For the best experience, open
https://m.suddione.com
on your mobile browser.
Advertisement

ರಾಹುಲ್ ಗಾಂಧಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ : ದೆಹಲಿ ಹೈಕೋರ್ಟ್ ಮಹತ್ವದ ಆದೇಶ

10:12 PM Dec 21, 2023 IST | suddionenews
ರಾಹುಲ್ ಗಾಂಧಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ   ದೆಹಲಿ ಹೈಕೋರ್ಟ್ ಮಹತ್ವದ ಆದೇಶ
Advertisement

Advertisement

ಸುದ್ದಿಒನ್, ನವದೆಹಲಿ , ಡಿಸೆಂಬರ್.21 : ಕಾಂಗ್ರೆಸ್ ಪಕ್ಷದ ಯುವ ಮುಖಂಡ ವಯನಾಡ್ ಸಂಸದ ರಾಹುಲ್ ಗಾಂಧಿಗೆ ದೆಹಲಿ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಖ್ಯಾತ ಉದ್ಯಮಿ ಗೌತಮ್ ಅದಾನಿ ಅವರನ್ನು 'ಪಿಕ್ ಪಾಕೆಟರ್ಸ್' ಎಂದು ಟೀಕಿಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಕಳೆದ ಕೆಲವು ತಿಂಗಳುಗಳಿಂದ ಈ ಅರ್ಜಿಯ ಮೇಲೆ ವಾದ-ಪ್ರತಿವಾದಗಳು ನಡೆಯುತ್ತಿವೆ. ಆದರೆ ಇಂದು ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ. ಇಂತಹ ತಪ್ಪು ಹೇಳಿಕೆಗಾಗಿ ರಾಹುಲ್ ಗಾಂಧಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ದೆಹಲಿ ಹೈಕೋರ್ಟ್ ಆದೇಶಿಸಿದೆ.

Advertisement

ಕಾಂಗ್ರೆಸ್ ಸಂಸದ ರಾಹುಲ್ ಪರವಾಗಿ ವಕೀಲರು ವಿವಿಧ ರೀತಿಯ ವಾದ ಮಂಡಿಸಿದರು. ಆದರೆ, ನ್ಯಾಯ ಪೀಠವು ಅವರ ವಾದವನ್ನು ಒಪ್ಪಲಿಲ್ಲ ಮತ್ತು ರಾಹುಲ್ ಅವರ ಹೇಳಿಕೆಗಳು ಸರಿಯಲ್ಲ ಎಂದು ಹೇಳಿತು. ನವೆಂಬರ್ 22 ರಂದು ರಾಜಕೀಯ ಪ್ರಚಾರದ ವೇಳೆ ಪ್ರಮುಖ ಕೈಗಾರಿಕೋದ್ಯಮಿಗಳು ಮತ್ತು ರಾಜಕೀಯ ನಾಯಕರ ಮೇಲೆ ರಾಹುಲ್ ಅನುಚಿತ ಹೇಳಿಕೆಯನ್ನು ನೀಡಿದ್ದರು. ಈ ಕುರಿತು ವಿವರಣೆ ನೀಡುವಂತೆ ಕೇಂದ್ರ ಚುನಾವಣಾ ಆಯೋಗ ನವೆಂಬರ್ 23 ರಂದು ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಆದರೆ ಈ ಬಗ್ಗೆ ರಾಹುಲ್ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ.

Tags :
Advertisement