Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಎಸ್.ಎಂ.ಕೃಷ್ಣ ಬೆನ್ನಲ್ಲೇ ಸಿಎಂ ಆಪ್ತ, ಮಾಜಿ ಶಾಸಕ ಜಯಣ್ಣ ನಿಧನ..!

04:27 PM Dec 10, 2024 IST | suddionenews
Advertisement

 

Advertisement

 

ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ಅವರಿಗೆ ಅರಗಿಸಿಕೊಳ್ಳಲಾಗದ ಎರಡೆರಡು ನಿಧನದ ಸುದ್ದಿ. ಎಸ್.ಎಂ.ಕೃಷ್ಣ ಅವರಿಂದ ಸಾಕಷ್ಟು ರಾಜಕೀಯದ ಪಾಠ ಕಲಿತಿದ್ದಾರೆ ಸಿಎಂ ಸಿದ್ದರಾಮಯ್ಯ ಅವರು‌ ಅವರ ನಿಧನದಿಂದ ದುಃಖತಪ್ತರಾಗಿದ್ದರು. ಆದರೆ ಮಧ್ಯಾಹ್ನದ ವೇಳೆಗೆ ಇನ್ನೊಂದು ಆಘಾತಕಾರಿ ಸುದ್ದಿ ಸಿಕ್ಕಿದೆ. ಅವರ ಆಪ್ತರಾಗಿದ್ದ ಎಸ್.ಜಯಣ್ಣ ನಿಧ‌ರಾಗಿದ್ದಾರೆ.

Advertisement

ಎಸ್.ಜಯಣ್ಣನವರು ಕೊಳ್ಳೆಗಾಲದ ಮಾಜಿ ಶಾಸಕರು ಹಾಗೂ ಉಗ್ರಾಣ ನಿಗಮದ ಅಧ್ಯಕ್ಷರು ಆಗಿದ್ದರು. ವಯೋಸಹಜ ಕಾಯಿಲೆಯಿಂದ ಇಂದು ನಿಧ‌ರಾಗಿದ್ದಾರೆ. ಎಸ್.ಜಯಣ್ಣ ಅವರಿಗೆ ಉಸಿರಾಟದ ತೊಂದರೆ ಇತ್ತು ಎನ್ನಲಾಗಿದೆ. ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಜಯಣ್ಣ ಅವರನ್ನ ಆಸ್ಪತ್ರೆಗೆ ಕರೆದುಕೊಂಡು ಜೋಗುವ ಮಾರ್ಗ ಮಧ್ಯೆ ನಿಧನರಾಗಿದ್ದಾರೆ.

ಜಯಣ್ಣ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಎಸ್.ಎಂ.ಕೃಷ್ಣ ಅವರ ಸಾವಿನ ಆಘಾತದಿಂದ ಚೇತರಿಸಿಕೊಳ್ಳುವ ಮೊದಲೇ ಜಯಣ್ಣ ಅವರ ಸಾವಿನ ಸುದ್ದಿ ಆಘಾತ ತಂದಿದೆ. ಜಯಣ್ಣ ನನ್ನ ಆತ್ಮೀಯರು. ನಮ್ಮ ನಡುವೆ ದೀರ್ಘಕಾಲ್ ಒಡನಾಟವಿತ್ತು. 1994ರಲ್ಲಿ ಜೆಡಿಎಸ್ ನಿಂದ ಹಾಗೂ 2013ರಲ್ಲಿ ಕಾಂಗ್ರೆಸ್ ನಿಂದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದರು. ಪಕ್ಷ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಶ್ರಮವಹಿಸಿ ಕೆಲಸ ಮಾಡಿದ ಜಯಣ್ಣ ಜನಾನುರಾಗಿ ಶಾಸಕರಾಗಿದ್ದರು. ಜನರ ಕಷ್ಟಗಳಿಗೆ ಸದಾ ಮಿಡಿಯುತ್ತಿದ್ದರು. ಡಿಸೆಂಬರ್ 7ರಂದು ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಜೊತೆಗಿದ್ದರು. ಅವರ ಮನೆಯಲ್ಲಿಯೆ ಊಟ ಮಾಡಿ ಬಂದಿದ್ದೆವು. ಜಯಣ್ಣ ಅವರ ಸಾವು ವೈಯಕ್ತಿಕವಾಗಿ ಆಘಾತ ತಂದಿದೆ. ಅವರ ನಿಧನದಿಂದ ಜನಪ್ರಿಯ ರಾಜಕಾರಣಿಯನ್ನು ಕಳೆದುಕೊಂಡಂತೆ ಆಗಿದೆ. ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ ಎಂದಿದ್ದಾರೆ.

Advertisement
Tags :
bengaluruchitradurgaCMformer MLA JayannakannadaKannadaNewsSm krishnasuddionesuddionenewsಆಪ್ತಎಸ್ ಎಂ ಕೃಷ್ಣಕನ್ನಡಕನ್ನಡವಾರ್ತೆಕನ್ನಡಸುದ್ದಿಚಿತ್ರದುರ್ಗಜಯಣ್ಣ ನಿಧನಬೆಂಗಳೂರುಮಾಜಿ ಶಾಸಕಸಿಎಂಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article