಪೂರ್ಣ ಫಲಿತಾಂಶ ಇನ್ನೂ ಲಭ್ಯವಾಗಿಲ್ಲ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಒಟ್ಟು ಶೇ.80ರಷ್ಟು ಮತದಾನ ದಾಖಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags :
Advertisement