Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರದ ನೀಟ್ ಪರೀಕ್ಷೆ ರದ್ದು..!

02:55 PM Jul 25, 2024 IST | suddionenews
Advertisement

 

Advertisement

ಬೆಂಗಳೂರು: ಕೇಂದ್ರ ಸರ್ಕಾರ ಆಯೋಜನೆ ಮಾಡುವ ನೀಟ್ ಪರೀಕ್ಷೆ ರದ್ದತಿಯ ಬಗ್ಗೆ ಇಂದು ವಿಧಾನಮಂಡಲ ಅಧಿವೇಶನದಲ್ಲಿ ಅನುಮೋದನೆ ಪಡೆದಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಯನ್ನು ಪಡೆಯಲಾಗಿತ್ತು. ಇದೀಗ ಅಧಿವೇಶನದಲ್ಲಿ ರಾಜ್ಯ ಸರ್ಕಾರ ನಿರ್ಣಯ ಮಂಡಿಸಿ ಅನುಮೋದನೆ ಪಡೆದಿದೆ.

ಕೇಂದ್ರ ಸರ್ಕಾರದ ನೀಟ್ ಪರೀಕ್ಷೆ ಹಾಗೂ ಒಂದು ದೇಶ ಒಂದು ಎಲೆಕ್ಷನ್ ತೀರ್ಮಾನಗಳನ್ನು ವಿರೋಧಿಸಲು ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಯ್ತು. ವಿಧಾನಸಭೆಯಲ್ಲಿ ಸಚಿವ ಶರಣು ಪ್ರಕಾಶ್ ಪಾಟೀಲ್ ಅವರು ನೀಟ್ ರದ್ದು ನಿರ್ಣಯ ಮಂಡನೆ ಮಾಡಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಇದನ್ನು ಮಂಡಿಸಿದರು. ಒಮ್ ಮೇಷನ್ ಒನ್ ಎಲೆಕ್ಷನ್ ನಿರ್ಣಯವನ್ನು ವೊಧಾನ ಪರಿಷತ್ ನಲ್ಲಿ ಸಚಿವ ಹೆಚ್ ಕೆ ಪಾಟೀಲ್ ಮಂಡನೆ ಮಾಡಿದರು. ಎರಡು ಕಡೆಯಲ್ಲೂ ನೀಟ್ ಹಾಗೂ ಒನ್ ನೇಷನ್, ಒನ್ ಎಲೆಕ್ಷನ್ ಅನುಮೋದನೆ ಸಿಕ್ಕಿದೆ.

Advertisement

ಒನ್ ನೇಷನ್, ಒನ್ ಎಲೆಕ್ಷನ್ ವಿರುದ್ಧವಾಗಿ ವಿಧಾನಪರಿಷತ್‌ನಲ್ಲಿ ನಿರ್ಣಯ ಮಂಡನೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಈ ರೀತಿಯ ಚುನಾವಣೆಗೆ ನಮ್ಮ ವಿರೋಧ ಇದೆ. ಒಂದು ದೇಶ, ಒಂದು ಚುನಾವಣೆಯಿಂದ ಪ್ರಜಾಪ್ರಭುತ್ವಕ್ಕೆ ಮಾರಕ. ಏಕರೂಪ ಚುನಾವಣೆ ರಾಷ್ಟ್ರೀಯವಾಗಿ ಸಮಸ್ಯೆ ಆಗಲಿದೆ. ಸ್ಥಳೀಯವಾಗಿ ಹಲವು ತಾಂತ್ರಿಕ ಸಮಸ್ಯೆ ಆಗಲಿದೆ. ಇದನ್ನು ಅನುಷ್ಠಾನ ಮಾಡಬಾರದು ಅಂತ‌ ಕೇಂದ್ರದ ಮೇಲೆ ಒತ್ತಡ ಹಾಕಬೇಕು ಅಂತ ಸದಸ್ಯರಿಗೆ ಮನವಿ ಮಾಡಿದರು.

Advertisement
Tags :
Assemblybengalurucanceledchitradurganeet examsuddionesuddione newsThe central governmentಕೇಂದ್ರ ಸರ್ಕಾರಚಿತ್ರದುರ್ಗನೀಟ್ಪರೀಕ್ಷೆಬೆಂಗಳೂರುರದ್ದುವಿಧಾನಸಭೆಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article