Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಸಚಿವ ಸಂಪುಟದಲ್ಲಿ ರಾಜ್ಯಪಾಲರ ವಿರುದ್ಧ ಖಂಡನಾ ನಿರ್ಣಯಕ್ಕೆ ನಿರ್ಧಾರ..!

11:59 AM Aug 22, 2024 IST | suddionenews
Advertisement

 

Advertisement

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಸಭೆಯಲ್ಲಿ ರಾಜ್ಯಪಾಲರ ವಿರುದ್ಧ ಖಂಡನಾ ನಿರ್ಣಯ ಕೈಗೊಳ್ಳುವ ನಿರ್ಧಾರ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ದೂರು ಬಂದ ಕೂಡಲೇ ನೋಟೀಸ್ ನೀಡಿ, ಪ್ರಾಸಿಕ್ಯೂಷನ್ ಅನುಮತಿ ನೀಡಿದ ರಾಜ್ಯಪಾಲರು, ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡದೆ ಇರುವುದಕ್ಕೆ ಕಾಂಗ್ರೆಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸರ್ಕಾರ ಖಂಡನಾ ನಿರ್ಣಯ ಕೈಗೊಳ್ಳಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕುಮಾರಸ್ವಾಮಿ, ನಿರಾಣಿ, ಜೊಲ್ಲೆ‌ ಹಾಗೂ ಜನಾರ್ಧನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದ ವಿಚಾರವಾಗಿ ಇಂದು ಖಂಡನಾ ನಿರ್ಣಯ ಕೈಗೊಳ್ಳಲಿದ್ದಾರೆ. ತನಿಖಾ ಸಂಸ್ಥೆಗಳು ಮನವಿ ಮಾಡಿದ್ದರು. ಇನ್ನು ಯಾವುದೇ ರೀತಿಯ ಅನುಮತಿಯನ್ನು ನೀಡಿಲ್ಲ. ತಾರತಮ್ಯ ಮಾಡುತ್ತಿದ್ದಾರೆ ಎಂದು ಖಂಡನಾ ನಿರ್ಣಯಕ್ಕೆ ಮುಂದಾಗಿದ್ದಾರೆ.

Advertisement

ಕಳೆದ ವರ್ಷ ಕುಮಾರಸ್ವಾಮಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ಅನುಮತಿ ನೀಡುವಂತೆ ಲೋಕಾಯುಕ್ತರಿಂದ ಮನವಿ ಸಲ್ಲಿಸಲಾಗಿತ್ತು. ಆದರೆ ಈ ವಿಚಾರವಾಗಿ ಹತ್ತು ತಿಂಗಳಾದರೂ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿಲ್ಲ. ಈ ಸಂಬಂಧ ರಾಜ್ಯಪಾಲರು ತಾರತಮ್ಯ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಕಿಡಿಕಾರಿದೆ. ಕಳೆದ ಸಂಪುಟ ಸಭೆಯಲ್ಲೂ ರಾಜ್ಯಪಾಲರ ವಿರುದ್ಧ ನಿರ್ಣಯ ಕೈಗೊಂಡಿದ್ದರು. ಈ ಬಾರಿ ಸಂಪುಟದಲ್ಲೂ ಖಂಡನಾ ನಿರ್ಣಯ ಕೈಗೊಳ್ಳಲಿದ್ದಾರೆ. ರಾಜ್ಯಪಾಲರ ನಡೆಗೆ ಕಾಂಗ್ರೆಸ್ ಬೇಸರ ವ್ಯಕ್ತಪಡಿಸಿದೆ.

Advertisement
Tags :
bengalurucabinetchitradurgaGovernorsuddionesuddione newsಖಂಡನಾ ನಿರ್ಣಯಚಿತ್ರದುರ್ಗನಿರ್ಧಾರಬೆಂಗಳೂರುರಾಜ್ಯಪಾಲರುಸಚಿವ ಸಂಪುಟಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article