For the best experience, open
https://m.suddione.com
on your mobile browser.
Advertisement

ದೇಶದ ಎಲ್ಲಾ ಭಾಷೆಯಲ್ಲೂ ಪುಟ ತೆರೆಯಬೇಕಿತ್ತು, ಹಿಂದಿ ಮಾತ್ರ ಯಾಕೆ..? RCB ಪ್ರಾಂಚೈಸಿಗೆ ನಾರಾಯಣಗೌಡ್ರು ಪ್ರಶ್ನೆ

11:58 AM Nov 29, 2024 IST | suddionenews
ದೇಶದ ಎಲ್ಲಾ ಭಾಷೆಯಲ್ಲೂ ಪುಟ ತೆರೆಯಬೇಕಿತ್ತು  ಹಿಂದಿ ಮಾತ್ರ ಯಾಕೆ    rcb ಪ್ರಾಂಚೈಸಿಗೆ ನಾರಾಯಣಗೌಡ್ರು ಪ್ರಶ್ನೆ
Advertisement

ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೆಟ್ ಫ್ರಾಂಚೈಸಿ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿಯಲ್ಲಿ ಪುಟವನ್ನು ತೆರೆದಿದೆ ಇದಕ್ಕೆ ಕರವೇ ಅಧ್ಯಕ್ಷ ನಾರಾಯಣಗೌಡರು ಆಕ್ರೋಶ ಹೊರ ಹಾಕಿದ್ದಾರೆ.

Advertisement

ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿಯಲ್ಲಿ ಪುಟವನ್ನು ತೆರೆದಿದೆ. ಇದು ಯಾವ ಕಾರಣಕ್ಕೆ ಎಂದು ಅವರು ಸ್ಪಷ್ಟಪಡಿಸಬೇಕು. ಕನ್ನಡಿಗರ ಮೇಲೆ ಹಿಂದಿ ಗುಲಾಮಗಿರಿಯನ್ನು ಹೇರುವುದು ಅವರ ಉದ್ದೇಶವಾಗಿದ್ದರೆ ಕರ್ನಾಟಕ ಬಿಟ್ಟು ತೊಲಗಲಿ. ನಿಮ್ಮ ಅವಶ್ಯಕತೆ ನಮಗಿಲ್ಲ‌. ಆರ್ ಸಿಬಿಯನ್ನು ಕನ್ನಡಿಗರು ಮೊದಲಿನಿಂದಲೂ ಬೆಂಬಲಿಸಿಕೊಂಡು ಬಂದಿದ್ದಾರೆ. ಆರ್ ಸಿಬಿಗೆ ಇರುವಷ್ಟು ಅಭಿಮಾನಿಗಳು ಇನ್ಯಾವ ತಂಡಕ್ಕೂ ಇಲ್ಲ‌. ಹೀಗಾಗಿಯೇ ಅದರ ಆದಾಯ ವರ್ಷವರ್ಷಕ್ಕೂ ಹೆಚ್ಚುತ್ತಲೇ ಇದ್ದು, ಒಮ್ಮೆಯೂ ಕಪ್ ಗೆಲ್ಲದಿದ್ದರೂ ಮೂರನೇ ಶ್ರೀಮಂತ ತಂಡವಾಗಿದೆ. ಇದಕ್ಕೆ ಕಾರಣ ಕನ್ನಡಿಗರು ಎಂಬುದನ್ನು ಅದು ಮರೆತಿದೆ.

ಆರ್ ಸಿಬಿ ಹಿಂದಿಯಲ್ಲಿ ಪುಟವನ್ನು ತೆರೆಯುವ ಮೂಲಕ ಕನ್ನಡಿಗರನ್ನು ಅಪಮಾನಿಸುತ್ತಿದೆ. ತಂಡದಲ್ಲಿ ಇತರ ರಾಜ್ಯಗಳ ಆಟಗಾರರಿದ್ದಾರೆ ಎಂಬ ಕಾರಣಕ್ಕೆ, ಹೊರರಾಜ್ಯಗಳಲ್ಲೂ ಅಭಿಮಾನಿಗಳಿದ್ದಾರೆ ಎಂಬ ಕಾರಣಕ್ಕೆ ಹಿಂದಿಯಲ್ಲಿ ಪುಟ ತೆರೆದಿರುವುದಾದರೆ, ದೇಶದ ಎಲ್ಲ ಭಾಷೆಗಳಲ್ಲೂ ಪುಟ ತೆರೆಯಬೇಕಿತ್ತು. ಹಿಂದಿಯಲ್ಲಿ ಮಾತ್ರ ಯಾಕೆ ತೆರೆದರು?. ಆರ್ ಸಿಬಿ ಫ್ರಾಂಚೈಸಿ ನಡೆಸುತ್ತಿರುವವರಿಗೆ ಹಿಂದಿಯೇ ಅತಿಪ್ರಿಯವಾಗಿದ್ದರೆ ಹಿಂದಿ ರಾಜ್ಯಗಳಿಗೆ ವಲಸೆ ಹೋಗಲಿ, ಬೆಂಗಳೂರು ಎಂಬ ಹೆಸರನ್ನು ಕೈಬಿಡಲಿ. ಕನ್ನಡಿಗರ ಆದರ, ಆತಿಥ್ಯ, ಅಭಿಮಾನವನ್ನು ಗಳಿಸಿ ಕನ್ನಡಿಗರ ಬೆನ್ನಿಗೆ ಚೂರಿ ಇರಿಯುವ ಕೆಲಸವನ್ನೇಕೆ ಮಾಡುತ್ತಿದ್ದಾರೆ?

Advertisement
Advertisement

ಈ ಬಾರಿಯ ಹರಾಜು ಪ್ರಕ್ರಿಯೆಯಲ್ಲಿ ಆರ್ ಸಿಬಿ ಐದಾರು ಕನ್ನಡಿಗರನ್ನು ಖರೀದಿಸುವ ನಿರೀಕ್ಷೆ ಅಭಿಮಾನಿಗಳಿಗಿತ್ತು. ಕನ್ನಡಿಗ ಕೆ.ಎಲ್.ರಾಹುಲ್ ಅವರನ್ನು ಖರೀದಿಸಿ ನಾಯಕನನ್ನಾಗಿಸುವ ಅವಕಾಶವೂ ಆರ್ ಸಿಬಿಗೆ ಇತ್ತು. ಆದರೆ ಹಿತ್ತಲ ಗಿಡ ಮದ್ದಲ್ಲ ಎಂಬಂತೆ ಅವಕಾಶಗಳನ್ನು ಕೈಚೆಲ್ಲಲಾಯಿತು ಎಂದು ಸಾಲು ಸಾಲು ಟ್ವೀಟ್ ಮೂಲಕ ಆರ್ಸಿಬಿ ಫ್ರಾಂಚೈಸಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

Tags :
Advertisement