ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ : 1.30ಕ್ಕೆ ಪರೀಕ್ಷೆ ಮುಗಿದ ಬಳಿಕ ಬಿಸಿಯೂಟದ ವ್ಯವಸ್ಥೆ
11:03 AM Mar 25, 2024 IST | suddionenews
Advertisement
ಬೆಂಗಳೂರು: ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿದೆ. 2023-24ನೇ ಸಾಲಿನ ಪರೀಕ್ಷೆ ಇಂದಿನಿಂದ ಏಪ್ರಿಲ್4ರ ತನಕ ನಡೆಯಲಿದೆ. ರಾಜ್ಯಾದ್ಯಂತ ಒಟ್ಟು 8,69,968 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ರಾಜ್ಯದ 7,750 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಇನ್ನು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಅಧಿಕಾರಿ/ಸಿಬ್ಬಂದಿಗೆ ಮೊಬೈನ್ ಫೋನ್ ಬಳಕೆ ನಿಷೇಧ ಮಾಡಲಾಗಿದೆ.
Advertisement
ಪರೀಕ್ಷಾ ಕೇಂದ್ರಗಳ ಸುತ್ತ 200ಮೀ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಈ ಮೂಲಕ ಅವ್ಯವಹಾರದ ಮೇಲೆ ನಿಗಾ ಇಡಲಾಗಿದೆ.
ಮಾರ್ಚ್ 25ರಿಂದ ಏಪ್ರಿಲ್ 4ರ ತನಕ ಪರೀಕ್ಷೆ ನಡೆಯಲಿದೆ. ಇದರ ನಡುವೆ ಬಸ್ ನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ. ಅಷ್ಟೇ ಅಲ್ಲ ವಿದ್ಯಾರ್ಥಿಗಳು ಪರೀಕ್ಷೆ ಮುಗಿಸಿದ ಬಳಿಕ ಬಿಸಿಯೂಟದ ವ್ಯವಸ್ಥೆಯನ್ನು ಮಾಡಲಾಗಿದೆ.