ಅಕ್ರಮ ಎಸಗಿದ 32 ಪಿಡಿಓಗಳ ಅಮಾನತು..!
ರಾಯಚೂರು: ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸಾಕಷ್ಟು ಪಿಡಿಓಗಳು ಬಡವರಿಗೆ ಅನ್ಯಾಯ ಮಾಡುತ್ತಾರೆ. ಆದರೆ ಅದು ಬೆಳಕಿಗೆ ಬರುವುದು ಕಡಿಮೆ. ಇದೀಗ ರಾಯಚೂರು ಜಿಲ್ಲಾ ಪಂಚಾಯತ್ ಸಿಇಓ ಈ ವಿಚಾರದಲ್ಲಿ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ. ಅಕ್ರಮ ಎಸಗಿದ 32 ಪಿಡಿಓಗಳ ಅಮಾನತು ಮಾಡಿದ್ದಾರೆ.
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ 32 ಗ್ರಾಮ ಪಂಚಾಯತ್ ಗಳಲ್ಲಿ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತು. 2020-21 ಹಾಗೂ 2022 ಸಾಲಿನಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಹಣದ ಅವ್ಯವಹಾರ ಬೆಳಕಿಗೆ ಬಂದಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಒಂಚಾಯತ್ ಸಿಇಓ ರಾಹುಲ್ ತುಕಾರಾಂ ಪಾಂಡ್ವೆ, ಪಿಡಿಓಗಳನ್ನು ಅಮಾನತು ಮಾಡಿದ್ದಾರೆ.
27 ಗ್ರಾಮ ಪಂಚಾಯತಿಗಳ ಪಿಡಿಓಗಳನ್ನು ಸೇವೆಯಿಂದ ಅಮಾನತು ಮಾಡಿದ್ದು, ಬೇರೆ ಜಿಲ್ಲೆಗೆ ವರ್ಗಾವಣೆಗೊಂಡ ಐವರನ್ನು ಸೇವೆಯಿಂದ ವಜಾಗೊಳಿಸುವಂತೆ ಆದೇಶ ಹೊರಡಿಸಿದ್ದಾರೆ. ಆರೋಪ ಕೇಳಿ ಬಂದ ಹಿನ್ನೆಲೆ ದೇವದುರ್ಗದ 32 ಗ್ರಾಮ ಪಂಚಾಯತ್ ಗಳನ್ನು ವಿಶೇಷ ಸಾಮಾಜಿಕ ಪರಿ ಶೋಧನೆಗೆ ಒಳಪಡಿಸಲಾಗಿತ್ತು. ಮಧ್ಯಂತರ ವರಿದಿಯಲ್ಲಿ ಕರ್ತವ್ಯಲೋಪ ಮತ್ತು ಹಣದ ದುರುಪಯೋಗ ನಡೆದಿರುವುದು ಕಂಡು ಬಂದಿತ್ತು. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಾಂಚಾಯತ್ ರಾಜ್ ಇಲಾಖೆ ಅಕ್ರಮದಲ್ಲಿ ಭಾಗಿಯಾಗಿದ್ದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಮನತೆ ನಿರ್ದೇಶನ ನೀಡಲಾಗಿತ್ತು. ಇದೀಗ 32 ಪಿಡಿಓಗಳ ಅಮಾನತು ಮಾಡಿ, ಸಿಇಓ ಆದೇಶ ಹೊರಡಿಸಿದ್ದಾರೆ.