ಬಳ್ಳಾರಿ ಪ್ರವೇಶಿಸಲು ಜನಾರ್ದನ ರೆಡ್ಡಿಗೆ ಅನುಮತಿ ನೀಡಿದ ಸುಪ್ರೀಂ ಕೋರ್ಟ್..!
ನವದೆಹಲಿ: ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಇಷ್ಟು ವರ್ಷ ಬಳ್ಳಾರಿ ಪ್ತವೇಶ ಮಾಡುವುದಕ್ಕೆ ಅನುಮತಿ ಇರಲಿಲ್ಲ. ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲೂ ಬಳ್ಳಾರಿಗೆ ಹೋಗುವಂತೆ ಇರಲಿಲ್ಲ. ಇದಿಒಗ ಸುಪ್ರೀಂ ಕೋರ್ಟ್ ನಿಂದ ಮಹತ್ವದ ಆದೇಶ ಬಂದಿದ್ದು, ಜನಾರ್ದನ ರೆಡ್ಡಿ ಅವರು ಬಳ್ಳಾರಿಗೆ ಹೋಗಲು ಅನುಮತಿ ನೀಡಲಾಗಿದೆ.
ಈ ಹಿಂದೆ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಜೈಲು ಪಾಲಾಗಿದ್ದರು. ನಂತರ ಈ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿ ಜನಾರ್ದನ ರೆಡ್ಡಿ ಅವರಿಗೆ 2015ರಲ್ಲಿ ಷರತ್ತು ಬದ್ಧ ಜಾಮೀನು ನೀಡಲಾಗಿತ್ತು. ಆದರೆ ಬಳ್ಳಾರಿ, ಕಡಪ, ಅನಂತಪುರಕ್ಕೆ ತೆರಳಲು ಪೂರ್ವಾನುಮತಿ ಪಡೆಯಬೇಕಿತ್ತು. ಕೆಲವೊಂದು ಸಲ ಆ ಪೂರ್ವಾನುಮತಿ ಪಡೆದು ಬಳ್ಳಾರಿಗೆ ಹೋಗುತ್ತಿದ್ದರು. ಇದೀಗ ಸುಪ್ರೀಂ ಕೋರ್ಟ್ ನಿಂದ ಅನುಮತಿ ಸಿಕ್ಕಿದ್ದು, ಯಾವುದೇ ಪೂರ್ವಾನುಮತಿ ಇಲ್ಲದೆ ಬಳ್ಳಾರಿಯನ್ನು ಪ್ರವೇಶ ಮಾಡಬಹುದಾಗಿದೆ.
ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮದೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಮೂಲಕವೇ ಚುನಾವಣೆಗೆ ನಿಂತಿದ್ದರು. ಗಂಗಾವತಿ ಕ್ಷೇತ್ರದಿಂದ ಗೆದ್ದು ಬೀಗಿದ್ದರು. ಪಕ್ಷದಿಂದ ಸ್ಪರ್ಧೆ ಮಾಡಿದ್ದ ಬೇರೆ ಅಭ್ಯರ್ಥಿಗಳು ಸೋಲು ಕಂಡಿದ್ದರು. ಆ ಬಳಿಕ ಲೋಕಸಭಾ ಚುನಾವಣೆಗೂ ಮುನ್ನವೇ ಬಿಜೆಪಿ ಸೇರಿದರು. ತಮ್ಮ ಪಕ್ಷವನ್ನು ಯಾವುದೇ ಷರತ್ತುಗಳು ಇಲ್ಲದೆ ಬಿಜೆಪಿ ಜೊತೆಗೆ ವಿಲೀನ ಮಾಡಿದರು. ಈಗ ಬಿಜೆಪಿ ಜೊತೆಗೆ ಓಡಾಡುತ್ತಿದ್ದಾರೆ. ಇದರ ನಡುವೆ ಸುಪ್ರೀಂ ಕೋರ್ಟ್ ನಿಂದ ಬಳ್ಳಾರಿ ಪ್ರವೇಶಕ್ಕೆ ಅನುಮತಿ ಸಿಕ್ಕಿರುವುದು ಜನಾರ್ದನ ರೆಡ್ಡಿ ಅವರು ಫುಲ್ ಖುಷಿಯಾಗಿದ್ದಾರೆ.