ಶಿಗ್ಗಾವಿ ಬೈಎಲೆಕ್ಷನ್ : ಕಾಂಗ್ರೆಸ್ ನಿಂದ ಇಬ್ಬರು ಬಂಡಾಯ : ಸಿದ್ದರಾಮಯ್ಯ ಮಾತಿನಿಂದ ನಾಮಪತ್ರ ವಾಪಾಸ್ ಪಡೆಯುತ್ತಾರಾ..?
ಹಾವೇರಿ: ರಾಜ್ಯದಲ್ಲಿ ಉಪಚುನಾವಣೆಯ ಬಿಸಿ ಎಷ್ಟಿದೆ ಅಂದರೆ ಮಳೆಗಾಲದಲ್ಲೂ ರಾಜಕಾರಣಿಗಳು ಬೆವರುತ್ತಿದ್ದಾರೆ. ಮೂರು ಕ್ಷೇತ್ರದಲ್ಲೂ ಜನರ ಮನಸ್ಸನ್ನು ಗೆಲ್ಲಲು ಓಡಾಟ ಶುರು ಮಾಡಿದ್ದಾರೆ. ಶಿಗ್ಗಾಂವಿ ಉಪಚುನಾವಣಾ ಕ್ಷೇತ್ರ ಕೂಡ ಈಗ ಗಮನ ಸೆಳೆಯುತ್ತಿದೆ. ಇಲ್ಲಿ ಬಿಜೆಪಿಯಿಂದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಸ್ಪರ್ಧೆ ಮಾಡಿದ್ದಾರೆ. ಕಾಂಗ್ರೆಸ್ ನಿಂದ ಯಾಸಿರ್ ಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಕ್ಷೇತ್ರದಲ್ಲೂ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರಾ ಹಣಹಣಿ ಏರ್ಪಟ್ಟಿದೆ.
ಇದರ ನಡುವೆ ಕಾಂಗ್ರೆಸ್ ನಿಂದಾನೇ ಬಂಡಾಯವೆದ್ದಿದ್ದಾರೆ. ಯಾಸಿರ್ ಗೆ ಟಿಕೆಟ್ ಕೊಟ್ಟಿದ್ದನ್ನು ಕಾಂಗ್ರೆಸ್ ನ ಹಲವರು ವಿರೋಧಿಸಿದ್ದಾರೆ. ಹೀಗಾಗಿ ಟಿಕೆಟ್ ನಿರೀಕ್ಷೆಯಲ್ಲಿದ್ದ ಇಬ್ಬರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದು ಕಾಂಗ್ರೆಸ್ ಗೆ ದೊಡ್ಡ ತಲೆನೋವಾಗಿದೆ. ಈಗ ಪಕ್ಷ ಗೆಲ್ಲುವುದು ಬಹಳ ಮುಖ್ಯ. ಹೀಗಾಗಿ ಬಂಡಾಯ, ಮಾನಸ್ತಾಪ ಶಮನಕ್ಕೆ ಸಿಎಂ ಸಿದ್ದರಾಮಯ್ಯ ಅವರೇ ನೇರವಾಗಿ ಧುಮುಕಿದ್ದಾರೆ.
ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದ ಅಜ್ಜಂಪೀರ್ ಖಾದ್ರಿಯನ್ನು ಸಿಎಂ ಸಿದ್ದರಾಮಯ್ಯ ತಮ್ಮ ಬೆಂಗಳೂರಿನ ಗೃಹ ಕಚೇರಿಯಲ್ಲಿ ಭೇಟಿಯಾಗಿದ್ದಾರೆ. ಆದರೆ ಈ ವೇಳೆ ಖಾದ್ರಿ ಅವರ ಬೇಡಿಕೆಗೆ ಸಿದ್ದರಾಮಯ್ಯ ಅವರು ಒಪ್ಪಿಲ್ಲ. ನಾಮಪತ್ರ ವಾಪಸ್ ಪಡೆಯಲು ಖಾದ್ರಿ ಅವರು ಒಪ್ಪಿಲ್ಲ ಎಂಬುದು ಮೂಲಗಳಿಂದ ಬಂದ ಮಾಹಿತಿಯಾಗಿದೆ. ಈಗ ಖಾದ್ರಿ ಅವರ ಮನವೊಲಿಕೆ ಮಾಡುವ ಜವಾಬ್ದಾರಿಯನ್ನು ಸಿದ್ದರಾಮಯ್ಯ ಅವರು ಜಮೀರ್ ಅಹ್ಮದ್ ಖಾನ್ ಅವರ ಮೇಲೆ ಬಿಟ್ಟಿದ್ದಾರೆ ಎನ್ನಲಾಗಿದೆ. ನಾಮಪತ್ರ ವಾಪಾಸ್ ತೆಗೆದುಕೊಳ್ಳಲು ಅಕ್ಟೋಬರ್ 30 ಕಡೆಯ ದಿನವಾಗಿದೆ.