Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಯಡಿಯೂರಪ್ಪ, ಶ್ರೀರಾಮುಲುಗೆ ಎಸ್ಐಟಿ ಸಂಕಷ್ಟ..!

07:55 AM Nov 15, 2024 IST | suddionenews
Advertisement

ಬೆಂಗಳೂರು: ಬಿಜೆಪಿ ಸರ್ಕಾರವಿದ್ದಾಗ ಕೋವಿಡ್ ಕಾಲದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈಗ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಎಸ್ಐಟಿ ತನಿಖೆಗೆ ಒಪ್ಪಿಸಿದೆ. ನಿವೃತ್ತ ನ್ಯಾಯಮೂರ್ತಿ ಮೂಲಕ ಈ ಹಗರಣದ ತನಿಖೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಇದು ಯಡಿಯೂರಪ್ಪ ಹಾಗೂ ಶ್ರೀರಾಮುಲು ಅವರಿಗೆ ಸಂಕಷ್ಟ ತಂದೊಡ್ಡಲಿದೆ. ಇಬ್ಬರು ಈಗ ಎಸ್ಐಟಿ ತನಿಖೆ ಎದುರಿಸಬೇಕಾಗಿದೆ.

Advertisement

ಈ ಸಂಬಂಧ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಕೋವಿಡ್ ಸಮಯದಲ್ಲಿ ಸರ್ಕಾರದ ಅಧಿಕಾರಿಗಳು ಅಧಖಾರಸ್ಥ ರಾಜಕಾರಣಿಗಳ ಅಪವಿತ್ರ ಮೈತ್ರಿಯ ಫಲವಾಗಿ ನಡೆದ ಭ್ರಷ್ಟಾಚಾರ, ಹಗರಣಗಳ ಕುರಿತು ಸತ್ಯಾಂಶಗಳು ಲಭ್ಯವಾಗಿದ್ದವು. ಕೋವಿಡ್ ನಿಂದ ಜಗತ್ತಿನಲ್ಲಿ ಅಲ್ಲೋಲ ಕಲ್ಲೋಲವಾಗಿತ್ತು. ಕರ್ನಾಟಕ ಆ ಸಂದರ್ಭದಲ್ಲಿ ದುರಂತವನ್ನು ಅನುಭವಿಸಿತ್ತು. ಜನರನ್ನು ರಕ್ಷಣೆ ಮಾಡಬೇಕಿದ್ದಂತ ಸಂದರ್ಭದಲ್ಲಿ ಬೇಜವಾಬ್ದಾರಿತನ, ಜನರಿಗೆ ಮೋಸ, ಭ್ರಷ್ಟಾಚಾರವನ್ನೆಲ್ಲ ಬಚ್ಚಿಟ್ಟುಕೊಳ್ಳುವ ಪ್ರಯತ್ನ ಹಾಗೂ ಸರ್ಕಾರದ ಯಾವುದೇ ಮಾಹಿತಿ ಜನರಿಗೆ ಸಿಗದಂತೆ ಅಂದಿನ ಸರ್ಕಾರ ಮಾಡಿತ್ತು. ಸಾರ್ವಜನಿಕರ ಲೆಕ್ಕಪತ್ರ ಸಮಿತಿಯಂತಹ ಮಹತ್ವದ ಸಮಿತಿಗಳ ಕಾರ್ಯನಿರ್ವಹಣೆಗೆ ಅಡ್ಡಿಯುಂಟು ಮಾಡಿದ ಮಹತ್ವದ ಘಟನೆಗಳು ನಡೆದು ಹೋದವು. ಶಾಸನಬದ್ಧ ಸಮಿತಿಗಳ ಕಾರ್ಯನಿರ್ವಹಣೆಯನ್ನು ಅಸಾಧ್ಯವೆನ್ನುವ ರೀತಿಯಲ್ಲಿ ವಾತಾವರಣ ನಿರ್ಮಾಣ ಮಾಡಲಾಯಿತು ಮತ್ತು ಕಡಿವಾಣ ಹಾಕಲಾಗಿತ್ತು. ಸಮಿತಿಗಳ ಕಾರ್ಯನಿರ್ವಹಣೆಯನ್ನು ತಡೆದು ಭ್ರಷ್ಟಾಚಾರವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆದಿತ್ತು.

ಕೋರೋನಾ ಸಂದರ್ಭದಲ್ಲಿ 330 ರಿಂದ 400 ರೂ ಗಳಿಗೆ ಲಭ್ಯವಿದ್ದ ಪಿಪಿಇ ಕಿಟ್ ಗಳನ್ನು 2117 ರೂ.ಗೆ ಖರೀದಿಸಲಾಯಿತು. 3 ಲಕ್ಷ ಕಿಟ್ ಖರಿದಿಸಲಾಯಿತು. ಆಮದು ಸಾಗಣೆ ವೆಚ್ಚ ನೀಡಿ ಅನುಮಾನಾಸ್ಪದ ವೆಚ್ಚ ಮಾಡಲಾಯಿತು. ಚೀನಾ ಕಂಪನಿಗಳಿಗೆ ಲಾಭ ಮಾಡಿಕೊಡಲಾಯಿತು. ಒಂದೇ ದಿನ ಎರಡು ದರಗಳಲ್ಲಿ 2117.53 ಹಾಗು 2104 ರೂ ಗೆ ಖರೀದಿ ಮಾಡಲಾಯಿತು. ಅದೇ ದಿನ 2049 ರೂ ಗಳಂತೆ ಇನ್ನೊಂದು ಕಂಪನಿಯಿಂದ ಖರೀದಿಸಲಾಯಿತು ಎಂಬ ಮಾಹಿತಿಯನ್ನು ನೀಡಿದ್ದಾರೆ.

Advertisement

Advertisement
Tags :
B. SriramulubengaluruchitradurgakannadaKannadaNewsSIT troublesuddionesuddionenewsYeddyurappaಎಸ್ಐಟಿ ಸಂಕಷ್ಟಕನ್ನಡಕನ್ನಡವಾರ್ತೆಕನ್ನಡಸುದ್ದಿಚಿತ್ರದುರ್ಗಬೆಂಗಳೂರುಯಡಿಯೂರಪ್ಪಶ್ರೀರಾಮುಲುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article