ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?
ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ ಶಿಕ್ಷಣ ಇಲಾಖೆ ನಡೆಸಿರುವ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶದ ದಿನಾಂಕ ಹತ್ತಿರವಾಗಿದೆ.
ಮೂಲಗಳ ಪ್ರಕಾರ ಮೇ8ರಂದು ಪರೀಕ್ಷೆಯ ಫಲಿತಾಂಶ ಪ್ರಜಟವಾಗಲಿದೆ ಎನ್ನಲಾಗಿದೆ. ಈಗಾಗಲೇ ಉತ್ತರ ಪತ್ರಿಕೆಯ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದೆ. ಕ್ರೂಢೀಕರಣದ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಹೀಗಾಗಿ ಮೇ 8ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ. ಕಂಪ್ಯೂಟರ್ ಕೆಲಸದಲ್ಲಿ ವಿಳಂಬವಾದರೆ ಮಾತ್ರ ಫಲಿತಾಂಶದಲ್ಲೂ ವಿಳಂಬ ಸಾಧ್ಯತೆ ಇದೆ.
ಈ ಬಾರಿ 4.41 ಲಕ್ಷ ಬಾಲಕರು ಹಾಗೂ 4.28 ಲಕ್ಷ ಬಾಲಕಿಯರು ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಬರೆದಿದ್ದಾರೆ. ಅದರ ಜೊತೆಗೆ 18,225 ಖಾಸಗಿ ವಿದ್ಯಾರ್ಥಿಗಳು, 41,375 ವಿದ್ಯಾರ್ಥಿಗಳು ರೀ ಎಕ್ಸಾಮ್ ಬರೆದಿದ್ದಾರೆ. ಇವರೆಲ್ಲರೂ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಫಲಿತಾಂಶ ಬಂದ ದಿನ kseab.Karnataka.gov.in ವೆಬ್ಸೈಟ್ ನಲ್ಲು ಫಲಿತಾಂಶವನ್ನು ನೋಡಬಹುದು. ಫೇಲ್ ಆದ ವಿದ್ಯಾರ್ಥಿಗಳು ಭಯ ಪಡುವ ಅಗತ್ಯವಿಲ್ಲ. ಯಾಕಂದ್ರೆ ಈ ಬಾರಿ ಮೂರು ಬಾರಿ ಪರೀಕ್ಷೆ ಬರೆಯುವುದಕ್ಕೆ ಅವಕಾಶ ನೀಡಲಾಗಿದೆ. ಹೀಗಾಗಿ ಎಸ್ಎಸ್ಎಲ್ಸಿ ಫಲಿತಾಂಶ ನೋಡುವ ವಿದ್ಯಾರ್ಥಿಗಳೆಲ್ಲ ಆತ್ಮಸ್ಥೈರ್ಯದಿಂದ ಇರಬೇಕಾಗಿದೆ.