ಜುಲೈ 12ಕ್ಕೆ ವಿಧಾನಪರಿಷತ್ ಗೆ ನಡೆಯಲಿದೆ ಉಪಚುನಾವಣೆ..!
ಬೆಂಗಳೂರು: ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ತೆರವಾದ ವಿಧಾನಪರಿಷತ್ ಸ್ಥಾನಕ್ಕೂ ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಲಾಗಿದೆ. ಮರಳಿ ಬಿಜೆಪಿಗೆ ಹೋದಂತ ಜಗದೀಶ್ ಶೆಟ್ಟರ್ ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಹೀಗಾಗಿ ತೆರವಾಗಿದ್ದಂತ ವಿಧಾನಪರಿಷತ್ ಉಪ ಚುನಾವಣೆಗೆ ದಿನಾಂಕ ನಿಗಧಿಯಾಗಿದೆ. ಕರ್ನಾಟಕದ ಒಂದು ವಿಧಾನಪರಿಷತ್ ಚುನಾವಣೆ ಸೇರಿದಂತೆ ಮೂರು ರಾಜ್ಯಗಳಲ್ಲಿ ತೆರವಾದಂತ ಕ್ಷೇತ್ರಗಳಿಗೆ ದಿನಾಂಕ ಘೋಷಣೆ ಮಾಡಲಾಗಿದೆ.
ವಿಧಾನಸಭೆಯಿಂದ ವಿಧಾನಪರಿಷತ್ ಗೆ ಆಯ್ಕೆ ಮಾಡಲು ನಡೆಯುವಂತ ಚುನಾವಣೆ ಇದಾಗಿದೆ. ಕರ್ನಾಟಕ, ಬಿಹಾರ, ಉತ್ತರ ಪ್ರದೇಶ ಹಾಗೂ ಆಂಧ್ರಪ್ರದೇಶದಲ್ಲಿ ಉಪಚುನಾವಣೆ ನಡೆಯಲಿದ್ದು, ಜುಲೈ 22 ರಂದು ಉಪಚುನಾವಣೆಗೆ ದಿನಾಂಕ ನಿಗಧಿ ಮಾಡಲಾಗಿದೆ. ಜುಲೈ 2 ನಾಮಪತ್ರ ಸಲ್ಲಿಕೆ ಮಾಡಲು ಕಡೆಯ ದಿನವಾಗಿದ್ದು, ಜುಲೈ 3 ನಾಮಪತ್ರ ಪರಿಶೀಲನೆ ನಡೆಯಲಿದೆ. ಜುಲೈ 5 ಕ್ಕೆ ನಾಮಪತ್ರ ವಾಪಸ್ ಪಡೆಯಲು ಕಡೆಯ ದಿನಾಂಕವಾಗಿದೆ. ಕರ್ನಾಟಕದ ವಿಧಾನಸಭೆಯ ಮತದಾರರು ಈ ಚುನಾವಣೆಯಲ್ಲಿ ಮತದಾನ ಮಾಡಲಿದ್ದು, ವಿಧಾನಸೌಧದಲ್ಲಿಯೇ ಮತದಾನದ ನಡೆಯಲಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಬಿಜೆಪಿಯಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ಗೆ ಬಂದರು. ಅಲ್ಲಿ ಟಿಎಕಟ್ ಪಡೆದರು ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡರು. ಆದರೂ ಕಾಂಗ್ರೆಸ್ ಹಿರಿಯ ನಾಯಕನಿಗೆ ಗೌರವ ಕೊಡಬೇಕೆಂಬ ಕಾರಣಕ್ಕೆ ಜಗದೀಶ್ ಶೆಟ್ಟರ್ ಅವರಿಗೆ ವಿಧಾನಪರಿಷತ್ ಸದಸ್ಯ ಸ್ಥಾನ ನೀಡಿತ್ತು. ಲೋಕಸಭಾ ಚುನಾವಣೆ ಬರುತ್ತಿದ್ದಂತೆ ಕಾಂಗ್ರೆಸ್ ನಿಂದ ಹಾರಿ ಮತ್ತೆ ಬಿಜೆಪಿಗೆ ಹೋದರು. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ, ಗೆದ್ದುರು. ಇದೀಗ ಆ ತೆರವಾಗಿರುವ ವಿಧಾನಪರಿಷತ್ ಹುದ್ದೆಗೆ ಉಪಚುನಾವಣೆ ಘೋಷಣೆಯಾಗಿದೆ. ಈಗಾಗಲೇ ಆಡಳಿತ ಪಕ್ಷ ಕಾಂಗ್ರೆಸ್ ಈ ಸ್ಥಾನಕ್ಕೆ ಬಸನಗೌಡ ಬಾದರ್ಲಿ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಇನ್ನು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ಯಾರಾಗ್ತಾರೆ ಎಂಬ ಕುತೂಹಲವಿದೆ.