Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಲೋಕಸಭೆಯಲ್ಲಿ ಬರ ಪರಿಸ್ಥಿತಿ ಬಗ್ಗೆ ಧ್ವನಿ ಎತ್ತಿದ ಸುಮಲತಾ

04:09 PM Dec 12, 2023 IST | suddionenews
Advertisement

 

Advertisement

ನವದೆಹಲಿ: ರಾಜ್ಯದಲ್ಲಿ ಮುಂಗಾರು ಮಳೆ ಕೈ ಕೊಟ್ಟ ಹಿನ್ನೆಲೆ ರಾಜ್ಯಾದ್ಯಂತ ಬರ ತಾಂಡವವಾಡುತ್ತಿದೆ. ಬರದ ಬಗ್ಗೆ ಕೇಂದ್ರಕ್ಕೆ ಮನವಿ ಸಲ್ಲಿಸಿದರೂ ಸಹ ಯಾವುದೇ ರೀತಿಯ ಪರಿಹಾರ ಸಿಕ್ಕಿಲ್ಲ. ರೈತರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಕೇಂದ್ರಕ್ಕೆ ಮನವಿ ಮಾಡುವ ಅನಿವಾರ್ಯತೆ ಇತ್ತು.

ಇಂದು ಲೋಕಸಭೆಯಲ್ಲಿ ಸಂಸದೆ ಸುಮಲತಾ ಬರ ಪರಿಸ್ಥಿತಿ ಬಗ್ಗೆ ಮಾತನಾಡಿದ್ದಾರೆ. ಪ್ರಧಾನಿ ಮೋದಿಯವರ ಗಮನ ಸೆಳೆಯುವುದರತ್ತ ಪ್ರಯತ್ನ ಮಾಡಿದ್ದರು. 2023ರಲ್ಲಿ ಇಂದೆಂದೂ ಕಾಣದ ಉಷ್ಣತೆ ಹೆಚ್ಚಾಗಿದೆ. ಇದರ ಪರಿಣಾಮ ಕರ್ನಾಟಕದಲ್ಲಿ ಮಾನ್ಸೂನ್ ಕ್ಷೀಣಿಸಿದೆ. ಇದರ ಪರಿಣಾಮ ರಾಜ್ಯದ 223 ತಾಲೂಕುಗಳು ಬರ ಪೀಡಿತವಾಗಿವೆ. ಅಂದಾಜು 30 ಸಾವಿರ ಕೋಟಿ‌ ರೂಪಾಯಿಯಷ್ಟು ನಷ್ಟವಾಗಿದೆ. ಹೀಗಾಗಿ ಕರ್ನಾಟಕದ ರೈತರಿಗೆ ನೆರವಾಗಬೇಕು. ಮಂಡ್ಯದ ಎಲ್ಲಾ ತಾಲೂಕುಗಳನ್ನು ಬರ ಪೀಡಿತವಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. 60ರಿಂದ 70 ಪರ್ಸೆಂಟ್ ಬೆಳೆ ನಾಶವಾಗಿದೆ. ಕಬ್ಬು ಬೆಳೆಗಾರರಿಗೆ ಬೆಳೆ ವಿಮೆ ಲಭ್ಯವಾಗಿಲ್ಲ. ಇದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟದ ರೈತರ ನೆರವಿಗೆ ಧಾವಿಸಬೇಕು ಎಂದು ಮನವಿ ಮಾಡಿದ್ದರು.

Advertisement

ಬರದ ಬಗ್ಗೆ ಧ್ವನಿ ಎತ್ತಿದವರಲ್ಲಿ ಸುಮಲತಾ ಮೊದಲಿಗರು. ಆದರೆ ಬಿಜೆಪಿಯ ಇನ್ನೊಬ್ಬ ಸಂಸದ ಇದೇ ಶೂನ್ಯವೇಳೆಯಲ್ಲಿ ಜಾತಿ ಮೀಸಲಾತಿ ಬಗ್ಗೆ ಚರ್ಚೆ ನಡೆಸಿದ್ದಾರೆ. ಕಲಬುರಗಿ ಬಿಜೆಪಿ ಸಂಸದ ಜಾತಿ ಮೀಸಲಾತಿ ಬಗ್ಗೆ ಮಾತನಾಡಿದ್ದಾರೆ. ಲೋಕಸಭೆಯ ಶೂನ್ಯವೇಳೆಯಲ್ಲಿ ವೇಳೆಯಲ್ಲಿ ಮಾತನಾಡಿದ ಉಮೇಶ್ ಜಾಧವ್, ಕೋಲಿ, ಕಬ್ಬಲಿಗ, ಗಂಗಾಮತಸ್ಥ ಸಮುದಾಯವನ್ನು ಎಸ್​ಟಿಗೆ ಸೇರಿಸಬೇಕೆಂದು ಮನವಿ ಮಾಡಿದರು.

Advertisement
Tags :
drought situationfeaturedlok sabhaNewdelhisuddioneSumalathaಜಾತಿ ಸಮಸ್ಯೆನವದೆಹಲಿಬರ ಪರಿಸ್ಥಿತಿಲೋಕಸಭೆಸುದ್ದಿಒನ್ಸುಮಲತಾ
Advertisement
Next Article