Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಸಂತ್ರಸ್ತನ ವಿರುದ್ಧವೇ ದೂರು ದಾಖಲಿಸಿ ಸೂರಜ್ ರೇವಣ್ಣ..!

02:08 PM Jun 22, 2024 IST | suddionenews
Advertisement

ಬೆಂಗಳೂರು: ಮಾಜಿ ಸಚಿವ ಹೆಚ್.ರೇವಣ್ಣ ಕುಟುಂಬದಲ್ಲಿ ಮತ್ತೊಂದು ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿದೆ. ಸೂರಜ್ ರೇವಣ್ಣ ಅವರ ವಿರುದ್ಧ ಅಸಹಜ ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿದ್ದು, ತಮ್ಮದೇ ಜೆಡಿಎಸ್ ಕಾರ್ಯಕರ್ತನ ಮೇಲೆ ದೌರ್ಜನ್ಯವೆಸಗಿರುವ ಆರೋಪ ಕೇಳಿ ಬಂದಿದೆ. 

Advertisement

 

 

Advertisement

ಹಾಸನದ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತ ಈ ಸಂಬಂಧ ಬೆಂಗಳೂರಿನ ಡಿಸಿ ಕಚೇರಿಗೆ ಬಂದು ದೂರು ನೀಡಿದ್ದಾರೆ. ಜೂನ್ 16ರ ಸಂಜೆ ನನ್ನ ಮೇಲೆ ಬಲವಂತವಾಗಿ ಅಸಹಜ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಅಷ್ಟೇ ಅಲ್ಲ ತೋಟದ ಮನೆಗೆ ಕರೆಸಿಕೊಂಡು, ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದ್ದನ್ನು ಯಾರ ಬಳಿಯಾದರೂ ಹೇಳಿದರೆ ಕೊಲ್ಲುವುದಾಗಿಯೂ ತಿಳಿಸಿದ್ದಾರಂತೆ. ಹೀಗಾಗಿ ಬೆಂಗಳೂರಿನ ಡಿಸಿ ಕಚೇರಿಗೆ ಬಂದು ದೂರು ನೀಡಿದ್ದೇನೆ ಎಂದಿದ್ದಾರೆ. ಜೊತೆಗೆ ಎರಡು ಕೋಟಿ ಹಣ ಕೊಡುವ ಆಮಿಷ ಒಡ್ಡಿದ್ದಾರಂತೆ.

 

 

ಇನ್ನು ಈ ಕೇಸ್ ದಾಖಲಾಗುತ್ತಿದ್ದಂತರ ಸೂರಜ್ ರೇವಣ್ಣ ಕೂಡ ಪ್ರತಿ ದೂರು ನಿಡೀದ್ದಾರೆ. ಸಂತ್ರಸ್ತನ ವಿರುದ್ಧವೇ ಪ್ರತಿ ದೂರು ನೀಡಿದ್ದು, ಐದು ಕೋಟಿಗೆ ಡಿಮ್ಯಾಂಡ್ ಇಟ್ಟಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಸಂತ್ರಸ್ತ ಬ್ಲಾಕ್ ಮೇಲ್ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಹಣಕ್ಕಾಗಿ ಡಿಮ್ಯಾಂಡ್ ಇಟ್ಟಿರುವುದಲ್ಲದೆ, ಕುಟುಂಬದ ಮರ್ಯಾದೆ ಹಾಳು ಮಾಡುವುದಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದಾನೆಂದು ಆರೋಪಿಸಿದ್ದಾರೆ.

 

 

ನೀನು ಕೆಲಸ ಕೊಡಿಸಲ್ಲ, ನಿಮ್ಮ ಬಾಸೂ ಕೆಲಸ ಕೊಡಿಸುತ್ತಿಲ್ಲ ಅಂತ ಸೂರಕ್ ಆಪ್ತ ಶಿವಕುನಾರ್ ಮೂಲಕ ಬೆದರಿಕೆ ಹಾಕಿದ್ದಾರೆಂದು ಆರೋಪಿಸಲಾಗಿದೆ. ನಾನು ಬೆಂಗಳೂರಿಗೆ ಹೋಗಿ ಮಾಧ್ಯಮದ ಮುಂದೆ ಹೋಗುತ್ತೇನೆ, ಸೂರಜ್ ರೇವಣ್ಣರ ಮರ್ಯಾದೆ ಹಾಳು ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆಂದು ಪ್ರತಿ ದೂರಿನಲ್ಲಿ ತಿಳಿಸಿದ್ದಾರೆ.

Advertisement
Tags :
against the victimfiled a complaintsuraj revannaಸೂರಜ್ ರೇವಣ್ಣ
Advertisement
Next Article