For the best experience, open
https://m.suddione.com
on your mobile browser.
Advertisement

ತವರು ಕ್ಷೇತ್ರದಲ್ಲೇ ರಾಜಕೀಯ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ

12:34 PM Apr 02, 2024 IST | suddionenews
ತವರು ಕ್ಷೇತ್ರದಲ್ಲೇ ರಾಜಕೀಯ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ
Advertisement

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಕೂಡ ತಮ್ಮ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ನಿರತರಾಗಿದ್ದಾರೆ. ಮೈಸೂರಿನಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಸಿಎಂ ಸಿದ್ದರಾಮಯ್ಯ ತವರಿನಲ್ಲಿಯೇ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

Advertisement

ಮೈಸೂರಿನಲ್ಲಿ ತಮ್ಮ ನಿವೃತ್ತಿ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ನನಗೆ ವಯಸ್ಸಾಗುತ್ತಿದೆ. ಮುಂದಿನ ನಾಲ್ಕು ವರ್ಷಗಳ ಬಳಿಕ ವಿಧಾನಸಭಾ ಚುನಾವಣೆ ಎದುರಾಗಲಿದೆ. ನಾನು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲಿದ್ದೇನೆ ಎಂದು ತಿಳಿಸಿದ್ದಾರೆ. ಈ ಮಾತು ಸಿದ್ದರಾಮಯ್ಯ ಅವರ ಅಭಿಮಾನಿಗಳಿಗೆ ಆಘಾತ ತಂದಿದೆ.

ರಾಜಕೀಯದಿಂದ ನಿವೃತ್ತಿ ಪಡೆಯಿವುದರ ಬಗ್ಗೆ ಹಲವು ಕಾತಣಗಳನ್ನು ತಿಳಿಸಿದ್ದಾರೆ. ಅವರವರ ದೇಹಸ್ಥಿತಿ, ಆರೊಇಗ್ಯದ ಬಗ್ಗೆ ಅವರಿಗೆ ಗೊತ್ತಿರುತ್ತದೆ. ನನಗೆ ಮೊದಲಿನಂತೆ ಉತ್ಸಾಹಭರಿತವಾಗಿ ಕೆಲಸ ಮಾಡಲು ಆಗುತ್ತಿಲ್ಲ. ನನಗೆ ಯಾವ ಆತಂಕವೂ ಇಲ್ಲ. ಆತಂಕ ಇದ್ದರೆ ಮಾತ್ರ ಟೆನ್ಶನ್ ಇರುತ್ತದೆ. ಹೀಗಾಗಿ ನಾನು ಚುನಾವಣಾ ರಾಜಕಾರಣದಿಂದ ಹಿಂದೆ ಅರಿತುವ ನಿರ್ಧಾರ ಮಾಡಿದ್ದೇನೆ ಎಂದಿದ್ದಾರೆ.

Advertisement

2013ರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಸಂಪೂರ್ಣ ಸಿಎಂ ಆಗಿ ಆಡಳಿತ ನಡೆಸಿ, ದಾಖಲೆ ಬರೆದಿದ್ದರು. ಇದೀಗ ಈ ಬಾರಿಯೂ ಸಿಎಂ ಸ್ಥಾನ ಅಲಂಕರಿಸಿದ್ದಾರೆ. ಐದು ವರ್ಷಗಳ ಕಾಲ ಪೂರ್ಣ ಪ್ರಮಾಣದ ಸಿಎಂ ಆಗಿ ಮುಂದುವರೆದರೆ ಮತ್ತೊಂದು ದಾಖಲೆಯಾಗುತ್ತದೆ. ಆದರೆ ಇದರ ನಡುವೆ ಕಾಂಗ್ರೆಸ್ ನಲ್ಲಿ ಲೋಕಸಭಾ ಚುನಾವಣೆ ಬಳಿಕ ಅಥವಾ ಎರಡೂವರೆ ವರ್ಷದ ಬಳಿಕ ಸಿಎಂ ಬದಲಾವಣೆಯಾಗುತ್ತೆ ಎಂಬ ಮಾತು ಕೇಳಿ ಬರುತ್ತಿದೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ಅವರೇ ರಾಜಕೀಯ ನಿವೃತ್ತಿ ಬೇರೆ ಘೋಷಿಸಿದ್ದಾರೆ.

Tags :
Advertisement