Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

SSLC, PUC ಪರೀಕ್ಷೆ ದಿನಾಂಕ ಪ್ರಕಟ...!

02:25 PM Feb 20, 2024 IST | suddionenews
Advertisement

 

Advertisement

ಬೆಂಗಳೂರು: 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯ ದಿನಾಂಕ ಪ್ರಕಟವಾಗಿದೆ. ಮಾರ್ಚ್ 1ರಿಂದ 22ರ ತನಕ ದ್ವಿತೀಯ ಪಿಯುಸಿ ಪರೀಕ್ಷೆ ನಡೆದರೆ ಮಾರ್ಚ್ 25ರಿಂದ ಜೂನ್ 6ರ ತನಕ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ.

 

Advertisement

ಈ ವರ್ಷ 8,96,271 ಮಕ್ಕಳು ಎಸ್​ಎಸ್​ಎಲ್​ಸಿ ಪರೀಕ್ಷೆ ಪರೀಕ್ಷೆ ಬರೆಯತ್ತಿದ್ದಾರೆ. 2,741 ಪರೀಕ್ಷಾ ಕೇಂದ್ರಗಳಿವೆ. ಇನ್ನು 6,98, 624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. ಮೂರೂ ಪರೀಕ್ಷೆಯಲ್ಲಿನ ಗರಿಷ್ಠ ಅಂಕ ಪರಿಗಣನೆ ತೆಗೆದುಕೊಳ್ಳಲಾಗುತ್ತದೆ. ಹಾಗಂತ ಮೂರೂ ಪರೀಕ್ಷೆ ಬರೆಯವುದು ಕಡ್ಡಾಯವಲ್ಲ. ಯಾವ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆಯುತ್ತಾರೆ ಅದನ್ನು ಮಾತ್ರ ಪರಿಗಣನೆ ತೆಗೆದುಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

 

2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ  20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-2 ಅನ್ನು ಹಾಗೂ ಎಸ್ ಎಸ್ಎಲ್​ಸಿ ಪರೀಕ್ಷೆ-2 ಅನ್ನು ಎಪ್ರಿಲ್ ಕೊನೆಯ ವಾರದಲ್ಲಿ ನಡೆಸುತ್ತೇವೆ ಎಂದರು.

Advertisement
Tags :
announcedbengaluruchitradurgadateExamPUCSslcsuddionesuddione newsಚಿತ್ರದುರ್ಗದಿನಾಂಕಪರೀಕ್ಷೆಪ್ರಕಟಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article